ಆತ್ಮವಿಶ್ವಾಸವಿದ್ದರೆ ಜೀವನದಲ್ಲಿ ಏನನ್ನಾದರೂ ಸಾಧಿಸಬಹುದು : ಶಂಕರಗೌಡ

0
8

ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ ಇಂತಹ ಪರೀಕ್ಷೆಗಳನ್ನು ಸಮರ್ಥವಾಗಿ ಎದುರಿಸಬಹುದು ಎಂದು ತಾಲೂಕ ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ಶಂಕರಗೌಡ ಬಮ್ಮಶೆಟ್ಟಿ ಹೇಳಿದರು.

ಅವರು ರಾವೂರ ಶ್ರೀ ಸಚ್ಚಿದಾನಂದ ಪ್ರೌಢ ಶಾಲೆಯಲ್ಲಿ ಹತ್ತನೇ ತರಗತಿಯ ಮಕ್ಕಳಿಗೆ ಹಮ್ಮಿಕೊಂಡಿದ್ದ ಹತ್ತನೇ ಪರೀಕ್ಷೆಗೆ ಸಿದ್ಧತೆ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.

Contact Your\'s Advertisement; 9902492681

ಈಗಿನಿಂದಲೇ ಒಂದೊಂದು ಗುರಿಯನ್ನು ಇಟ್ಟುಕೊಂಡು ಸತತ ಅಭ್ಯಾಸದ ಕಡೆಗೆ ಗಮನಕೊಟ್ಟು, ಆಲಸ್ಯವನ್ನು ಬಿಟ್ಟು, ಸಮಯ ಪಾಲನೆ ಕಡೆಗೆ ಗಮನ ಹರಿಸಿ ಆತ್ಮವಿಶ್ವಾಸದಿಂದ ಪರೀಕ್ಷೆ ಎದುರಿಸಿದರೆ ಖಂಡಿತ ಉತ್ತಮ ಫಲಿತಾಂಶ ನಿಮ್ಮದಾಗುತ್ತದೆ.ಮೊಬೈಲ್ ಬಳಸಬಾರದು, ಶಾಲೆಗೆ ಚಕ್ಕರ್ ಹಾಕಬಾರದು, ಶಿಕ್ಷಕರು ಹೇಳಿದ ಕೆಲಸವನ್ನು ಅತ್ಯಂತ ಪ್ರಾಮಾಣಿಕವಾಗಿ ಶೃದ್ದೆಯಿಂದ ಮಾಡಿದಾಗ ಮಾತ್ರ ಉತ್ತಮ ಫಲಿತಾಂಶ ಪಡೆಯಬಹುದು ಎಂದು ಕಿವಿಮಾತು ಹೇಳುದರು.

ಇದರ ಜೊತೆಗೆ ಹತ್ತನೇ ತರಗತಿಗೆ ಸಮಾಜ ವಿಜ್ಞಾನ ವಿಷಯದ ಪಠ್ಯಕ್ಕೆ ಪೂರಕವಾಗಿ ಭೂಭಳಕೆ ಹಾಗೂ ಕೃಷಿ ಪಾಠಕ್ಕೆ ಸಂಬಂಧಿಸಿದಂತೆ ಕೃಷಿ ಹಾಗೂ ತೋಟಗಾರಿಕೆ ಮಹತ್ವ ಕುರಿತಿ ಉಪಯುಕ್ತ ಮಾಹಿತಿಯನ್ನು ನೀಡಿದರು. ಮಕ್ಕಳು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದರು.

ಈ ಸಂದರ್ಭದಲ್ಲಿ ಶಿಕ್ಷಕ ಸಿದ್ದಲಿಂಗ ಬಾಳಿ ಹಾಗೂ ಶ್ಯಾಮಸುಂದರ ದೊಡ್ಡಮನಿ ಉಪಸ್ಥಿತರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here