ಬಿಸಿ ಬಿಸಿ ಸುದ್ದಿ

ಕೆ. ನೀಲಾ ಸಿಪಿಐ(ಎಂ) ಪಕ್ಷದ ಕಲಬುರಗಿ ಕಾರ್ಯದರ್ಶಿಯಾಗಿ ಪುನರಾಯ್ಕೆ

ಕಲಬುರಗಿ: ಸಿಪಿಐ(ಎಂ) ಪಕ್ಷವು ನವೆಂಬರ್ 24,25 ನವೆಂಬರ್ ರಂದು ಎರಡು ದಿನಗಳ ಕಾಲ ಜಿಲ್ಲಾ ಸಮ್ಮೇಳನ ನಡೆದು ಜಿಲ್ಲಾ ಕಾರ್ಯದರ್ಶಿಯಾಗಿ ಕಾ.ಕೆ. ನೀಲಾ ಅವರನ್ನು ಪುನರಾಯ್ಕೆ ಮಾಡಲಾಯಿತು.

17 ಸದಸ್ಯರ ಜಿಲ್ಲಾ ಸಮಿತಿಯನ್ನು ಸಮ್ಮೇಳನವು ಆಯ್ಕೆ ಮಾಡಿತು. ಅವರಲ್ಲಿ ಆರು ಜನ ಸಂಗಾತಿಗಳನ್ನು ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯರನ್ನಾಗಿ ಆರಿಸಲಾಯಿತು.

ಕಾ.ಶ್ರೀಮಂತ ಬಿರಾದಾರ, ಕಾ.ಭೀಮಶೆಟ್ಟಿ ಯಂಪಳ್ಳಿ, ಕಾ.ಶರಣಬಸವ ಮಮಶೆಟ್ಟಿ, ಕಾ.ಗೌರಮ್ಮ ಮತ್ತು ಕಾ.ಸುಧಾಮ ಧನ್ನಿ ಇವರು ಕಾರ್ಯದರ್ಶಿ ಮಂಡಳಿ ಸದಸ್ಯರಾಗಿರುವರು. ಕಾ.ಶಾಂತಾ ಘಂಟಿ, ಕಾ.ಸುಭಾಷ ಹೊಸಮನಿ, ಕಾ.ಮಲ್ಲಮ್ಮ ಕೋಡ್ಲಿ, ಕಾ.ಚಂದಮ್ಮ ಗೋಳಾ, ಕಾ.ಶೇಕಮ್ಮ, ಕಾ.ನಾಗಯ್ಯ ಸ್ವಾಮಿ, ಕಾ.ಪಾಂಡುರಂಗ ಮಾವಿನಕರ್, ಕಾ.ಶಿವಶರಣ ಧನ್ನೂರ, ಕಾ.ಪ್ರಭು ಪ್ಯಾರಾಬುದ್ದಿ, ಕಾ.ಸಲ್ಮಾನ ಖಾನ್, ಕಾ.ಗುರು ಚಾಂದಕವಠೆ ಇವರನ್ನು ಜಿಲ್ಲಾ ಸಮಿತಿಯ ಸದಸ್ಯರನ್ನಾಗಿ ಸಮ್ಮೆಳನವು ಆಯ್ಕೆ ಮಾಡಿತು.

