ಚಿತ್ತಾಪೂರ: ತಾಲ್ಲೂಕಿನಲ್ಲಿ ಬಹುಸಂಖ್ಯೆಯಲ್ಲಿರುವ ಕೋಲಿ ಸಮಾಜವನ್ನು ಪಕ್ಷಾತೀತವಾಗಿ ಸಂಘಟನೆ ಮಾಡುವುದು ಅತ್ಯಂತ ಅಗತ್ಯವಾಗಿದೆ. ಸಂಘಟನೆ ಸಶಕ್ತವಾದಾಗ ಸಮಾಜಕ್ಕೆ ನ್ಯಾಯ, ಹಕ್ಕು, ಸೌಲಭ್ಯ, ಸ್ಥಾನಮಾನ ಪಡೆಯಲು ಅನುಕೂಲವಾಗುತ್ತದೆ ಎಂದು ಕೋಲಿ ಸಮಾಜದ ಹಿರಿಯ ಮುಖಂಡ ಭೀಮಣ್ಣಾ ಸಾಲಿ ಅವರು ಹೇಳಿದರು.
ಪಟ್ಟಣದ ಅಂಬಿಗರ ಚೌಡಯ್ಯ ಕಲ್ಯಾಣ ಮಂಟಪದಲ್ಲಿ ಇತ್ತೀಚೆಗೆ ನಡೆದ ಕೋಲಿ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ ಸಂಬಂಧ ನಡೆದ ಮುಖಂಡರ ಸಭೆಯಲ್ಲಿ ಮಾತನಾಡಿದ ಅವರು, ಸಮಾಜದ ಸಂಘಟನೆ ಬಲಗೊಂಡಾಗ ಮಾತ್ರ ಸಮಾಜಕ್ಕೆ ಸಿಗಬೇಕಾದ ಸಾಮಾಜಿಕ ನ್ಯಾಯ ಪಡೆಯಲು ಸಾಧ್ಯವಾಗುತ್ತದೆ. ಈ ದೃಷ್ಟಿಯಿಂದ ಸಮಾಜದ ಪ್ರತಿಯೊಬ್ಬರೂ ರಾಜಕೀಯ ಪಕ್ಷಪಾತ ಬದಿಗಿಟ್ಟು ಸಮಾಜದ ಸಂಘಟನೆಗೆ ಮುಂದಾಗಬೇಕು ಎಂದು ಅವರು ಹೇಳಿದರು.
ಕೋಲಿ ಸಮಾಜದ ಪದಾಧಿಕಾರಿಗಳ ಅಧಿಕಾರವಧಿ ಮುಗಿದು ಅಧ್ಯಕ್ಷರು ರಾಜೀನಾಮೆ ನೀಡಿ ಎಲ್ಲಾ ಘಟಕಗಳನ್ನು ವಿಸರ್ಜಿಸಿದ್ದರಿಂದ ಹೊಸ ಪದಾಧಿಕಾರಿ ಆಯ್ಕೆ ಮಾಡಬೇಕಿದೆ. ಅಧ್ಯಕ್ಷರ ಮತ್ತು ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿ ಮಾಡಲಾಗುವುದು. ಕೆಲವು ಮಾನದಂಡ ಅನುಸರಿಸುವುದು ಅವಶ್ಯಕ. ತಾಲ್ಲೂಕು ಘಟಕದ ಮತ್ತು ನಗರ ಘಟಕದ ಅಧ್ಯಕ್ಷರ ಆಯ್ಕೆ ನಂತರ ಅವರ ನೇತೃತ್ವದಲ್ಲಿಯೆ ಯುವ ಘಟಕದ ಮತ್ತು ಮಹಿಳಾ ಘಟಕದ ಅಧ್ಯಕ್ಷರ ಆಯ್ಕೆ ಮಾಡಲಾಗುತ್ತದೆ. ಸಮಾಜದ ಜನರು ಸಹಕರಿಸಬೇಕು ಮತ್ತು ಒಗ್ಗಟ್ಟು ಪ್ರದರ್ಶಿಸಬೇಕು ಎಂದು ಅವರು ಹೇಳಿದರು.
