ನೂರು ಜನ್ಮಕೂ’ ಧಾರಾವಾಹಿ ಆರಂಭ

0
14

ಬೆಂಗಳೂರು: ಹೃದಯಸ್ಪರ್ಶಿ ಧಾರಾವಾಹಿಗಳ ಮೂಲಕ ಕನ್ನಡ ಪ್ರೇಕ್ಷಕನ ಮನಸೂರೆಗೊಂಡಿರುವ ಕಲರ್ಸ್ ಕನ್ನಡ ವಾಹಿನಿಯು ಮತ್ತೊಂದು ಹೊಸ ದೈನಿಕ ಧಾರಾವಾಹಿ ಆರಂಭಿಸುತ್ತಿದೆ. ಡಿ.23ರಿಂದ ಪ್ರತಿ ರಾತ್ರಿ 8:30ಕ್ಕೆ ಪ್ರಸಾರಗೊಳ್ಳಲಿರುವ ಈ ಹೊಸ ಧಾರಾವಾಹಿ’ನೂರು ಜನ್ಮಕೂ’ ವಿಭಿನ್ನವಾದ ರೋಚಕ ಕತೆಯನ್ನು ಹೊಂದಿದೆ. ಮೊದಲ ನೋಟಕ್ಕೆ’ನೂರು ಜನ್ಮಕೂ’ ಒಂದು ಉತ್ಕಟ ಪ್ರೇಮಕತೆ. ಪ್ರತಿಷ್ಠಿತ ಕದಂಬ ವಂಶದ ಉತ್ತರಾಧಿಕಾರಿ ಚಿರಂಜೀವಿ ಹಾಗೂ ಮೈತ್ರಿ ಎಂಬ ಸಾಧಾರಣ ಕುಟುಂಬದ ಹುಡುಗಿಯ ನಡುವಿನ ಪ್ರೇಮದ ಕಥೆಯಿದು. ಚಿರಂಜೀವಿ ಅತಿಮಾನುಷ ಶಕ್ತಿಗಳ ಹಿಡಿತಕ್ಕೆ ಸಿಕ್ಕು ನಲುಗುವಾಗ ರಾಘವೇಂದ್ರಸ್ವಾಮಿಯ ಪರಮಭಕ್ತೆಯಾದ ಮೈತ್ರಿ ತನ್ನ ಶ್ರದ್ಧೆ ಹಾಗೂ ನಂಬಿಕೆಗಳ ಮುಖಾಂತರ ಅವನನ್ನು ರಕ್ಷಿಸಲು ಪಣತೊಡುತ್ತಾಳೆ. ಚಿರಂಜೀವಿಯ ಜೀವ ಕಾಪಾಡುತ್ತಲೇ ತಮ್ಮ ಪ್ರೀತಿಯನ್ನೂ ಉಳಿಸಿಕೊಳ್ಳಲು ಒದ್ದಾಡುವ ಹೆಣ್ಣಾಗಿ ಮೈತ್ರಿ ನೋಡುಗರ ಮನಸನ್ನು ಆವರಿಸಿಕೊಳ್ಳುವುದರಲ್ಲಿ ಸಂಶಯವಿಲ್ಲ. ತಾರಾಗಣ ಶ್ರವಂತ್ ರಾಧಿಕಾ ನಿರ್ದೇಶನದ ಈ ಧಾರಾವಾಹಿಯಲ್ಲಿ ಹೆಸರಾಂತ ನಟನಟಿಯರ ದಂಡೇ ಇದೆ. ‘ಗೀತಾ’ ಧಾರಾವಾಹಿಯಲ್ಲಿ ನಾಯಕ ವಿಜಯ್ ಆಗಿ ನಟಿಸಿದ್ದ ಧನುಷ್ ಗೌಡ ಇದೀಗ ‘ನೂರು ಜನ್ಮಕೂ’ ಧಾರಾವಾಹಿಯಲ್ಲಿ ಚಿರಂಜೀವಿ ಪಾತ್ರದಲ್ಲಿ ನಿಮ್ಮ ಮುಂದೆ ಬರಲಿದ್ದಾರೆ.

———————- ಚಿತ್ರ ಇದೆ

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here