ಕಲಬುರಗಿ: ಕರ್ನಾಟಕ ರಾಜ್ಯದ ಕಲಬುರಗಿ-ಜಿಲ್ಲೆಯಲ್ಲಿ ದಲಿತ (ಮಾದಿಗ) ಸಮುದಾಯದವರಿಗೆ ರಾಷ್ಟ್ರೀಕೃತ ಬ್ಯಾಂಕ್‍ಗಳು ಸಾಲ ಸೌಲಭ್ಯ ನೀಡದಿರುವ ಕುರಿತು ಶೋಷಿತ ಜನಜಾಗೃತಿ ವೇದಿಕೆ ಜಿಲ್ಲಾ ಸಮಿತಿ ವತಿಯಿಂದ ಜಿಲ್ಲಾಧಿಕಾರಿಗಳ ಮುಖಾಂತರ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಮನವಿ ಸಲ್ಲಿಸಿದರು.
ಕರ್ನಾಟಕ ರಾಜ್ಯದ ಕಲಬುರಗಿ ಜಿಲ್ಲೆಯಲ್ಲಿ ದಲಿತ (ಮಾದಿಗ) ಸಮುದಾಯದವರಿಗೆ ಕೇಂದ್ರ ಸರ್ಕಾರದ ಯೋಜನೆಗಳು ಮತ್ತು ರಾಜ್ಯ ಸರ್ಕಾರದ ಯೋಜನೆಗಳಾಗಲಿ ಇಲ್ಲಿಯ ರಾಷ್ಟ್ರೀಕೃತ ಬ್ಯಾಂಕ್‍ಗಳಾದ ಸ್ಪೆಟ್ ಬ್ಯಾಂಕ್ ಆಫ್ ಇಂಡಿಯಾ. ಕೆನರಾ ಬ್ಯಾಂಕ್, ಹಾಗೂ ಇನ್ನೂಳಿದ ರಾಷ್ಟ್ರೀಕೃತ ಬ್ಯಾಂಕ್‍ಗಳು ವಿಶೇಷವಾಗಿ ಮಾದಿಗ ಸಮುದಾಯದವರಿಗೆ ಯಾವುದೇ ಯೋಜನೆಯಲ್ಲಿ ಸಾಲ ಸೌಲಭ್ಯಗಳು ಕೊಡುತ್ತಿರುವದಿಲ್ಲ. ಅದರಂತೆ ಸುಮಾರು ಬಾರಿ ಅಲೆದಾಡಿಸುತ್ತಿದ್ದಾರೆ.
ಆದ್ದರಿಂದ ತಾವುಗಳು ಕೂಡಲೇ ಸಂಬಂಧಪಟ್ಟ ಬ್ಯಾಂಕ್ ಅಧಿಕಾರಿಗಳಿಗೆ ಸೂಚನೆ ಕೊಟ್ಟು ಈ ನೊಂದ ಮಾದಿಗ ಸಮುದಾಯದವರಿಗೆ ನ್ಯಾಯ ದೊರಕಿಸಿಕೊಡಬೇಕೆಂದು ಮನವಿಯಲ್ಲಿ ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಹುಲ್ ಟಿ. ಬಿಮೇತ್ರೆ, ಮುಖಂಡರಾದ ರಾಜು ಕಟ್ಟಿಮನಿ, ವೇಂಕಟೇಶ ನಾಟೀಕಾರ, ಚಂದಪ್ಪ ಕಟ್ಟಿಮನಿ ಇದ್ದರು