ಕಲಬುರಗಿ: ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆ ಕೇಳಲು ವಿಪಕ್ಷಗಳಿಗಿಲ್ಲ ನೈತಿಕತೆ’ಸಚಿನ್ ಪಂಚಾಳ ಆತ್ಮಹತ್ಯೆ ವಿಚಾರವಾಗಿ ಪ್ರಿಯಾಂಕ್ ಖರ್ಗೆ ಅವರ ರಾಜೀನಾಮೆ ಕೇಳಲು ವಿಪಕ್ಷಗಳಿ ನೈತಿಕತೆಯಿಲ್ಲ ಎಂದು ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಶಿವಾನಂದ ಆರ್ ಕಿಳ್ಳಿ ಹೇಳಿದರು.
ಇತ್ತೀಚೆಗೆ ಬೀದರ ಜಿಲ್ಲೆಯ ಭಾಲ್ಕಿ ತಾಲೂಕಿನ ಗುತ್ತಿಗೆದಾರ ಸಚಿನ್ ಪಂಚಾಳ ಎನ್ನುವಾತ ಹಣಕಾಸಿನ ವಿಚಾರಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಪ್ರಕರಣದಲ್ಲಿ ಸಚಿವರಾದ ಪ್ರಿಯಾಂಕ್ ಖರ್ಗೆ ಅವರ ಹೆಸರನ್ನು ಎಳೆದು ತರುವ ವ್ಯರ್ಥ ಪ್ರಯತ್ನಕ್ಕೆ ವಿಪಕ್ಷಗಳು ಮುಂದಾಗಿದ್ದು ನಾಚಿಕೆಗೇಡಿನ ಸಂಗತಿಯಾಗಿದೆ ಎಂದರು.
ಸಂತೋಷ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂ ಧಿಸಿದಂತೆ ತನಿಖೆಯಾಗಿ ಸತ್ಯಾಸತ್ಯತೆ ಹೊರಬರಬೇಕೆಂದು ಸಚಿವ ಪ್ರಿಯಾಂಕ್ ಖರ್ಗೆ ಅವರೇ ಒತ್ತಾಯಿಸಿದ್ದಾರೆ. ಎಫ್ ಐಆರ್ ಕೂಡ ದಾಖಲಾಗಿದೆ. ತನಿಖೆ ಮುಗಿಯುವ ವರೆಗಾದರೂ ವಿಪಕ್ಷಗಳು, ಬಾಯಿ ಮುಚ್ಚಿಕೊಂಡಿರುವುದು ಬಿಟ್ಟು ಸಚಿವ ಖರ್ಗೆ ರಾಜೀನಾಮೆಗೆ ಒತ್ತಾಯಿಸುತ್ತಿರುವುದು ಸರಿಯಲ್ಲ, ತನಿಖೆಯಿಂದ ಸತ್ಯ ಹೊರ ಬರಲಿದೆ, ಯಾರೇ ಆಗಿದ್ದರೂ ತಪ್ಪು ಮಾಡಿದವರಿಗೆ ಶಿಕ್ಷೆ ಆಗಲಿದೆ ಎಂದು ಹೇಳಿದರು.
ಬಿಜೆಪಿ ತಾಳ್ಮೆ ವಹಿಸಲಿ: ಆತ್ಮಹತ್ಯೆ ಪ್ರಕರಣ ಕುರಿತಾಗಿ ಈಗಾಗಲೇ ಎಫ್‌ಐಆರ್ ದಾಖಲಾಗಿದೆ. ಪೊಲೀಸ್ ರು ತನಿಖೆ ಕೈಗೊಂಡು ಸತ್ಯಾಸತ್ಯತೆ ಬಯ ಲಿಗೆಳೆಯಲಿದ್ದಾರೆ. ಕಾಂಗ್ರೆಸ್ ಪಕ್ಷದವರೇ ಆಗಿರಲಿ, ಯಾರೇ ಆಪ್ತರಾಗಿರಲಿ ತನಿಖೆಯಿಂದ ಎಲ್ಲ ಬಯಲಿಗೆ ಬರುತ್ತದೆ. ಅಲ್ಲಿಯವರೆಗೂ ಬಿಜೆಪಿಯವರು ತಾಳ್ಮೆ ವಹಿಸದೇ ಗೂಂಡಾಗಿರಿ ವರ್ತನೆ ತೋರುತ್ತಿದ್ದಾರೆ ಎಂದು ಶಿವಾನಂದ ಆರ್ ಕಿಳ್ಳಿ ಹೇಳಿಕೆಯಲ್ಲಿ ಕಿಡಿಕಾರಿದ್ದಾರೆ.
