ಗ್ರಾಮೀಣ ವಿವಿಗೆ ಗಾಂಧಿ ಹೆಸರಿಡ
ಕಲಬುರಗಿ: ಗದಗನಲ್ಲಿರುವ ಗ್ರಾಮೀಣಾಭಿವೃದ್ಧಿ ವಿಶ್ವವಿದ್ಯಾಲಯಕ್ಕೆ ಮಹಾತ್ಮಗಾಂಧಿ ಅವರ ಹೆಸರಿಡಬೇಕು ಎಂದು ಮುಖ್ಯಮಂತ್ರಿಗಳ ಸಲಹೆಗಾರ ಹಾಗೂ ಆಳಂದ ಶಾಸಕ ಬಿ.ಆರ್. ಪಾಟೀಲ ತಿಳಿಸಿದರು.
ಮಹಾತ್ಮಗಾಂಧಿ ಅವರ ಆದ್ಯಕ್ಷತೆಯಲ್ಲಿ ನಡೆದಿದ್ದ ಬೆಳಗಾವಿ ಅಧಿವೇಶನದ ಶತಮಾನೋತ್ಸವ ಸ್ಮರಣಾರ್ಥ ವಿಸ್ತ್ರತ ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲುಸಿ) ಸಭೆಯಲ್ಲಿ ಈ ಘೋಷಣೆ ಮಾಡಬೇಕು ಎಂದು ಅವರು ಬುಧವಾರ ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದರು.
ಸಭೆಯಲ್ಲಿ ಆರ್ಥಿಕ ಅಸಮಾನತೆ ಹಾಗೂ ಸಂವಿಧಾನದ ಮೇಲೆ ನಡೆಯುತ್ತಿರುವ ದಾಳಿ ಬಗ್ಗೆ ಪ್ರಮುಖ ಚರ್ಚೆ ನಡೆಸಿ ಕ್ರಾಂತಿಕಾರಿ ಬದಲಾವಣೆ ತರುವ ನಿರ್ಣಯ ಕೈಗೊಳ್ಳಬೇಕು ಎಂದು ಅವರು ತಿಳಿಸಿದರು.
ಸಮಾವೇಶಕ್ಕೆ ಗಾಂಧಿ ಭಾರತ ಹೆಸರಿಟ್ಟಿರುವುದು ಸರಿ. ಆದರೆ ಅದೇವೇಳೆಗೆ ಗಾಂಧಿ ಕನಸಿನ ಗ್ರಾಮೀಣ, ಕುಟೀರ ಉದ್ಯೋಗಗಳಿಗೆ ಪರ್ಯಾಯ ಮಾರ್ಗ ಕಂಡುಕೊಳ್ಳಬೇಕು ಎಂದು ಅವರು ಸಲಹೆ ನೀಡಿದ್ದಾರೆ.
ರಾಜಶೇಖರ ಯಂಕಂಚಿ, ಬಾಬುರಾವ ಗೊಬ್ಬುರ್ ಇದ್ದರು.