ಸುರಪುರ: ಕೃಷ್ಣಾ ಮೇಲ್ದಂಡೆ ಕಾಲುವೆ ಭಾಗದ ರೈತರು ಬೆಳೆದ ಮುಂಗಾರು ಬೆಳೆಗಳು ಈಗಾಗಲೆ ಕಟಾವಿಗೆ ಬಂದಿದ್ದು ಎರಡನೇ ಅವಧಿಯ ಹಿಂಗಾರು ಬೆಲೆಗಳಿಗೆ ನೀರು ಹರಿಸುವಂತೆ ಶಾಸಕ ನರಸಿಂಹ ನಾಯಕ(ರಾಜುಗೌಡ) ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪನವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದು.ರೈತರು ಸತತ ಬರಗಾಲದಿಂದ ಸಂಕಷ್ಟದಲ್ಲಿದ್ದು ಈಬಾರಿ ಆಲಮಟ್ಟಿ ಹಾಗು ನಾರಾಯಣಪುರ ಜಲಾಶಯಗಳಲ್ಲಿ ನೀರು ಭರ್ತಿಯಾಗಿದೆ.ಆದ್ದರಿಂದ ಕೂಡಲೆ ನೀರಾವರಿ ಸಲಹಾ ಸಮಿತಿ ಸಭೆ ನಡೆಸಿ ಹಿಂಗಾರು ಬೆಳೆಗಳಿಗೆ ನೀರು ಬಿಡುವ ಕುರಿತು ಘೋಷಣೆ ಮಾಡಿದರೆ ರೈತರಿಗೆ ಅನುಕೂಲವಾಗಲಿದೆ.ಆದ್ದರಿಂದ ಶೀಘ್ರವೆ ಸಭೆಯನ್ನು ಕರೆಯಲು ಸೂಚಿಸುವಂತೆ ಮನವಿ ಸಲ್ಲಿಸಿದರು.
ಮನವಿ ಸ್ವೀಕರಿಸಿದ ಮುಖ್ಯಮಂತ್ರಿಗಳು ಶೀಘ್ರದಲ್ಲಿ ನೀರಾವರಿ ಸಲಹಾ ಸಮಿತಿ ಸಭೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ ಎಂದು ಶಾಸಕರು ಪತ್ರಿಕೆಗೆ ತಿಳಿಸಿದ್ದಾರೆ.ಈ ಸಂದರ್ಭದಲ್ಲಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ಇದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…