ಗುತ್ತಿಗೆದಾರ ಸಚಿನ್ ಸಾವಿಗೆ ಯಾರೇ ಕಾರಣರಾಗಿದ್ದರೂ ಸರ್ಕಾರ ಕಾನೂನಿನ ಮೂಲಕ ಶಿಕ್ಷೆಗೆ ಒಳಪಡಿಸಲು ಪ್ರಮಾಣಿಕ ಪ್ರಯತ್ನ ಮಾಡಲಿದೆ. ಇದಕ್ಕೆ ಸ್ಟೇಷನ್ ಬಜಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದೇ ಸಾಕ್ಷಿ ಎಂದಿದ್ದಾರೆ.
ವಚನ ವಿಜಯೋತ್ಸವ ಫೆ. 10, 11 ಹಾಗೂ 12ರಂದು ಇ- ಮೀಡಿಯಾ ಲೈನ್ ನ್ಯೂಸ್ ಕಲಬುರಗಿ: ಬಸವ ಸೇವಾ ಪ್ರತಿಷ್ಠಾನದ…
ವಚನ ವಿಜಯೋತ್ಸವ ಫೆ. 10, 11 ಹಾಗೂ 12ರಂದು ಇ-ಮೀಡಿಯಾ ಲೈನ್ ನ್ಯೂಸ್ ಕಲಬುರಗಿ: ಬಸವ ಸೇವಾ ಪ್ರತಿಷ್ಠಾನದ ಅಡಿಯಲ್ಲಿ…
ಕಲಬುರಗಿ: ಶ್ರೀಮತಿ ಜ್ಯೋತಿ ಉಪಳಾಂವಕರ ಅವರಿಗೆ ರೈತ ಉದ್ಯಮಿ ಅವ್ವ ಎನ್ನಲು ಹೆಮ್ಮೆ ಎನಿಸುತ್ತದೆ. ಏಕೆಂದರೆ ಕಳೆದ ೫-೬ ವರ್ಷಗಳಿಂದ…
ಇ-ಮೀಡಿಯಾ ಲೈನ್ ನ್ಯೂಸ್ ಅಫಜಲಪುರ: ಪ್ರತಿಯೊಬ್ಬರು ತಮ್ಮ ತಂದೆ ತಾಯಂದಿರು ಹಾಕಿಕೊಟ್ಟ ಮಾರ್ಗದಲ್ಲಿ ಜೀವನ ಸಾಗಿಸಬೇಕೆಂದು ಲೋಕೋಪಯೋಗಿ ಇಲಾಖೆಯ ನಿವೃತ್ತ…
ಇ-ಮೀಡಿಯಾ ಲೈನ್ ನ್ಯೂಸ್ ಅಫಜಲಪುರ: ಪ್ರತಿಯೊಬ್ಬರು ತಮ್ಮ ತಂದೆ ತಾಯಂದಿರು ಹಾಕಿಕೊಟ್ಟ ಮಾರ್ಗದಲ್ಲಿ ಜೀವನ ಸಾಗಿಸಬೇಕೆಂದು ಲೋಕೋಪಯೋಗಿ ಇಲಾಖೆಯ ನಿವೃತ್ತ…
ಕಲಬುರಗಿ: ಹಿರಿಯ ಪತ್ರಕರ್ತರಾದ ಅಜೀಜುಲ್ಲಾ ಸರ್ಮ ಅವರ 47ನೇ ವರ್ಷಗಳ ಉರ್ದು ಪತ್ರಿಕೋದ್ಯಮದಲ್ಲಿ ಸಲ್ಲಿಸಿದ ಸೇವೆ ಹಾಗೂ ಉರ್ದು ಪತ್ರಿಗೆಯಲ್ಲಿನ…