ಬಿಸಿ ಬಿಸಿ ಸುದ್ದಿ

ಮಹಿಪಾಲರೆಡ್ಡಿ ನಟನೆಯ `ತಮಟೆ’ ಸಿನಿಮಾ ನಾಳೆ ಬಿಡುಗಡೆ

ಕಲಬುರಗಿ, ನ.೨೮ – ಹಿರಿಯ ಚಿತ್ರನಟ ಮದನ್ ಪಟೇಲ್ ಅವರು ನಾಯಕ ನಟರಾಗಿರುವ ಕಾದಂಬರಿ ಆಧಾರಿತ `ತಮಟೆ’ ಸಿನಿಮಾ ನವೆಂಬರ್ ೨೯ ರಂದು ಶುಕ್ರವಾರ ರಾಜ್ಯಾದ್ಯಂತ ಬಿಡುಗಡೆಯಾಗಲಿದೆ.

ಪ್ರಖ್ಯಾತ ಸಿನಿಮಾ ನಾಯಕ ನಟ ಮಯೂರ್ ಪಟೇಲ್ ಅವರ ನಿರ್ದೇಶನದಲ್ಲಿ ಮೂಡಿಬಂದಿರುವ ಈ ಸಿನಿಮಾವನ್ನು ವಂದನಾ ಎಂ. ನಿರ್ಮಾಣ ಮಾಡಿದ್ದು, ಸ್ವತಃ ಮದನ್ ಪಟೇಲ್ ಅವರೇ ಸಂಗೀತ ನಿರ್ದೇಶನ ಮಾಡಿದ್ದಾರೆ. ಮೀಡಿಯಾ ಇಂಟರನ್ಯಾಷನಲ್ ಅರ್ಪಿಸುವ ಮತ್ತು ಶ್ರೀ ರೇಣುಕಾ ಯಲ್ಲಮ್ಮ ದೇವಿ ಕ್ರಿಯೇಷನ್ ರವರ `ತಮಟೆ’ ಸಿನಿಮಾವು ರಾಜ್ಯದ ಎಲ್ಲ ಜಿಲ್ಲೆಗಳ ಟಾಕೀಸ್‌ನಲ್ಲಿ ರಿಲೀಸ್ ಆಗಲಿದೆ.

ಕಲಬುರಗಿಯ ಸಾಹಿತಿ, ಪತ್ರಕರ್ತ ಹಾಗೂ ರಂಗಭೂಮಿ ನಟ ಮಹಿಪಾಲರೆಡ್ಡಿ ಮುನ್ನೂರ್ ಅವರು ತಮಟೆ ಸಿನಿಮಾದಲ್ಲಿ ನಟಿಸಿದ್ದಾರೆ. ಎಂಎಲ್‌ಎ ಅವರ ಅಣ್ಣನ ಪಾತ್ರದಲ್ಲಿ ಅಭಿನಯಿಸಿದ್ದು, ನೆಗೆಟಿವ್ ಪಾತ್ರದಲ್ಲಿ ಮಿಂಚಿದ್ದಾರೆ.

ಮದನ್ ಪಟೇಲ್ ನಾಯಕ ನಟರಾಗಿ ನಟಿಸಿದ್ದು, ವಾಣಿಶ್ರೀ, ವಿನಯಾ ಪ್ರಸಾದ್, ರಮೇಶ ಭಟ್, ಸುನಂದಾ ಶ್ರೀ ಗುಬ್ಬಿ, ಮಹಿಪಾಲರೆಡ್ಡಿ ಮುನ್ನೂರ್, ರಮೇಶ ಪಂಡಿತ್ ಸೇರಿದಂತೆ ಅನೇಕರು ತಾರಾಗಣದಲ್ಲಿದ್ದಾರೆ.

ಕಳೆದ ವಾರ ಬಿಡುಗಡೆಯಾದ ಡಾ.ಶಿವರಾಜಕುಮಾರ ಅಭಿನಯದ `ಭೈರತಿ ರಣಗಲ್’ ಸಿನಿಮಾದಲ್ಲಿ ನಟಿಸಿದ್ದರು. ಈ ವಾರ `ತಮಟೆ’ ಸಿನಿಮಾದಲ್ಲೂ ಕೂಡ ಅಭಿನಯಿಸಿದ್ದು, ಇದರಲ್ಲಿ ದೊಡ್ಡ ಪಾತ್ರವಿದೆ. ಇದೂವರೆಗೆ ಸುಮಾರು ಎಂಟು ಸಿನಿಮಾಗಳಲ್ಲಿ ಮಹಿಪಾಲರೆಡ್ಡಿ ನಟಿಸಿದ್ದು, ಕಲಬುರಗಿ ವಿಭಾಗದಿಂದ ಪತ್ರಕರ್ತ-ಸಾಹಿತಿಯೊಬ್ಬರು ಸಿನಿಮಾ ಕ್ಷೇತ್ರದಲ್ಲಿಯೂ ಸಹ ನಟಿಸುತ್ತಿರುವುದು ಹೆಮ್ಮೆಯ ಸಂಗತಿ.