ಎರಡು ದಿನಗಳ ಈ ಸಮ್ಮೇಳನದಲ್ಲಿ ಮರಳು ನೀತಿಯ ಕಗ್ಗಂಟು ನಿಯಮಾವಳಿಗಳ ಅಡ್ಡಿ ವಿರೋಧಿಸಿ, ದಲಿತರ ಮೇಲಿನ ದೌರ್ಜನ್ಯ ಖಂಡಿಸಿ, ಮಹಿಳೆಯರ ಮೇಲಿನ ದೌರ್ಜನ್ಯ ಖಂಡಿಸಿ, ಸಾರ್ವತ್ರಿಕವಾಗಿ ಎಲ್ಲ ಕಾರ್ಮಿಕರಿಗೂ ಮಾಸಿಕ ರೂ.31,000 ವೇತನ ಜಾರಿಗೆ ಆಗ್ರಹಿಸಿ, ರೈತರ ಬೆಳೆಗಳಿಗೆ ಎಂಎಸ್ ಪಿ ಬೆಂಬಲ ಬೆಲೆ ನಿಗದಿಗೆ ಒತ್ತಾಯಿಸಿ, ಭೂಮಿಯ ಪ್ರಶ್ನೆಯನ್ನು ಬಗೆಹರಿಸಿ ರೈತರ ಕೈಯಲ್ಲಿ ಕೃಷಿಇ ಭೂಮಿ ಉಳಿಸಲು ಒತ್ತಾಯಿಸಿ, ಅನುಚ್ಛೇದ 371 ಜೆ ಕಾಯ್ದೆಯಡಿಯಲ್ಲಿ ಉದ್ಯೋಗ ಮತ್ತು ಶಿಕ್ಷಣ ಒದಗಿಸಲು ಆಗ್ರಹಿಸಿ, ದೇವದಾಸಿ ಮಹಿಳೆಯರಿಗೆ ಭೂಮಿ ವಸತಿ ವಿತರಿಸಲು ಆಗ್ರಹಿಸಿ, ದೇವದಾಸಿಯರ ಮಕ್ಕಳಿಗೆ ಉಚಿತ ಶಿಕ್ಷಣ ಮತ್ತು ವಸತಿ ಶಾಲೆ ಒದಗಿಸಲು ಆಗ್ರಹಿಸಿ, ಜಿಲ್ಲೆಯಲ್ಲಿ ಸೌಹಾರ್ದ ಪರಂಪರೆಗೆ ಧಕ್ಕೆಯಾಗದಂತೆ ಕ್ರಮವಹಿಸಲು ಆಗ್ರಹಿಸಿ, ಉದ್ಯೋಗ ಖಾತ್ರಿ ಕಾಯ್ದೆಯನ್ನು ಸಮರ್ಪಕವಾಗಿ ಜಾರಿಗೊಳಿಸಲು ಒತ್ತಾಯಿಸಿ, ಗುತ್ತಿಗೆ ಪದ್ಧತಿಯನ್ನು ರದ್ದುಗೊಳಿಸಿ ಪೌರ ಕಾರ್ಮಿಕರ ಕೆಲಸ ಖಾಯಮ್ಮಾತಿಗೆ ಒತ್ತಾಯಿಸಿ, ಸರಕಾರಿ ಇಲಾಖೆಯಲ್ಲಿ ಖಾಲಿ ಇರುವ ಎಲ್ಲ ಹುದ್ದೆಗಳನ್ನು ಭರ್ತಿ ಮಾಡಲು ಆಗ್ರಹಸಿ, ಗುಲಬರ್ಗಾ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ಎಲ್ಲ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡಲು ಆಗ್ರಹಿಸಿ, ಜಿಲ್ಲೆಯಲ್ಲಿರುವ ಎಲ್ಲ ವಸತಿಹೀನರಿಗೆ ಮನೆಗಳ ವಿತರಿಸಲು ಆಗ್ರಹಸಿ ಸಮ್ಮೇಳನದಲ್ಲಿ ನಿರ್ಣಯ ಕೈಗೊಳ್ಳಲಾಯಿತು.

ಭೂಮಾಲಕ ಬಂಡವಾಳಶಾಹಿ ವ್ಯವಸ್ಥೆಯನ್ನು ಇನ್ನಷ್ಟು ಗಟ್ಟಿಗೊಳಿಸುವ ಸರಕಾರವು ನವ ಉದಾರವಾದಿ ನೀತಿಗಳನ್ನು ಅನುಸರಿಸುತ್ತಿರುವುದು ಅತ್ಯಂತ ಅಪಾಯಕಾರಿಯಾದದ್ದು, ಬಡವರನ್ನು ಇನ್ನಷ್ಟು ಬಡವರನ್ನಾಗಿ ಮಾಡುತ್ತಿರುವುದನ್ನು ಸಿಪಿಐಎಂ ಪಕ್ಷವು ತೀವ್ರವಾಗಿ ಖಂಡಿಸುತ್ತದೆ. ಜನತೆಯ ತಲಾ ಆದಾಯದಲ್ಲಿ ತೀವ್ರ ಕುಸಿತವಾಗಿದ್ದು, ಕನಿಷ್ಠ ಆದಾಯದಲ್ಲಿ 30% ರಷ್ಟು ಹಣವನ್ನು ಜಿಎಸ್ಟಿ ಕಟ್ಟಿಸಿಕೊಳ್ಳಲಾಗುತ್ತಿದೆ. ಉದ್ಯೋಗವಿಲ್ಲದೆ ಯುವಜನತೆಯು ಸಂಕಟದಲ್ಲಿ ಇದ್ದಾರೆ. ಇಂತಹ ಸಮಯಲದಲಿ ರಾಜ್ಯ ಮತ್ತು ಕೇಂದ್ರ ಸರಕಾರಗಳು ತಮ್ಮದೇ ಆಂತರಿಕ ಸಮಸ್ಯೆಗಳಲ್ಲಿ ಮುಳುಗಿವೆ. ಜಿಲ್ಲೆಯಲ್ಲಿ ಗ್ರಾಮೀಣ ಪ್ರದೇಶದಲ್ಲಿ ಕಂಪನಿ ಕೃಷಿಯು ಆರಂಭವಾಗಿದೆ. ರೈತರು ಭೂಮಿ ಕಳೆದುಕೊಳ್ಳುತ್ತಿದ್ದಾರೆ.

