ಬಿಸಿ ಬಿಸಿ ಸುದ್ದಿ

ಹಣೆಯ ಮೇಲೆ ಹಚ್ಚಿದ ವಿಭೂತಿ ಆತ್ಮವಿಶ್ವಾಸ ಹೆಚ್ಚಿಸುತ್ತದೆ: ಅರ್ಪಿತಾ ಪಾಟೀಲ

ಕಲಬುರಗಿ: ಹಣೆಯ ಮೇಲೆ ಹಚ್ಚಿದ ವಿಭೂತಿ ಸಮಾನತೆ ಸಾರುವದರೊಂದಿಗೆ ಮನುಷ್ಯನ ಆತ್ಮವಿಶ್ವಾಸ ಹೆಚ್ಚಿಸುತ್ತದೆ ಎಂದು ಆರಾಧನಾ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರಾದ ಅರ್ಪಿತಾ ಕೆ ಪಾಟೀಲ ಹೇಳಿದರು.

ಕಲಬುರಗಿ ನಗರದ ಭವಾನಿ ನಗರದಲ್ಲಿರುವ ಬಬಲಾದ ಮಠದಲ್ಲಿ 238ನೇ ಶಿವಾನುಭವಗೋಷ್ಠಿ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡುತ್ತಾ ಬಸವಾದಿ ಶರಣರು ಹಣೆಯ ಮೇಲೆ ವಿಭೂತಿ ಧರಿಸಿದ ವ್ಯಕ್ತಿಯ ಕಾರ್ಯಗಳು ಯಶಸ್ವಿಯಾಗುತ್ತವೆ. ಯಾವುದೇ ಜಾತಿ, ಧರ್ಮಕ್ಕೆ ವಿಭೂತಿ ಸೀಮಿತವಲ್ಲ ಎಂದು ಸಾರಿ ನುಡಿದಂತೆ ನಡೆದು ಸಮ ಸಮಾಜ ನಿರ್ಮಿಸಿದ್ದಾರೆ. ನಾವು ಮಾಡುವ ಕಾರ್ಯ ಮಕ್ಕಳು ಸೂಕ್ಷ್ಮವಾಗಿ ಗಮನಿಸುತ್ತಾರೆ ಅದಕ್ಕಾಗಿ ಶುದ್ಧವಾದ ಕಾರ್ಯದೊಂದಿಗೆ ಜೀವನ ಸಾಗಿಸಿದಾಗ ನಾವು ಸರ್ವರಿಗೂ ಮಾದರಿ ಆಗುತ್ತೇವೆ ಎಂದು ಮಾರ್ಮಿಕವಾಗಿ ನುಡಿದರು.

ಮುಖ್ಯ ಅತಿಥಿಗಳಾಗಿ ಆದರ್ಶ ಐಟಿಐ ಕಾಲೇಜಿನ ಕಿರಿಯ ತಾಂತ್ರಿಕ ಅಧಿಕಾರಿಗಳಾದ ಅಬ್ದುಲ್ ಯುನೂಸ ಮಾತನಾಡುತ್ತಾ ಎಲ್ಲಾ ಧರ್ಮಗಳಲ್ಲಿಯೂ ಕಾಯಕದೊಂದಿಗೆ ದಾಸೋಹ ಮಾಡಿ ಸಮಾನತೆಯಿಂದ ಜೀವನ ಸಾಗಿಸಬೇಕಂಬುವದು ಮೂಲ ತತ್ವವಾಗಿದೆ. ಯಾವುದೆ ಧರ್ಮ, ಜಾತಿ ಎನ್ನದೆ ಜಾತ್ಯಾತೀತವಾಗಿ, ಸರ್ವರು ನಮ್ಮವರೆಂದು ಅಪ್ಪಿ, ಒಪ್ಪಿಕೊಂಡು ಸಂಸ್ಕಾರದ ಮಾರ್ಗ ತೋರಿಸುವ ಮಠಗಳಲ್ಲಿ ಬಬಲಾದ ಮಠವು ಪ್ರಮುಖವಾಗಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ನ್ಯಾಯವಾದಿ ಹಣಮಂತರಾಯ ಎಸ್ ಅಟ್ಟೂರ, ಉಪನ್ಯಾಸಕರಾದ ಕಾಶಿನಾಥ ಪಾಟೀಲ,ಮಹೇಶ ಮಠಪತಿ, ರೇವಣಸಿದ್ದಯ್ಯ ಶಾಸ್ತ್ರಿ, ಶರಣು ವರನಾಳ, ಶಾಂತು ಕಲಬುರಗಿ, ಶಿವರಾಜ ಭಾಲಖೇಡ, ಗುರುರಾಜ ಹಸರಗುಂಡಗಿ, ಸಿದ್ದಣ್ಣ ವಾಡಿ, ಶಿವಕುಮಾರ ಸಾವಳಗಿ, ರಾಜೇಂದ್ರ ಹೂಗಾರ, ಚನ್ನವೀರ ಮಹಿಳಾ ಭಜನಾ ಸಂಘದವರು ಹಾಗೂ ಕಲಕೋರಿ ಗ್ರಾಮದ ಪಾದಯಾತ್ರಿಗಳು ಸೇರಿದಂತೆ ಅನೇಕ ಜನ ಭಾಗವಹಿಸಿದರು.

