ಕಲಬುರಗಿ: ಮಹಾತ್ಮ ಗಾಂಧೀಜಿಯವರ ೧೫೦ನೇ ಜನ್ಮ ವರ್ಷಾಚರಣೆ ಹಿನ್ನೆಲೆಯಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಗುಲಬರ್ಗಾ ವಿಶ್ವವಿದ್ಯಾಲಯದ ಆವರಣದ ಬಸ್ ನಿಲ್ದಾಣದಲ್ಲಿ ಆಯೋಜಿಸಲಾಗಿರುವ ಗಾಂಧೀಜಿಯವರ ಅಪೂರ್ವ ಛಾಯಾಚಿತ್ರ ಪ್ರದರ್ಶನವನ್ನು ಮಂಗಳವಾರ ಕಲಬುರಗಿ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಸುವರ್ಣ ಹಣಮಂತರಾಯ ಮಾಲಾಜಿ ಅವರು ಉದ್ಘಾಟಿಸಿದರು.
ತದನಂತರ ಗಾಂಧೀಜಿಯವರ ಜೀವನದ ಹಲವು ಘಳಿಗೆಯನ್ನು ಬಿಂಬಿಸುವ ಛಾಯಾಚಿತ್ರಗಳನ್ನು ಅತಿಥಿ ಗಣ್ಯರು ನೋಡಿದಲ್ಲದೆ ಗಾಂಧೀಜಿಯವರ ಜೀವನ ಚರಿತ್ರೆ ಕುರಿತು ಪ್ರಸ್ತುತಪಡಿಸುವ ಸಾಕ್ಷ್ಯಚಿತ್ರವನ್ನು ಸಹ ವೀಕ್ಷಿಸಿದರು.
ಈ ಸಂದರ್ಭದಲ್ಲಿ ಹಾಜರಿದ್ದ ಗುಲಬರ್ಗಾ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಕಲ್ಯಾಣಧಿಕಾರಿ ಪ್ರೊ. ಕೆ. ಸಿದ್ದಪ್ಪ ಮಾತನಾಡಿ ಮಹಾತ್ಮ ಗಾಂಧೀಜಿಯವರ ಬಾಲ್ಯದಿಂದ ಹಿಡಿದು ಅವರ ಶಿಕ್ಷಣ, ಸಾರ್ವಜನಿಕ ಜೀವನ, ಸ್ವಾತಂತ್ರ್ಯದ ಹೋರಾಟದ ಅಹಿಂಸಾತ್ಮಕ ಚಳುವಳಿ, ಉಪ್ಪಿನ ಸತ್ಯಾಗ್ರಹ ಹೀಗೆ ಗಾಂಧೀಜಿಯವರ ಜೀವನ ಸಂದೇಶ ಹಾಗೂ ಹೋರಾಟದ ಪ್ರತಿಯೊಂದು ಚಿತ್ರಗಳ ಸಮೇತ ಮಾಹಿತಿ ನೀಡುವ ಅಪೂರ್ವ ಛಾಯಾಚಿತ್ರಗಳ ಪ್ರದರ್ಶನ ಇದಾಗಿದ್ದು, ವೀಕ್ಷಿಸುವ ಸೌಭಾಗ್ಯ ನಮಗೆ ದೊರೆತಿದ್ದು ಸಂತಸವಾಗಿದೆ ಎಂದರು.
೩ ದಿನಗಳ ಉಚಿತ ಪ್ರದರ್ಶನ: ಅಕ್ಟೋಬರ್ ೨೨ ರಿಂದ ೨೪ರ ವರೆಗೆ ಮೂರು ದಿನಗಳ ಕಾಲ ಉಚಿತ ಪ್ರದರ್ಶನ ಇದಾಗಿರುವುದರಿಂದ, ಗಾಂಧೀಜಿಯವರ ಜೀವನ ಸಂದೇಶಗಳನ್ನು ಅರಿಯಲು ವಿಶ್ವವಿದ್ಯಾಲಯದ ಆಧ್ಯಾಪಕ ವೃಂದ, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ಛಾಯಾಚಿತ್ರದ ಪ್ರದರ್ಶನವನ್ನು ವೀಕ್ಷಿಸುವ ಮೂಲಕ ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಪ್ರೊ.ಕೆ.ಸಿದ್ದಪ್ಪ ಅವರು ಕೋರಿದ್ದಾರೆ.
ಇದಕ್ಕೂ ಮುನ್ನ ಪ್ರದರ್ಶನ ಮಳಿಗೆಯ ಮುಂಭಾಗದಲ್ಲಿ ಇರಿಸಲಾದ ಬಾಪುವಿನ ಪ್ರತಿಮೆಗೆ ಗಣ್ಯರು ಪುಷ್ಪಾರ್ಚನೆ ಮಾಡಿ ಗೌರವ ನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ಗುಲಬರ್ಗಾ ವಿಶ್ವವಿದ್ಯಾಲಯದ ವಿತ್ತಾಧಿಕಾರಿ ಪ್ರೊ.ಬಿ.ವಿಜಯ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಉಪನಿರ್ದೇಶಕ ಸಿದ್ದೇಶ್ವರಪ್ಪ ಜಿ.ಬಿ. ಸೇರಿದಂತೆ ವಿಶ್ವವಿದ್ಯಾಲಯದ ಅಧಿಕಾರಿಗಳು ಮತ್ತು ವಿದ್ಯಾರ್ಥಿಗಳು ಇದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…