ಹಿಂದಿನ ಬಿಜೆಪಿ ಸರಕಾರವೂ ವಕ್ಫ್ ಅಡಿಯಲ್ಲಿ ಇರುವ ಭೂಮಿಯನ್ನು ಉಳುಮೆ ಮಾಡಿದ ರೈತರಿಗೆ ನೋಟಿಸ್ ಕೊಟ್ಟಿದೆ. ಈಗ ಕಾಂಗ್ರೆಸ್ ಸಹ ಕೊಟ್ಟಿದೆ. ಆದರೆ ಬಿಜೆಪಿಯು ರೈತರ ಭೂಮಿಯ ಪ್ರಶ್ನೆಯನ್ನು ಪರಿಹರಿಸುವ ಉದ್ಧೇಶಕ್ಕಿಂತಲೂ ಹೆಚ್ಚಾಗಿ ಇದನ್ನು ಕೋಮುವಾದೀಕರಣ ಮಾಡುವಲ್ಲಿ ತಲ್ಲೀನವಾಗಿದೆ. ರೈತರು ಉಳುಮೆ ಮಾಡುತ್ತಿರುವ ಭೂಮಿಯನ್ನು ರೈತರಿಗೆ ಉಳಿಸಿಬೇಕು, ಅಲ್ಪಸಂಖ್ಯಾತರ ಆಸ್ತಿಯ ಹಕ್ಕುಗಳನ್ನೂ ರಕ್ಷಿಸಬೇಕು. ಯಾವ ಕಾರಣಕ್ಕೂ ರೈತರನ್ನು ಒಕ್ಕಲೆಬ್ಬಿಸಬಾರದು, ಸರಕಾರವು ಕೂಡಲೇ ಮದ್ಯಪ್ರವೇಶಿಸಿ ಸಮಸ್ಯೆ ಪರಿಹರಿಸಲು ಕ್ರಮವಹಿಸಬೇಕು ಎಂದು ಸಮ್ಮೇಳನದಲ್ಲಿ ಒತ್ತಾಯಿಸಲಾಯಿತು.

ರಾಜ್ಯಸಮ್ಮೇಳನವು ದಿ.29,30,31 ಡಿಸೆಂಬರ್ 2024 ರಂದು ತುಮಕೂರಿನಲ್ಲಿ ನಡೆಯಲಿದ್ದು ಜಿಲ್ಲೆಯಿಂದ 12 ಜನ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ. ರಾಜ್ಯ ಮಟ್ಟದ ರ್ಯಾಲಿಗೆ ಜಿಲ್ಲೆಯಿಂದ ಜನರು ಭಾಗವಹಿಸುವರು.

emedialine

Recent Posts

ಸಂವಿಧಾನ ಸಮರ್ಪಣಾ ದಿನದ ಅಂಗವಾಗಿ ಸಂವಿಧಾನ ಓದು ಕಾರ್ಯಕ್ರಮ

ಕಲಬುರಗಿ: ಸ್ಲಂ ಜನರ ಸಂಘಟನೆ ಕರ್ನಾಟಕ ವತಿಯಿಂದ ಆಯೋಜಿಸಿದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ವೃತ್ತ ಹೈ -ಕೋರ್ಟ್ ರಸ್ತೆ…