ಸಭೆಯಲ್ಲಿ ಮಾಜಿ ಅಧ್ಯಕ್ಷ ರಾಮಲಿಂಗ ಬಾನರ್, ಮಾಜಿ ಗೌರವಾಧ್ಯಕ್ಷ ಹಣಮಂತ ಸಂಕನೂರು, ಮುಖಂಡರಾದ ಮಲ್ಲಿಕಾರ್ಜುನ ಎಮ್ಮೆನೋರ್, ಭೀಮಣ್ಣಾ ಹೋತಿನಮಡಿ, ನಿಂಗಣ್ಣಾ ಹೆಗಲೇರಿ, ಸುರೇಶ ಬೆನಕನಳ್ಳಿ, ಮಲ್ಲಿಕಾರ್ಜುನ ಸಂಗಾವಿ, ಹಣಮಂತ ಕಟ್ಟಿ, ತಮ್ಮಣ್ಣ ಡಿಗ್ಗಿ, ದಶರಥ ದೊಡ್ಡಮನಿ, ಲಕ್ಷ್ಮಿಕಾಂತ ಸಾಲಿ, ಕರಣಕುಮಾರ ಅಲ್ಲೂರ್, ಚಂದ್ರು ಕಾಳಗಿ, ಪ್ರಭು ಹಲಕರ್ಟಿ, ಮಹಾದೇವ ಇಟಗಾ ಅವರು ಇದ್ದರು.
ಪದಾಧಿಕಾರಿ ಆಯ್ಕೆಗೆ ಮಾನದಂಡ: ಕೋಲಿ ಸಮಾಜದ ತಾಲ್ಲೂಕು ಘಟಕದ ಹಾಗೂ ನಗರ ಘಟಕದ ಅಧ್ಯಕ್ಷರ ಹುದ್ದೆಗೆ ಆಕಾಂಕ್ಷಿಗಳಾಗುವವರು 40 ರಿಂದ 60 ವರ್ಷದವರಾಗಿರಬೇಕು. ಯುವ ಘಟಕದ ಅಧ್ಯಕ್ಷ ಹುದ್ದೆಗೆ ಆಕಾಂಕ್ಷಿಗಳಾಗುವವರು 30 ರಿಂದ 40 ವರ್ಷದವರಾಗಿರಬೇಕು ಎಂದು ಕೋಲಿ ಸಮಾಜದ ಹಿರಿಯ ಮುಖಂಡ ಭೀಮಣ್ಣಾ ಸಾಲಿ, ಸಮಾಜದ ಮಾಜಿ ಅಧ್ಯಕ್ಷ ರಾಮಲಿಂಗ ಬಾನರ್ ಅವರು ಜಂಟಿಯಾಗಿ ತಿಳಿಸಿದ್ದಾರೆ.
ಪದಾಧಿಕಾರಿಗಳ ಆಯ್ಕೆ ಸಂಬಂಧ ನಡೆದ ಮುಖಂಡರ ಸಭೆಯಲ್ಲಿ ಕೂಲಂಕೂಷವಾಗಿ ಚರ್ಚೆ ನಡೆಸಿ ಕೆಲವು ಮಾನದಂಡ ಅನುಸರಿಸಲೇಬೇಕು ಎಂದು ನಿರ್ಣಯ ಕೈಗೊಳ್ಳಲಾಗಿದೆ. ಸಮಾಜದ ತಾಲ್ಲೂಕು ಘಟಕ, ನಗರ ಘಟಕದ ಅಧ್ಯಕ್ಷ ಹುದ್ದೆಗೆ ಆಕಾಂಕ್ಷಿಗಳಾಗುವವರು ನ.28 ರಿಂದ ಡಿ.5 ರವರೆಗೆ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಕರಣಕುಮಾರ ಅಲ್ಲೂರ್ ಅವರ ಹತ್ತಿರ ನಿಗಧಿತ ಅರ್ಜಿ ಪಡೆದುಕೊಂಡು ಅರ್ಜಿ ಸಲ್ಲಿಸಬೇಕು ಎಂದು ಅವರು ತಿಳಿಸಿದ್ದಾರೆ.
