ಕಲಬುರಗಿ: ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಅವರನ್ನು ಸಚಿವ ಸ್ಥಾನದಿಂದ ಕೈ ಬಿಡಬೇಕು ಹಾಗೂ ಬಿಜೆಪಿಯ ಎಸ್.ಸಿ./ಎಸ್.ಟಿ ಮೋರ್ಚಾದ ಜಿಲ್ಲಾಧ್ಯಕ್ಷರಾದ ವಿಜಯಕುಮಾರ ಆಡಕಿ ಅವರನ್ನು ಪಕ್ಷದಿಂದ ಉಚ್ಛಾಟಿಸಬೇಕುಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯ ರಾಜ್ಯ ಕಾರ್ಯಾಧ್ಯಕ್ಷ ದಶರಥ ಎಂ.ಕಲಗುರ್ತಿ ಅವರು ಆಗ್ರಹಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆಯೊಂದನ್ನು ನೀಡಿರುವ ಅವರು ಇತ್ತೀಚೆಗೆ ಕಾಟಾಚಾರಕ್ಕೆಂಬಂತೆ ಜಿಲ್ಲೆಗೆ ಆಗಮಿಸಿ ಕೆಡಿಪಿ ಸಭೆ ಕರೆದು ಕಲ್ಲಾಣ ಕರ್ನಾಟಕದ ಜಿಲ್ಲೆಯ ಅಭಿವೃದ್ಧಿ ಯಾವುದೇ ಕ್ರಮಕ್ಕೆಗೊಳ್ಳದೇ ಇರುವುದಷ್ಷೆ ಅಲ್ಲಾ ವಿಜಾಪೂರ ಜಿಲ್ಲೆಯ ಅಸ್ಲಾಂಪೂರ ಗ್ರಾಮದ ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚರವಸಗಿದ ಮತ್ತು ಮುಧೋಳ ತಾಲೂಕಿನ ಶಿರವಾಳ ಗ್ರಾಮದಲ್ಲಿ ನಡೆದ ಜೋಡಿ ಕೊಲೆ, ಸದಾಶಿವ ಆಯೋಗದ ವರದಿ ಹೀಗೆ ಯಾವುದೇ ಮನವಿ ಪತ್ರವನ್ನು ಸ್ವಿಕರಿಸದೇ ದರ್ಪದಿಂದ ವರ್ತಿಸಿರುವ ಸಚಿವರ ಕ್ರಮವನ್ನು ಸಮಿತಿ ಬಲವಾಗಿ ಖಂಡಿಸುತ್ತದೆ ಎಂದು ಹೇಳಿದ್ದಾರೆ.
ಅದರಂತೆ ವಿಜಯಕುಮಾರ ಆಡಕಿ ಅವರು ಇತ್ತೀಚೆಗೆ ನಡೆದ ಸಭೆಗಳಲ್ಲಿ ಬಿಜೆಪಿಯ ಏಜೆಂಟರಂತೆ ವರ್ತಿಸುತ್ತಿರುವುದು ಕಂಡುಬರುತ್ತಿದೆ. ಸಚಿವರನ್ನು ಸಚಿವ ಸ್ಥಾನದಿಂದ ಹಾಗೂ ಬಿಜೆಪಿ ನಗರ ಜಿಲ್ಲಾಧ್ಯಕ್ಷರನ್ನು ಉಚ್ಛಾಟಿಸುವಂತೆ ಕಲಗುರ್ತಿ ಅವರು ಒತ್ತಾಯಿಸಿದ್ದಾರೆ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಕ್ರಮ ಕೈಗೊಳ್ಳದಿದ್ದರೆ, ಮುಂದಿನ ದಿನಗಳಲ್ಲಿ ಉಗ್ರಸ್ವರೂಪದ ಹೋರಾಟ ನಡೆಸಬೇಕಾಗುತ್ತದೆ ಎಂದು ಅವರು ಪ್ರಕಟಣೆ ಮೂಲಕ ಎಚ್ಚರಿಕೆ ನೀಡಿದ್ದಾರೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…