ಶ್ರೀಮತಿ ವಿ. ಜಿ. ಪದವಿ ಪೂರ್ವ ಕಾಲೇಜಿನಲ್ಲಿ – ಸಂವಿಧಾನ ದಿನ

0
10
ಕಲಬುರಗಿ: ನಗರದ ಪ್ರತಿಷ್ಠಿತ ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ, ಶ್ರೀಮತಿ ವೀರಮ್ಮ ಗಂಗಸಿರಿ ಮಹಿಳಾ ಪದವಿ-ಪೂರ್ವ ಕಾಲೇಜಿನಲ್ಲಿ ಸಂವಿಧಾನ ದಿನ ಕಾರ್ಯಕ್ರಮ ಪದವಿ ಮಹಿಳಾ ಮಹಾವಿದ್ಯಾಲಯದ ಸಹಯೋಗದೊಂದಿಗೆ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಪದವಿ ಮಹಾವಿದ್ಯಾಲಯದ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಶ್ರೀಮತಿ. ಗೀತಾ ಪಾಟೀಲ ಸಂವಿಧಾನ ದಿನದ ಕುರಿತು ಮಾತನಾಡಿ ಪ್ರತಿಜ್ಞಾ ವಿಧಿ ಬೋಧಿಸಿದರು.
ಕಾಲೇಜಿನ ಪ್ರಾಚಾರ್ಯರಾದ ಡಾ.ಮೋಹನರಾಜ ಪತ್ತಾರ, ಉಪನ್ಯಾಸಕರಾದ ಡಾ. ನಯನತಾರ ಆಸ್ಪಲ್ಲಿ, ಡಾ. ಕಾಶೀಬಾಯಿ ಭೋಗಶೆಟ್ಟಿ, ಶ್ರೀಮತಿ ಮಹಾನಂದಾ ಗೊಬ್ಬುರ, ಬೋಧಕ-ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿನಿಯರು ಪಾಲ್ಗೊಂಡಿದ್ದರು ಎಂದು ಉಪನ್ಯಾಸಕರಾದ ಡಾ. ಕಾಶಿಬಾಯಿ ಭೋಗಶಟ್ಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here