ಶಹಾಬಾದ: ನಗರಸಭೆಯ ವಾರ್ಡ ನಂ.3 ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಾಜೀದ್ ಖಾನ್ ಜಮಾದಾರ ಅವರು ಗೆಲುವು ಸಾಧಿಸಿದ್ದಾರೆ.
ನಗರದ ತಹಶೀಲ್ದಾರ್ ಕಚೇರಿಯಲ್ಲಿ ಮಂಗಳವಾರ ನಡೆದ ಮತ ಎಣಿಕೆ ಮುಕ್ತಾಯದ ನಂತರ ಚುನಾವಣಾಧಿಕಾರಿಗಳಾದ ಬಾಲರಾಜ ಮಾಚನೂರ ತಹಶೀಲ್ದಾರ್ ಅವರ ಸಮ್ಮುಖದಲ್ಲಿ ನಗರಸಭೆಯ ವಾರ್ಡ ನಂ.3ರ ಫಲಿತಾಂಶ ಪ್ರಕಟಿಸಿದರು.
ಗೆಲುವು ಸಾಧಿಸಿದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಅವರಿಗೆ ಚುನಾವಣಾಧಿಕಾರಿಗಳಾದ ಬಾಲರಾಜ ಮಾಚನೂರ ಹಾಗೂ ತಹಸೀಲ್ದಾರ ಗುರುರಾಜ ಸಂಗಾವಿ ಅವರು ಇದೆ ವೇಳೆ ಪ್ರಮಾಣ ಪತ್ರ ನೀಡಿದರು.
314 ಮತಗಳ ಅಂತರದಿಂದ ಗೆಲುವು: ಇವಿಎಂ ಮತಗಳ ಮತಪತ್ರ ಎಣಿಕೆ ಕಾರ್ಯ ಮುಕ್ತಾಯದ ನಂತರ ಅಭ್ಯರ್ಥಿ ವಾಜೀದ್ ಖಾನ್ ಜಮಾದಾರ ಅವರು 463 ಮತಗಳನ್ನು ಪಡೆದು ಗೆಲುವಿನ ನಗೆ ಬೀರಿದರು. ಸಮೀಪದ ಪ್ರತಿಸ್ಪರ್ಧಿ ಬಿಜೆಪಿ ಅಭ್ಯರ್ಥಿ ಜಯಶ್ರೀ ಸರುಣ ಜಾಯಿ 149 ಮತಗಳನ್ನು ದಾಖಲಿಸಿದರು. ಒಟ್ಟು 621 ಮತಗಳ ಪೈಕಿ ಕಾಂಗ್ರೆಸ್ 463, ಬಿಜೆಪಿಗೆ 149 ಹಾಗೂ ನೋಟಾಗೆ09 ಹಂಚಿಕೆಯಾದವು.
ವಿಜಯೋತ್ಸವ : ಕಾಂಗ್ರೆಸ್ ಅಭ್ಯರ್ಥಿ ವಾಜೀದ್ ಖಾನ್ ಜಮಾದಾರ ಅವರ ಗೆಲುವಿನ ಸುದ್ದಿ ತಿಳಿಯುತ್ತಿದ್ದಂತೆ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಗುಲಾಲ ಎರಚಿ, ಪಟಾಕಿ ಸಿಡಿಸಿ, ಸಿಹಿ ಹಂಚಿ ವಿಜಯೋತ್ಸವ ಆಚರಿಸಿದರು.
ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ.ರಶೀದ್ ಮರ್ಚಂಟ್, ನಗರಸಭೆಯ ಅಧ್ಯಕ್ಷೆ ಚಂಪಾಬಾಯಿ ರಾಜು ಮೇಸ್ತ್ರಿ, ಉಪಾಧ್ಯಕ್ಷೆ ಫಾತಿಮಾ ಬಾಕ್ರೋದ್ದಿನ್, ಕಿರಣ ಚವ್ಹಾಣ, ಸ್ನೇಹಲ್ ಜಾಯಿ, ನಾಗೇಂದ್ರ ನಾಟೇಕಾರ,ರಾಜೇಶ ಯನಗುಂಟಿಕರ್, ಡಾ.ಅಹ್ಮದ್ ಪಟೇಲ್, ಹಾಷಮ್ ಖಾನ್, ಸಾಹೇಬ, ಉದಯಕುಮಾರ ಸೇರಿದಂತೆ ಅನೇಕರು ಹಾಜರಿದ್ದರು.
ಕಲಬುರಗಿ: ಸ್ಲಂ ಜನರ ಸಂಘಟನೆ ಕರ್ನಾಟಕ ವತಿಯಿಂದ ಆಯೋಜಿಸಿದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ವೃತ್ತ ಹೈ -ಕೋರ್ಟ್ ರಸ್ತೆ…
ಕಲಬುರಗಿ: ಕರ್ನಾಟಕ ರಾಜ್ಯದ ಕಲಬುರಗಿ-ಜಿಲ್ಲೆಯಲ್ಲಿ ದಲಿತ (ಮಾದಿಗ) ಸಮುದಾಯದವರಿಗೆ ರಾಷ್ಟ್ರೀಕೃತ ಬ್ಯಾಂಕ್‍ಗಳು ಸಾಲ ಸೌಲಭ್ಯ ನೀಡದಿರುವ ಕುರಿತು ಶೋಷಿತ ಜನಜಾಗೃತಿ…
ಕಲಬುರಗಿ: ಪ್ರಶಸ್ತಿ ಪುರಸ್ಕೃತರು ಸನ್ಮಾನ ಸಮಾರಂಭಕ್ಕೆ ಗೈರಾಗಿರುವುದು ಬೇಸರದ ಸಂಗತಿ ಎಂದು ಜಿಲ್ಲಾ ವೈದ್ಯ ಸಾಹಿತ್ಯ ಪರಿಷತ್ ಅಧ್ಯಕ್ಷ ಹಾಗೂ…
ಕಲಬುರಗಿ: ಹಣೆಯ ಮೇಲೆ ಹಚ್ಚಿದ ವಿಭೂತಿ ಸಮಾನತೆ ಸಾರುವದರೊಂದಿಗೆ ಮನುಷ್ಯನ ಆತ್ಮವಿಶ್ವಾಸ ಹೆಚ್ಚಿಸುತ್ತದೆ ಎಂದು ಆರಾಧನಾ ಪದವಿ ಪೂರ್ವ ಕಾಲೇಜಿನ…
ಕಲಬುರಗಿ ಕೇಂದ್ರ ಕಾರಾಗೃಹದಲ್ಲಿರುವ ಸಂವಿಧಾನ ದಿನವನ್ನು ಸರ್ಕಾರದ ಸುತ್ತೋಲೆ ಆದೇಶದಂತೆ ಕಾರಾಗೃಹದ ಲಿಪಿಕ/ ಕಾನಿನಿರ್ವಹಕ ಅಧಿಕಾರಿ/ಸಿಬ್ಬಂದಿಯವರೊಂದಿಗೆ ಡಾ|| ಬಾಬಾ ಸಾಹೇಬ್…
ಕಲಬುರಗಿ; ಸಂವಿಧಾನವನ್ನು ರಕ್ಷಿಸಲು ಮತ್ತು ಜನರಲ್ಲಿ ಸಂವಿಧಾನದ ಮೇಲಿನ ನಂಬಿಕೆಯನ್ನು ಬಲಪಡಿಸಲು ಜಾಗೃತ ಶಕ್ತಿಯಾಗಿ ಕಾರ್ಯನಿರ್ವಹಿಸುವ ಗುರುತರವಾದ ಜವಾಬ್ದಾರಿಯನ್ನು ದೇಶದ…