ಇದೇ ಸಂದರ್ಭದಲ್ಲಿ ಉಪನ್ಯಾಸಕರಿಗೂ, ಅತಿಥಿಗಳಿಗೂ ಶ್ರೀಮಠದ ವತಿಯಿಂದ ಗೌರವಿಸಲಾಯಿತು.

emedialine

Recent Posts

ಸಂವಿಧಾನ ಸಮರ್ಪಣಾ ದಿನದ ಅಂಗವಾಗಿ ಸಂವಿಧಾನ ಓದು ಕಾರ್ಯಕ್ರಮ

ಕಲಬುರಗಿ: ಸ್ಲಂ ಜನರ ಸಂಘಟನೆ ಕರ್ನಾಟಕ ವತಿಯಿಂದ ಆಯೋಜಿಸಿದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ವೃತ್ತ ಹೈ -ಕೋರ್ಟ್ ರಸ್ತೆ…

2 hours ago

ಶೋಷಿತ ಜನಜಾಗೃತಿ ವೇದಿಕೆ ವತಿಯಿಂದ ಪ್ರಧಾನ ಮಂತ್ರಿ ನರೇಂದ್ರ ಮೋದಿಗೆ ಮನವಿ

ಕಲಬುರಗಿ: ಕರ್ನಾಟಕ ರಾಜ್ಯದ ಕಲಬುರಗಿ-ಜಿಲ್ಲೆಯಲ್ಲಿ ದಲಿತ (ಮಾದಿಗ) ಸಮುದಾಯದವರಿಗೆ ರಾಷ್ಟ್ರೀಕೃತ ಬ್ಯಾಂಕ್‍ಗಳು ಸಾಲ ಸೌಲಭ್ಯ ನೀಡದಿರುವ ಕುರಿತು ಶೋಷಿತ ಜನಜಾಗೃತಿ…

2 hours ago

ಪ್ರಶಸ್ತಿ ಪುರಸ್ಕೃತರು ಸನ್ಮಾನ ಸಮಾರಂಭಕ್ಕೆ ಗೈರು: ಡಾ. ಎಸ್.ಎಸ್. ಗುಬ್ಬಿ ಬೇಸರ

ಕಲಬುರಗಿ: ಪ್ರಶಸ್ತಿ ಪುರಸ್ಕೃತರು ಸನ್ಮಾನ ಸಮಾರಂಭಕ್ಕೆ ಗೈರಾಗಿರುವುದು ಬೇಸರದ ಸಂಗತಿ ಎಂದು ಜಿಲ್ಲಾ ವೈದ್ಯ ಸಾಹಿತ್ಯ ಪರಿಷತ್ ಅಧ್ಯಕ್ಷ ಹಾಗೂ…

2 hours ago

ಕಲಬುರಗಿ ಕೇಂದ್ರ ಕಾರಾಗೃಹದಲ್ಲಿ ಸಂವಿಧಾನ ದಿನ ಆಚರಣೆ

ಕಲಬುರಗಿ ಕೇಂದ್ರ ಕಾರಾಗೃಹದಲ್ಲಿರುವ ಸಂವಿಧಾನ ದಿನವನ್ನು ಸರ್ಕಾರದ ಸುತ್ತೋಲೆ ಆದೇಶದಂತೆ ಕಾರಾಗೃಹದ ಲಿಪಿಕ/ ಕಾನಿನಿರ್ವಹಕ ಅಧಿಕಾರಿ/ಸಿಬ್ಬಂದಿಯವರೊಂದಿಗೆ ಡಾ|| ಬಾಬಾ ಸಾಹೇಬ್…

2 hours ago

ಸಂವಿಧಾನವನ್ನು ರಕ್ಷಿಸಲು ಜವಾಬ್ದಾರಿ ಯುವಕರು ಮೇಲಿದೆ : ಹಿರಿಯ ವಕೀಲ ವೈಜನಾಥ ಎಸ್ ಝಳಕಿ

ಕಲಬುರಗಿ; ಸಂವಿಧಾನವನ್ನು ರಕ್ಷಿಸಲು ಮತ್ತು ಜನರಲ್ಲಿ ಸಂವಿಧಾನದ ಮೇಲಿನ ನಂಬಿಕೆಯನ್ನು ಬಲಪಡಿಸಲು ಜಾಗೃತ ಶಕ್ತಿಯಾಗಿ ಕಾರ್ಯನಿರ್ವಹಿಸುವ ಗುರುತರವಾದ ಜವಾಬ್ದಾರಿಯನ್ನು ದೇಶದ…

2 hours ago

ಶ್ರೀಮತಿ ವಿ. ಜಿ. ಪದವಿ ಪೂರ್ವ ಕಾಲೇಜಿನಲ್ಲಿ – ಸಂವಿಧಾನ ದಿನ

ಕಲಬುರಗಿ: ನಗರದ ಪ್ರತಿಷ್ಠಿತ ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ, ಶ್ರೀಮತಿ ವೀರಮ್ಮ ಗಂಗಸಿರಿ ಮಹಿಳಾ ಪದವಿ-ಪೂರ್ವ ಕಾಲೇಜಿನಲ್ಲಿ ಸಂವಿಧಾನ ದಿನ…

2 hours ago