2 hours ago

ಶೋಷಿತ ಜನಜಾಗೃತಿ ವೇದಿಕೆ ವತಿಯಿಂದ ಪ್ರಧಾನ ಮಂತ್ರಿ ನರೇಂದ್ರ ಮೋದಿಗೆ ಮನವಿ

ಕಲಬುರಗಿ: ಕರ್ನಾಟಕ ರಾಜ್ಯದ ಕಲಬುರಗಿ-ಜಿಲ್ಲೆಯಲ್ಲಿ ದಲಿತ (ಮಾದಿಗ) ಸಮುದಾಯದವರಿಗೆ ರಾಷ್ಟ್ರೀಕೃತ ಬ್ಯಾಂಕ್‍ಗಳು ಸಾಲ ಸೌಲಭ್ಯ ನೀಡದಿರುವ ಕುರಿತು ಶೋಷಿತ ಜನಜಾಗೃತಿ…

2 hours ago

ಪ್ರಶಸ್ತಿ ಪುರಸ್ಕೃತರು ಸನ್ಮಾನ ಸಮಾರಂಭಕ್ಕೆ ಗೈರು: ಡಾ. ಎಸ್.ಎಸ್. ಗುಬ್ಬಿ ಬೇಸರ

ಕಲಬುರಗಿ: ಪ್ರಶಸ್ತಿ ಪುರಸ್ಕೃತರು ಸನ್ಮಾನ ಸಮಾರಂಭಕ್ಕೆ ಗೈರಾಗಿರುವುದು ಬೇಸರದ ಸಂಗತಿ ಎಂದು ಜಿಲ್ಲಾ ವೈದ್ಯ ಸಾಹಿತ್ಯ ಪರಿಷತ್ ಅಧ್ಯಕ್ಷ ಹಾಗೂ…

2 hours ago

ಹಣೆಯ ಮೇಲೆ ಹಚ್ಚಿದ ವಿಭೂತಿ ಆತ್ಮವಿಶ್ವಾಸ ಹೆಚ್ಚಿಸುತ್ತದೆ: ಅರ್ಪಿತಾ ಪಾಟೀಲ

ಕಲಬುರಗಿ: ಹಣೆಯ ಮೇಲೆ ಹಚ್ಚಿದ ವಿಭೂತಿ ಸಮಾನತೆ ಸಾರುವದರೊಂದಿಗೆ ಮನುಷ್ಯನ ಆತ್ಮವಿಶ್ವಾಸ ಹೆಚ್ಚಿಸುತ್ತದೆ ಎಂದು ಆರಾಧನಾ ಪದವಿ ಪೂರ್ವ ಕಾಲೇಜಿನ…

2 hours ago

ಕಲಬುರಗಿ ಕೇಂದ್ರ ಕಾರಾಗೃಹದಲ್ಲಿ ಸಂವಿಧಾನ ದಿನ ಆಚರಣೆ

ಕಲಬುರಗಿ ಕೇಂದ್ರ ಕಾರಾಗೃಹದಲ್ಲಿರುವ ಸಂವಿಧಾನ ದಿನವನ್ನು ಸರ್ಕಾರದ ಸುತ್ತೋಲೆ ಆದೇಶದಂತೆ ಕಾರಾಗೃಹದ ಲಿಪಿಕ/ ಕಾನಿನಿರ್ವಹಕ ಅಧಿಕಾರಿ/ಸಿಬ್ಬಂದಿಯವರೊಂದಿಗೆ ಡಾ|| ಬಾಬಾ ಸಾಹೇಬ್…

2 hours ago

ಸಂವಿಧಾನವನ್ನು ರಕ್ಷಿಸಲು ಜವಾಬ್ದಾರಿ ಯುವಕರು ಮೇಲಿದೆ : ಹಿರಿಯ ವಕೀಲ ವೈಜನಾಥ ಎಸ್ ಝಳಕಿ

ಕಲಬುರಗಿ; ಸಂವಿಧಾನವನ್ನು ರಕ್ಷಿಸಲು ಮತ್ತು ಜನರಲ್ಲಿ ಸಂವಿಧಾನದ ಮೇಲಿನ ನಂಬಿಕೆಯನ್ನು ಬಲಪಡಿಸಲು ಜಾಗೃತ ಶಕ್ತಿಯಾಗಿ ಕಾರ್ಯನಿರ್ವಹಿಸುವ ಗುರುತರವಾದ ಜವಾಬ್ದಾರಿಯನ್ನು ದೇಶದ…

2 hours ago