ಬಿಸಿ ಬಿಸಿ ಸುದ್ದಿ

ಪ್ರಮಾಣಪತ್ರಗಳ ವಿತರಣೆ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳ ಉಚಿತ ಕಾರ್ಯಾಗಾರ ವಿದ್ಯಾರ್ಥಿ ದೆಸೆಯಿಂದಲೇ ಸ್ಪರ್ಧಾಮನೋಭಾವನೆ ಅಗತ್ಯ – ಡಾ.ಸ್ವಾಮಿರಾವ ಕುಲಕರ್ಣಿ ಸಲಹೆ

ಕಲಬುರಗಿ: ಎಲ್ಲದಕ್ಕೂ ಸ್ಪರ್ದೆ ಏರ್ಪಡುವ ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ನಿರಂತರ ಅಧ್ಯಯನ, ಸಮಯದ ಸದುಪಯೋಗ, ದಿನಪತ್ರಿಕೆಗಳ ಜೊತೆಗೆ ಹಳೆಯ ಪ್ರಶ್ನೆ ಪತ್ರಿಕೆಗಳನ್ನು ಓದುವ ಮೂಲಕ ಸ್ಪರ್ಧಾ ಮನೋಭಾವ ರೂಢಿಸಿಕೊಳ್ಳಬೇಕು ಎಂದು ಹಿರಿಯ ಸಾಹಿತಿ ಡಾ.ಸ್ವಾಮಿರಾವ ಕುಲಕರ್ಣಿ ಸಲಹೆ ನೀಡಿದರು.

ನಗರದ ಜೆ.ಆರ್ ನಗರದಲ್ಲಿನ ‘ಸಕ್ಸಸ್ ಕಂಪ್ಯೂಟರ ತರಬೇತಿ ಕೇಂದ್ರ’ದಲ್ಲಿ ಸಕ್ಸಸ್ ಸಂಸ್ಥೆ ಮತ್ತು ‘ಬಸವೇಶ್ವರ ಸಮಾಜ ಸೇವಾ ಬಳಗ’ದ ವತಿಯಿಂದ ಏರ್ಪಡಿಸಿದ್ದ ಸ್ಪರ್ಧಾತ್ಮಕ ಪರೀಕ್ಷೆಗಳ ಉಚಿತ ಕಾರ್ಯಾಗಾರ ಮತ್ತು ಆಗಷ್ಟ್ ಬ್ಯಾಚ್‌ನ ವಿದ್ಯಾರ್ಥಿಗಳ ಪ್ರಮಾಣಪತ್ರ ವಿತರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಸಂಸ್ಥೆಯ ಅಧ್ಯಕ್ಷ ಅಸ್ಲಾಂ ಶೇಖ್ ಮಾತನಾಡಿ, ನಮ್ಮ ಸಂಸ್ಥೆಯಲ್ಲಿ ತರಬೇತಿ ಪಡೆದ ನೂರಾರು ವಿದ್ಯಾರ್ಥಿಗಳಿಂದು ಬೇರೆ-ಬೇರೆ ಹುದ್ದೆಗಳಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ವಯಂ ಉದ್ಯೋಗವನ್ನು ಮಾಡುತ್ತ್ತಿದ್ದಾರೆ. ಪ್ರಸ್ತುತ ಸಂದರ್ಭಗಳಲ್ಲಿ ಎಲ್ಲರಿಗೂ ಕಂಪ್ಯೂಟರ ಜ್ಞಾನ ಅಗತ್ಯವಾಗಿದ್ದು ತರಬೇತಿ ಪಡೆಯಬೇಕು. ವಿದ್ಯಾರ್ಥಿಗಳು ಕೇವಲ ಪಠ್ಯಕ್ಕೆ ಮಾತ್ರ ಸೀಮಿತವಾದರೆ ವ್ಯಕ್ತಿತ್ವ ವಿಕಸನ ಅಸಾಧ್ಯ. ಈ ನಿಟ್ಟಿನಲ್ಲಿ ನಮ್ಮ ಸಂಸ್ಥೆಯಲ್ಲಿ ನಿರಂತರವಾಗಿ ಹತ್ತು ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ವಿದ್ಯಾರ್ಥಿಗಳಿಗೆ ಸಾಮಾನ್ಯ ಜ್ಞಾನ ಮುಟ್ಟಿಸುವ ಕಾರ್ಯ ಸಂಸ್ಥೆ ಮಾಡಲಾಗುತ್ತಿದೆ. ಇದರ ಸದುಪಯೋಗವನ್ನು ಮಾಡಿಕೊಳ್ಳಲು ತಿಳಿಸಿದರು.

