ತೊಗರಿ ಬೆಳೆ ಹಾನಿ ಪ್ರದೇಶಕ್ಕೆ‌ ಡಿ.ಸಿ ಭೇಟಿ: ಶೀಘ್ರ ಪರಿಹಾರದ ಭರವಸೆ

0
23

ಕಲಬುರಗಿ: ನ.28 ಜಿಲ್ಲೆಯಾದ್ಯಂತ ಮಣ್ಣಿನಲ್ಲಿ ತೇವಾಂಶದ ಕೊರತೆ ಹಾಗೂ ಒಣ ಬೇರು ಕೊಳೆ ರೋಗದಿಂದ ತೊಗರಿ ಒಣಗುತ್ತಿರುವ ಹಿನ್ನೆಲೆಯಲ್ಲಿ ಗುರುವಾರ ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅವರು ವಿವಿಧ ಗ್ರಾಮಕ್ಕೆ ತೆರಳಿ ತೊಗರಿ ಬೆಳೆ ಹಾನಿ ಪರಿಶೀಲಿಸಿದರು.

ಕಲಬುರಗಿ ತಾಲೂಕಿನ ಪಟ್ಟಣ, ಆಳಂದ ತಾಲೂಕಿನ ಕಡಗಂಚಿ ಹಾಗೂ ಅಫಜಲಪೂರ ತಾಲೂಕಿನ ನೀಲೂರು ಗ್ರಾಮಗಳ ಕೃಷಿ ಕ್ಷೇತ್ರಗಳಿಗೆ ಭೇಟಿ ನೀಡಿ ತೊಗರಿ ಬೆಳೆ ಒಣಗುತ್ತಿರುವ ಬಗ್ಗೆ ವೀಕ್ಷಿಸಿ ರೈತರಿಂದ‌ ಬೆಳೆ ಹಾನಿ‌ ಕುರಿತು ಮಾಹಿತಿ ಪಡೆದುಕೊಂಡರು.

Contact Your\'s Advertisement; 9902492681

ಈ ಸಂದರ್ಭದಲ್ಲಿ ಡಿ.ಸಿ. ಬಿ.ಫೌಜಿಯಾ ತರನ್ನುಮ್ ಮಾತನಾಡಿ, ಬೆಳೆ ವಿಮೆ (ಸ್ಥಳೀಯ ವಿಕೋಪ)ದ ಜಿಲ್ಲಾ ಮಟ್ಟದ ಸಮಿತಿ ಸಭೆ ಬುಧವಾರ ನಡೆಸಿದ್ದು,
ಪ್ರಸಕ್ತ 2024-25ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ತೊಗರಿ, ಉದ್ದು, ಹೆಸರು, ಹತ್ತಿ, ಸೋಯಾಬೀನ್ ಇತರೆ ಮುಂಗಾರು ಬೆಳೆಗಳಿಗೆ ಬೆಳೆ ವಿಮೆ ಮಾಡಿಸಿರುವ ಅಂದಾಜು ಜಿಲ್ಲೆಯ 2.03 ಲಕ್ಷ ರೈತರಿಗೆ 76.94‌ ಕೋಟಿ ರೂ. ಸ್ಥಳೀಯ ವಿಕೋಪ ಘಟಕದಡಿ ಮಧ್ಯಂತರ ಪರಿಹಾರ ರೈತರ ಖಾತೆಗೆ ಜಮೆ ಮಾಡಲು ಇಫ್ಕೊ-ಟೋಕಿಯೋ ಫಸಲ್‌ ಬಿಮಾ ಸಂಸ್ಥೆಗೆ ಸೂಚಿಸಲಾಗಿದೆ‌ ಎಂದು ನೆರೆದ ರೈತರಿಗೆ ಅಭಯ ನೀಡಿದರು.

ಈ ಸಂದರ್ಭದಲ್ಲಿ ಜಂಟಿ ಕೃಷಿ ನಿರ್ದೇಶಕ ಸಮದ್ ಪಟೇಲ್ ಮಾತನಾಡಿ, ನೀರಾವರಿ ಸೌಲಭ್ಯವಿರುವ ರೈತರು ಕೂಡಲೇ ಒಂದು ಸಲ ನೀರನ್ನು ತೊಗರಿ ಬೆಳೆಗೆ ಹಾಯಿಸಲು ನೀರಾವರಿ ಸೌಲಭ್ಯ ಇಲ್ಲದಿದ್ದಲ್ಲಿ ಅಂತರ ಬೇಸಾಯ ಕೈಗೊಂಡು ಬಿರುಕುಗಳನ್ನು ಮುಚ್ಚಲು ಕ್ರಮ‌ವಹಿಸಬೇಕೆಂದು ರೈತರಿಗೆ ಸಲಹೆ ನೀಡಿದರು.

ತೋಟಗಾರಿಕೆ ಉಪನಿರ್ದೇಶಕ ಸಂತೋಷ ಇನಾಂದಾರ, ಕೃಷಿ ಉಪನಿರ್ದೇಶಕ ಸೋಮಶೇಖರ್ ಬಿರಾದಾರ, ಕಲಬುರಗಿ ತಹಶೀಲ್ದಾರ ಆನಂದ ಕೆ., ಆಳಂದ ತಹಶೀಲ್ದಾರ ಅಣ್ಣಾರಾವ ಪಾಟೀಲ ಸೇರಿದಂತೆ ಮತ್ತಿತರು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here