ಅರ್ಜಿ ಸಲ್ಲಿಸಿದವರ ಪೈಕಿ ಯಾರನ್ನು ಆಯ್ಕೆ ಮಾಡಬೇಕು ಎಂದು ತಾಲ್ಲೂಕಿನ ಸಮಾಜದ ಹಿರಿಯ ಮುಖಂಡರು ಪರಾಮರ್ಶೆ ನಡೆಸಿ ತೀರ್ಮಾನ ಮಾಡಲಾಗುತ್ತದೆ. ಪದಾಧಿಕಾರಿ ಆಯ್ಕೆ ಸಂಬಂಧ ಅರ್ಜಿ ಸಲ್ಲಿಸಿದವರು ತಮ್ಮನ್ನು ಹೊರತುಪಡಿಸಿ ಬೇರೆಯವರ ಹೆಸರು ಹೇಳಲು ಅವಕಾಶವಿರುವುದಿಲ್ಲ. ಯಾವುದೇ ರೀತಿಯ ಗುಂಪುಗಾರಿಕೆ ಯಾರೂ ಮಾಡಬಾರದು. ಸಮಾಜದ ಸಂಘಟನೆಗೆ ಸಹಕರಿಸಬೇಕು ಎಂದು ಅವರು ಹೇಳಿದ್ದಾರೆ.
ಕಲಬುರಗಿ: ಸಂವಿಧಾನ ಸಮರ್ಪಣಾ ದಿನಾಚರಣೆ ಅಂಗವಾಗಿ ಸರ್ಕಾರಿ ಪದವಿ ಸ್ವಾಯತ್ತ ಮಹಾವಿದ್ಯಾಲಯದಲ್ಲಿ ಜಿಲ್ಲಾಡಳಿತ,ಜಿಲ್ಲಾ ಪಂಚಾಯತ್,ಮಹಾನಗರ ಪಾಲಿಕೆ,ಸಮಾಜ ಕಲ್ಯಾಣ ಇಲಾಖೆ, ಕನ್ನಡ…
ಕಲಬುರಗಿ: ಸರಕಾರಿ ಮಹಾವಿದ್ಯಾಲಯ ಸ್ವಾಯತ್ತ ಕಲಬುರಗಿ ಹಾಗೂ ಸಿ.ಆರ್.ಸಿ ಸ್ನೇಹ ಬಳಗ ಕಲಬುರಗಿ ಮತ್ತು ಬೆಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ…
ಕಲಬುರಗಿ: ಸುವರ್ಣ ಭವನ (ಕನ್ನಡ ಭವನ)ದಲ್ಲಿ ಸ್ಲಂ ಜನಾಂದೋಲನ ಕರ್ನಾಟಕ ಜಿಲ್ಲಾ ಘಟಕ ವತಿಯಿಂದ ಸಂವಿಧಾನ ಸಮರ್ಪಣಾ ದಿನದ ಅಂಗವಾಗಿ…
ಕಲಬುರಗಿ : ಸರಕಾರಿ ಮಹಾವಿದ್ಯಾಲಯ ಸ್ವಾಯತ್ತ ಕಲಬುರಗಿಯಲ್ಲಿ ಎನ್.ಎಸ್.ಎಸ್, ರೆಡ್‍ಕ್ರಾಸ್, ಸ್ಕೌಟ್ಸ್ ಆಂಡ್ ಗೈಡ್ಸ್, ಐ.ಕ್ಯೂ.ಎ.ಸಿ ಮತ್ತು ಸಾಂಸ್ಕøತಿಕ ಘಟಕಗಳ…
ಕಲಬುರಗಿ; ಶಿಶು ಮಗುವಿಗೆ ಅಪಹರಣಕಾರರನ್ನು ಬಂಧಿಸಿದ ಕಲಬುರಗಿ ಪೆÇೀಲೀಸ್ ಇಲಾಖೆಗೆ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯಿಂದ ಅಭಿನಂದನೆ ವ್ಯಕ್ತಪಡಿಸಿದೆ.…
ಕಲಬುರಗಿ; ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಜೇವರ್ಗಿ, ಯಡ್ರಾಮಿ, ಅಫಜಲಪೂರ, ಸೇಡಂ, ಆಳಂದ, ಚಿಂಚೋಳಿ ತಾಲೂಕಿನಲ್ಲಿ ಜಂಗಲ್ ಕಟಿಂಗ್ ಹಾಗೂ ಮೆಂಟನೆನ್ಸ್…