ಕಾರ್ಯಕ್ರಮದಲ್ಲಿ ಕಸಾಪ ಉತ್ತರ ವಲಯದ ಗೌರವ ಅಧ್ಯಕ್ಷ ಶಿವಯೋಗೆಪ್ಪಾ ಎಸ್.ಬಿರಾದಾರ, ಸಮಾಜ ಸೇವಕ ಓಂಕಾರ ವಠಾರ, ಸಂಸ್ಥೆಯ ಶಿಕ್ಷಕಿಯರಾದ ಪ್ರಿಯಾಂಕಾ ಉಜಳಂಬಿ, ನಿಲೊಫರ್ ಶೇಖ್, ಐಶ್ವರ್ಯ ಬಿರಾದಾರ, ಪೂಜಾ ಜಮಾದಾರ ಹಾಗೂ ವಿದ್ಯಾರ್ಥಿಗಳಿದ್ದರು.

vikram

Recent Posts

ಕೇಂದ್ರ ಗೃಹ ಸಚಿವ ಅಮಿತ್ ಷಾ ಪ್ರತಿಕೃತಿ ದಹಿಸಿ ಡಿಎಸ್‌ಎಸ್ ಪ್ರತಿಭಟನೆ ಅಂಬೇಡ್ಕರ್‌ರನ್ನು ಅವಮಾನಿಸಿದ ಅಮಿತ್ ಷಾ ಗಡಿಪಾರು ಮಾಡಿ-ಕ್ರಾಂತಿ

ಸುರಪುರ: ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರನ್ನು ಅವಮಾನಿಸಿ ಮಾತನಾಡಿರುವ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರನ್ನು…

4 hours ago

ಮಹಿಳಾ ಸಾಧಕರಿಗೆ ಸನ್ಮಾನ

ಕಲಬುರಗಿ: ನಗರದ ಹ್ಯಾಪಿ ಫಂಕ್ಷನ್ ಹಾಲ್‌ನಲ್ಲಿ ರಂಗಾAತರAಗ ಸಾಂಸ್ಕೃತಿಕ ಕಲಾ ಸಂಘದ ವತಿಯಿಂದ ಕನ್ನಡ ರಾಜ್ಯೋತ್ಸವದ ಪ್ರಯುಕ್ತ "ಕನ್ನಡಂ ಗೆಲ್ಗೆ…

4 hours ago

ಕನ್ನಡ ಸೈನ್ಯದ ಕನ್ನಡ ಉತ್ಸವ

ಕಲಬುರಗಿ: ನಗರದ ಸಿದ್ದಾರ್ಥ ವೃತ್ತ (ಗೋವಾ ಹೊಟೇಲ್) ಟ್ಯಾಂಕ್ ಬಂಡ್ ಮುಖ್ಯ ರಸ್ತೆಯ ಆವರಣ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಮಹಾಮಂಟಪದಲ್ಲಿ…

4 hours ago

ಜಿಲ್ಲಾಧಿಕಾರಿ ಡಾ. ಫೌಜಿಯಾ ತರನ್ನುಮ್ ಸೇರಿ ಸನ್ಮಾನ

ಕಲಬುರಗಿ: ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಜಿಲ್ಲಾ ಶಾಖೆ ಕಲಬುರಗಿ ವತಿಯಿಂದ ಕಲಬುರಗಿ ಜಿಲ್ಲಾಧಿಕಾರಿ ಡಾ.ಫೌಜಿಯಾ ತರನ್ನುಮ್, ಜಿಲ್ಲಾ…

4 hours ago

ಸಂಸತ್ತಿನಲ್ಲಿ ಕೇಂದ್ರದ ಗೃಹ ಮಂತ್ರಿ ಅಮಿತ್ ಷಾ ಹೇಳಿಕೆಗೆ ದಿನೇಶ ದೊಡ್ಡಮನಿ ಖಂಡನೆ

ಕಲಬುರಗಿ: ಸಂಸತ್ತ ಅಧಿವೇಶನದಲ್ಲಿ ಕೇಂದ್ರದ ಗೃಹ ಮಂತ್ರಿ ಅಮಿತ್ ಷಾ ಮಾತನಾಡಿ ಸಂವಿಧಾನ ಶಿಲ್ಪಿ ಬಾಬಾಸಾಹೇಬ್ ಡಾ. ಬಿ ಆರ್…

13 hours ago

ಅನುದಾನಿತ ಶಾಲಾ ಕಾಲೇಜುಗಳ ನೌಕರರ ಪಿಂಚಣಿ ಹೋರಾಟಕ್ಕೆ ಹೈ ಕ ಶಿಕ್ಷಣ ಸಂಸ್ಥೆಯ ನೌಕರರ ಬೆಂಬಲ

ಬೆಳಗಾವಿ: ಕರ್ನಾಟಕ ರಾಜ್ಯ ಅನುದಾನಿತ ಶಾಲಾ ಕಾಲೇಜುಗಳ ಪಿಂಚಣಿ ವಂಚಿತ ನೌಕರರ ಸಂಘ (ರಿ ) *ಪ್ರಾಣ ಬಿಟ್ಟೇವು ಪಿಂಚಣಿ…

1 day ago