ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು ನೋಂದಣಿ ಮಾಡಿಕೊಳ್ಳಬಹುದು ಎಂದು ಬ್ರಿಗೇಡ್‌ನ ರಾಜ್ಯಾಧ್ಯಕ್ಷ ಜುನೈದ್ ಪಿ.ಕೆ.ತಿಳಿಸಿದ್ದಾರೆ.
ನ.20ರಿಂದ ಒಂದು ತಿಂಗಳ ಕಾಲ ಈ ಅಭಿಯಾನ ಜರುಗಲಿದ್ದು, ಕಾಂಗ್ರೆಸ್ ಮತ್ತು ಜಾತ್ಯತೀತ ವಿಚಾರಧಾರೆಗಳನ್ನು ಹೊಂದಿರುವ ಯುವಕರು ಬ್ರಿಗೇಡ್ ಸದಸ್ಯತ್ವವನ್ನು ಪಡೆದುಕೊಳ್ಳಬಹುದಾಗಿದೆ ಎಂದು ಅವರು ಹೇಳಿದರು.
ಯುವಕರು ಸಕ್ರಿಯ ರಾಜಕಾರಣ ಮತ್ತು ಮಾನವೀಯ ಸಿದ್ಧಾಂತಗಳಲ್ಲಿ ತೊಡಗಬೇಕು ಎಂಬ ಕಾಂಗ್ರೆಸ್‌ನ ನಾಯಕ ರಾಹುಲ್ ಗಾಂಧಿ ಆಶಯದಂತೆ ಈ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ. ಹೀಗಾಗಿ, ಪ್ರತಿ ಗ್ರಾಪಂ, ತಾಲೂಕು ಹಾಗೂ ಜಿಲ್ಲಾ ಮಟ್ಟದಲ್ಲೂ ಈ ಅಭಿಯಾನ ನಡೆಸಲಾಗುತ್ತಿದ್ದು, 18 ವರ್ಷ ಮೇಲ್ಪಟ್ಟ ಹಾಗೂ 38 ವರ್ಷದೊಳಗಿನ ಯುವಕ, ಯುವತಿಯರು ಈ ಸದಸ್ಯತ್ವವನ್ನು ಪಡೆಯಬಹುದಾಗಿದೆ ಎಂದರು.
ಆನ್‌ಲೈನ್ ಮೂಲಕ ಸದಸ್ಯತ್ವ ನೋಂದಣಿಗೆ ಅವಕಾಶ ಕಲ್ಪಿಸಲಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 9980 08 0202 ಅನ್ನು ವಾಟ್ಸಾಪ್ ಸಂಪರ್ಕಿಸಬಹುದು ಎಂದು ಯಂಗ್ ಬ್ರಿಗೇಡ್ ರಾಜ್ಯಾಧ್ಯಕ್ಷ ಜುನೈದ್ ಪಿ.ಕೆ. ತಿಳಿಸಿದ್ದಾರೆ.
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…
ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…