ಕಲಬುರಗಿ: ಗ್ರಾಮೀಣಾಭಿವೃದ್ಧಿ ಮತ್ತು ಐಟಿ, ಬಿಟಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ಸತತ ಮೂರು ಬಾರಿ ಶಾಸಕರಾಗಿ, ವಿವಿಧ ಇಲಾಖೆಯ ಸಚಿವರಾಗಿ ಜನಪರವಾದ ಕೆಲಸ ಮಾಡುತ್ತಿರುವುದು ಬಿಜೆಪಿ ಮುಖಂಡರಿಗೆ ಅರಗಿಸಕಿಕೊಳ್ಳಕ್ಕಾಗದೆ ಪ್ರತಿಯೊಂದು ವಿಷಯಕ್ಕೂ ಸಚಿವರ ಹೆಸರು ತಳಕು ಹಾಕಿ ರಾಜಿನಾಮೆ ಕೇಳುತ್ತಿರುವುದು ನಾಚಿಕೆಗೇಡಿತನ ಸಂಗತಿಯಾಗಿದೆ ಎಂದು ಮಾಜಿ ಜಿ.ಪಂ.ಸದಸ್ಯರಾದ ಸಿದ್ಧಾರ್ಥ ಬಸರಿಗಿಡ ಅವರು ಹೇಳಿದರು.
ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಇತ್ತೀಚೆಗೆ ಬೀದರ ಜಿಲ್ಲೆಯ ಯುವ ಗುತ್ತಿಗೆದಾರ ಸಚಿನ್ ಪಾಂಚಾಳ ಅವರ ಆತ್ಮಹತ್ಯೆ ಮಾಡಿಕೊಳ್ಳುವ ಮುಂಚೆ ಪ್ರಿಯಾಂಕ್ ಖರ್ಗೆ ಅವರ ಆಪ್ತರ ಹೆಸರು ಡೆತ್ ನೋಟಲ್ಲಿ ಹೆಸರು ಉಲ್ಲೇಖಿಸಲಾಗಿದೆ. ಆಪ್ತರು ಎನ್ನುವ ಒಂದೇ ಕಾರಣಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಅವರ ಮೇಲೆ ಇಲ್ಲಸಲ್ಲದ ಆರೋಪ ಮಾಡಿ ಬಿಜೆಪಿ ಮುಖಂಡರು ಸಚಿವರ ರಾಜಿನಾಮೆ ಕೇಳುವ ಮೂಲಕ ಸಾವಿನಲ್ಲೂ ರಾಜಕೀಯ ಮಾಡುತ್ತಿರುವುದು ಎಷ್ಟರಮಟ್ಟಿಗೆ ಸರಿ ಎಂದು ವಿರೋಧ ಪಕ್ಷದ ನಾಯಕರಿಗೆ ಬಸರಿಗಿಡ ಪ್ರಶ್ನೆ ಮಾಡಿದರು?.
ಸಚಿವ ಪ್ರಿಯಾಂಕ್ ಖರ್ಗೆ ಅವರೇ, ಖುದ್ಧಾಗಿ ಗೃಹ ಸಚಿವರಿಗೆ ಸಚಿನ ಪಾಂಚಾಳ ಆತ್ಮಹತ್ಯೆ ಪ್ರಕರಣವನ್ನು ಸಿಐಡಿ ಇಲಾಖೆಗೆ ವಹಿಸಿ ನಿಷ್ಪಕ್ಷಪಾತ ತನಿಖೆ ನಡೆಸಬೇಕೆಂದು ಮನವಿ ಮಾಡಿದ್ದಾರೆ. ಆತ್ಮಹತ್ಯೆ ಮಾಡಿಕೊಳ್ಳಲು ಕಾರಣಿಕರ್ತರು ಯಾರೇ ಆಗಲಿ, ಅವರಿಗೆ ಕಾನೂನಿನ ಪ್ರಕಾರ ಕಠಿಣ ಶಿಕ್ಷೆ ಆಗಲೆಂದು ಸಚಿವರು ಮೊದಲ ದಿನದಿಂದಲೂ ಹೇಳಿದ್ದಾರೆ. ಸಂಪೂರ್ಣ ತನಿಖೆ ಮುಗಿಯುವವರೆಗೂ ಸಹನೆ ತೋರದೆ, ಬಿಜೆಪಿಯವರು ಸಚಿವರ ರಾಜಿನಾಮೆ ಕೇಳುವ ಮುಖಾಂತರ ಸಚಿನ ಸಾವಿನಲ್ಲಿ ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳಲ್ಲು ಮುಂದಾಗಿದ್ದಾರೆ. ಯಾವುದೇ ಕಾರಣಕ್ಕೂ ಸಚಿವ ಪ್ರಿಯಾಂಕ್ ಖರ್ಗೆ ಅವರು ರಾಜಿನಾಮೆ ನೀಡುವ ಪ್ರಶ್ನೆಯೇ ಇಲ್ಲ. ಇಂತಹ ನೂರು ಸುಳ್ಳು ಆರೋಪಗಳನ್ನು ಬಿಜೆಪಿ ಪಕ್ಷದವರು ಮಾಡಿದರು ಪ್ರಿಯಾಂಕ್ ಖರ್ಗೆ ಅವರು ಕುಗ್ಗುವುದಿಲ್ಲ ಎಂದು ಸಿದ್ಧಾರ್ಥ ಬಸರಿಗಿಡ ಹೇಳಿದರು.