vikram

Recent Posts

ಎಂ.ಎಸ್ ಇರಾಣಿ ವಿದ್ಯಾರ್ಥಿಗೆ ದ್ವೀತಿಯ ಸ್ಥಾನ

ಕಲಬುರಗಿ: ಸಂವಿಧಾನ ಸಮರ್ಪಣಾ ದಿನಾಚರಣೆ ಅಂಗವಾಗಿ ಸರ್ಕಾರಿ ಪದವಿ ಸ್ವಾಯತ್ತ ಮಹಾವಿದ್ಯಾಲಯದಲ್ಲಿ ಜಿಲ್ಲಾಡಳಿತ,ಜಿಲ್ಲಾ ಪಂಚಾಯತ್,ಮಹಾನಗರ ಪಾಲಿಕೆ,ಸಮಾಜ ಕಲ್ಯಾಣ ಇಲಾಖೆ, ಕನ್ನಡ…

21 hours ago

ವಿದ್ಯಾರ್ಥಿಗಳಿಗೆ ಸಂವಾದ ಕಾರ್ಯಕ್ರಮ

ಕಲಬುರಗಿ: ಸರಕಾರಿ ಮಹಾವಿದ್ಯಾಲಯ ಸ್ವಾಯತ್ತ ಕಲಬುರಗಿ ಹಾಗೂ ಸಿ.ಆರ್.ಸಿ ಸ್ನೇಹ ಬಳಗ ಕಲಬುರಗಿ ಮತ್ತು ಬೆಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ…

21 hours ago

ಸ್ಲಂ ಜನಾಂದೋಲನ ಜಿಲ್ಲಾ ಘಟಕದಿಂದ ಹಕ್ಕು ಪತ್ರ ನೊಂದಣಿ ಖಾತ ಪ್ರತಿ ವಿತರಣೆ

ಕಲಬುರಗಿ: ಸುವರ್ಣ ಭವನ (ಕನ್ನಡ ಭವನ)ದಲ್ಲಿ  ಸ್ಲಂ ಜನಾಂದೋಲನ ಕರ್ನಾಟಕ ಜಿಲ್ಲಾ ಘಟಕ  ವತಿಯಿಂದ ಸಂವಿಧಾನ ಸಮರ್ಪಣಾ ದಿನದ ಅಂಗವಾಗಿ…

21 hours ago

ಸಂವಿಧಾನ ದಿನಾಚರಣೆ

ಕಲಬುರಗಿ : ಸರಕಾರಿ ಮಹಾವಿದ್ಯಾಲಯ ಸ್ವಾಯತ್ತ ಕಲಬುರಗಿಯಲ್ಲಿ ಎನ್.ಎಸ್.ಎಸ್, ರೆಡ್‍ಕ್ರಾಸ್, ಸ್ಕೌಟ್ಸ್ ಆಂಡ್ ಗೈಡ್ಸ್, ಐ.ಕ್ಯೂ.ಎ.ಸಿ ಮತ್ತು ಸಾಂಸ್ಕøತಿಕ ಘಟಕಗಳ…

21 hours ago

ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯಿಂದ ಪೆÇೀಲೀಸ್ ಇಲಾಖೆಗೆ ಅಭಿನಂದನೆ

ಕಲಬುರಗಿ; ಶಿಶು ಮಗುವಿಗೆ ಅಪಹರಣಕಾರರನ್ನು ಬಂಧಿಸಿದ ಕಲಬುರಗಿ ಪೆÇೀಲೀಸ್ ಇಲಾಖೆಗೆ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯಿಂದ ಅಭಿನಂದನೆ ವ್ಯಕ್ತಪಡಿಸಿದೆ.…

21 hours ago

ಲೋಕೋಪಯೋಗಿ ಕಚೇರಿ ಮುಂದೆ ನಮ್ಮ ಕರ್ನಾಟಕ ಸೇನೆಯಿಂದ ಧರಣಿ ಸತ್ಯಾಗ್ರಹ

ಕಲಬುರಗಿ; ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಜೇವರ್ಗಿ, ಯಡ್ರಾಮಿ, ಅಫಜಲಪೂರ, ಸೇಡಂ, ಆಳಂದ, ಚಿಂಚೋಳಿ  ತಾಲೂಕಿನಲ್ಲಿ ಜಂಗಲ್ ಕಟಿಂಗ್ ಹಾಗೂ ಮೆಂಟನೆನ್ಸ್…

21 hours ago