ಇ-ಮೀಡಿಯಾ ಲೈನ್
ಕಲಬುರಗಿ: ನಗರದ ಸೂಪರ್ ಮಾರ್ಕೆಟ್ ಸಿಟಿ ಬಸ್ ನಿಲ್ದಾಣದ ಹತ್ತಿರದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಪ್ರತಿಮೆಯನ್ನು ಭಗ್ನಗೊಳಿಸಿರುವುದು ಖಂಡನೀಯವಾಗಿದೆ ಎಂದು ಕೋಮರಾಮ ಭೀಮಗೊಂಡ ಕುರುಬ ಸಂಘದ ಜಿಲ್ಲಾಧ್ಯಕ್ಷ ಬಸವರಾಜ ಮದ್ರಿಕಿ ತಿಳಿಸಿದರು.
ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಕಂಚಿನ ಪುತ್ಥಳಿ ಸ್ಥಾಪಿಸಬೇಕು, ಪ್ರತಿಮೆಗೆ ಸೂಕ್ತ ರಕ್ಷಣೆ ಒದಗಿಸಬೇಕು ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದರು.
ಸಿಸಿ ಕ್ಯಾಮೆರಾ ಅಳವಡಿಸಬೇಕು, ಪೊಲೀಸ್ ಬಂದೋಬಸ್ತ್ ಒದಗಿಸಬೇಕು, ಜನವರಿ 26ರ ಒಳಗೆ ನಗರದ ಸಿಟಿ ಬಸ್ ನಿಲ್ದಾಣಕ್ಕೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಹೆಸರು ಅಧಿಕೃತವಾಗಿ ನಾಮಕರಣ ಮಾಡಬೇಕು ಎಂದು ಒತ್ತಾಯಿಸಿದರು.
ರಾಜಶೇಖರ ಮುಚಖೇಡ, ನಿಂಗಣ್ಣ ರದ್ದೇವಾಡಗಿ, ಮರಲಿಂಗ ಹುಗ್ಗಿ, ರಾಮಣ್ಣ ಪವಾರ ಇತರರು ಸುದ್ದಿಗೋಷ್ಠಿಯಲ್ಲಿ ಇದ್ದರು.