ಯುವ ನಾಯಕರು ಹಾಗೂ ಸತತ ಮೂರು ಬಾರಿ ಸಚಿವರಾಗಿ ರಾಜ್ಯ ಉದ್ದಗಲಕ್ಕೂ ಅಭಿವೃದ್ಧಿ ಕೆಲಸಗಳನ್ನು ಮಾಡುತ್ತಿರುವ ಸಚಿವ ಪ್ರಿಯಾಂಕ್ ಖರ್ಗೆ ಅವರ ಏಳಿಗೆ ಸಹಿಸಿಕೊಳ್ಳಕ್ಕಾಗದೆ, ಜಿಲ್ಲೆಯ ಹಾಗೂ ರಾಜ್ಯದ ನಾಯಕರು ಅವರ ಮೇಲೆ ಸುಳ್ಳು ಆರೋಪಗಳನ್ನು ಮಾಡುವ ಮೂಲಕ ಅವರನ್ನು ಕುಗ್ಗಿಸುವ ಪ್ರಯತ್ನ ಮೊದಲಿನಿಂದಲೂ ಮಾಡುತ್ತಿದ್ದಾರೆ ಎಂದು ಮಾಜಿ ಜಿ.ಪಂ.ಸದಸ್ಯರಾದ ಪ್ರಕಾಶ ಜಮಾದಾರ ತಿಳಿಸಿದರು.
ಕಲಬುರಗಿ ಜಿಲ್ಲೆಯಲ್ಲಿ ಬಿಜೆಪಿ ಮುಖಂಡರು ಮಾಡುತ್ತಿರುವ ಅವ್ಯವಹಾರಗಳನ್ನು ಮಟ್ಟ ಹಾಕುತ್ತಿರುವ ಪ್ರಿಯಾಂಕ್ ಖರ್ಗೆ ಅವರು, ಅದಕ್ಕಾಗಿ ಅವರ ಮೇಲೆ ಇಂತಹ ವಿಷಯದಲ್ಲಿ ತಳಕು ಹಾಕುವ ಪ್ರಯತ್ನ ಬಿಜೆಪಿ ಪಕ್ಷದವರು ನಿರಂತರ ಮಾಡುತ್ತಿದ್ದಾರೆ ಅವರ ಪ್ರಯತ್ನ ಎಂದಿಗೂ ಫಲಿಸುವುದಿಲ್ಲ. ಯಾಕೆಂದರೆ, ಜನಪರವಾದ ಕೆಲಸ ಮಾಡುತ್ತಿರುವ ನಾಯಕರಿಗೆ ಯಾವ ಕುತಂತ್ರದಿಂದ ಕುಗ್ಗಿಸಲು ಯಾರಿಂದಲೂ ಸಾದ್ಯವಿಲ್ಲ ಎಂದು ಜಮಾದಾರ ಬಿಜೆಪಿಯವರಿಗೆ ಟಾಂಗ್ ನೀಡಿದರು.
ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಮುಖಂಡರಾದ ನಾಗರಾಜ ನಿಂಬಿರ್ಗಿ, ಗಣಪತಿ ಪೂಜಾರಿ, ನಬಿಸಾಬ್ ಮಂಗಳೂರು ಇದ್ದರು