ಬಿಸಿ ಬಿಸಿ ಸುದ್ದಿ

ಪತ್ರಕರ್ತರು ಸಾಮಾಜಿಕ ಸ್ವಾಸ್ಥ್ಯ ಕಾಪಾಡಬೇಕು: ಸತ್ಯಂಪೇಟೆ

ಇ-ಮೀಡಿಯಾ ಲೈನ್ ನ್ಯೂಸ್

ಜೇವರ್ಗಿ: ಬದಲಾದ ಕಾಲಘಟ್ಟದಲ್ಲಿ ಸಾಮಾಜಿಕ ಸ್ವಾಸ್ಥ್ಯ ಕಾಪಾಡುವಲ್ಲಿ ಪತ್ರಕರ್ತರ ಪಾತ್ರ ಬಹಳ ಮುಖ್ಯವಾಗಿದೆ ಎಂದು ಪತ್ರಕರ್ತ- ಸಾಹಿತಿ ಡಾ. ಶಿವರಂಜನ ಸತ್ಯಂಪೇಟೆ ಅಭಿಪ್ರಾಯಪಟ್ಟರು.

ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಎನ್.ಎಸ್.ಎಸ್ ಘಟಕದ ದತ್ತು ಗ್ರಾಮವಾದ ಶಖಾಪೂರ(ಎಸ್)ನ ತಪೋವನ ಮಠದ ಆವರಣದಲ್ಲಿ ಬುಧವಾರ ಆಯೋಜಿಸಿದ್ದ ವಾರ್ಷಿಕ ವಿಶೇಷ ಶಿಬಿರದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ‘ಸಾಮಾಜಿಕ ಸ್ವಾಸ್ಥ್ಯ ಕಾಪಾಡುವಲ್ಲಿ ಪತ್ರಿಕಾ ರಂಗದ ಪಾತ್ರ’ ಎಂಬ ವಿಷಯ ಕುರಿತು ಮಾತನಾಡಿದ ಅವರು, ಸಮೂಹ ಮಾಧ್ಯಮಗಳು ಸಾಮಾಜಿಕ ಬದಲಾವಣೆಯಲ್ಲಿ ಮಹತ್ವದ ಪಾತ್ರವಹಿಸಬೇಕು. ಜನರ ದೃಷ್ಟಿಕೋನ, ನಂಬಿಕೆ, ಕೌಶಲಗಳ ಬದಲಾವಣೆ ಆಗಬೇಕು. ಈ ಬದಲಾವಣೆ ತರಲು ಶಿಕ್ಷಣ, ತಿಳಿವಳಿಕೆ ಮೂಡಿಸುವ ಕೆಲಸ ಸಮೂಹ ಮಾಧ್ಯಮಗಳು ಮಾಡಬೇಕು ಎಂದರು.

ಸಾನ್ನಿಧ್ಯ ವಹಿಸಿದ್ದ ಷ.ಬ್ರ. ಡಾ.‌ ಸಿದ್ಧರಾಮ ಶಿವಾಚಾರ್ಯರು ಮಾತನಾಡಿ, ಪ್ರಜಾಪ್ರಭುತ್ವದ ನಾಲ್ಕನೆ ಅಂಗವಾದ ಪತ್ರಿಕಾರಂಗವು ಸಮಾಜ ಅಭಿವೃದ್ಧಿಗೆ ಬದ್ಧವಾಗಿರಬೇಕು.‌ ಸಮಾಜದಲ್ಲಿ ಅರಿವು ಮೂಡಿಸುವ ಕೆಲಸ ಮಾಡಬೇಕು ಎಂದು ಕರೆ ನೀಡಿದರು.

ಜೇವರ್ಗಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹ ಪ್ರಾಧ್ಯಾಪಕ ಡಾ.ಶರಣಪ್ಪ ಸೈದಾಪೂರ, ಜೇವರ್ಗಿ ತಾಲೂಕಾ ಸರ್ಕಾರಿ ನೌಕರರ ಸಂಘದ ನಿರ್ದೇಶಕ ಲಿಂಗರಾಜ ಹಿರೇಗೌಡ, ಕಲಬುರಗಿ ಬಾಲಕಿಯರ ಸರ್ಕಾರಿ ಪಿಯು ಕಾಲೇಜಿನ ಉಪನ್ಯಾಸಕ ಸುನಿಲ್ ರಾಠೋಡ, ಎನ್.ಎಸ್.ಎಸ್ ಅಧಿಕಾರಿ ಎಚ್.ಬಿ.ಪಾಟೀಲ ಹಾಗೂ ಸ್ವಯಂ ಸೇವಕರು ಭಾಗವಹಿಸಿದ್ದರು.

ಇದಕ್ಕೂ ಮುನ್ನ ಸ್ವಯಂ ಸೇವಕರು ಮಠದ ಆವರಣದ ಸುತ್ತಲಿನ ಪ್ರದೇಶದಲ್ಲಿ ಶ್ರಮದಾನದ ಮೂಲಕ ಸ್ವಚ್ಚತಾ ಕಾರ್ಯ ಮಾಡಿದರು.

emedialine desk

Recent Posts

೧೭ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆಯಾದ ಡಾ.ಎಸ್ ಆರ್ ಗುಂಜಾಳ ಅವರಿಗೆ ಆಮಂತ್ರಣ

ಇ-ಮೀಡಿಯಾ ಲೈನ್ ನ್ಯೂಸ್ ಧಾರವಾಡ: ಧಾರವಾಡ ಜಿಲ್ಲಾ ೧೭ ನೇ ಕನ್ನಡ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷರಾಗಿ ಆಯ್ಕೆಯಾದ ಡಾ. ಎಸ್…

16 hours ago

ಅನುಭವ ಬದುಕಿಗೆ ದೊಡ್ಡ ಪಾಠ: ಡಾ. ಡಿ. ಶ್ರೀನಿವಾಸ್ ಮಣಗಳ್ಳಿ

ಇ-ಮೀಡಿಯಾ ಲೈನ್ ನ್ಯೂಸ್ ಕಲಬುರಗಿ: ಯಾವೊಂದು ವಿಶ್ವವಿದ್ಯಾಲಯವು ಕಲಿಸದ ಪಾಠವನ್ನು ಮನುಷ್ಯನಿಗೆ ಅನುಭವವನ್ನು ಕಲಿಸಿ ಕೊಡುತ್ತದೆ ಎಂದು ಕರ್ನಾಟಕ ಕೇಂದ್ರೀಯ…

16 hours ago

ಕಲ್ಯಾಣ ಕಲಬುರಗಿ ಉತ್ಸವ: ಪ್ರಶಸ್ತಿ ಪ್ರದಾನ

ಇ-ಮೀಡಿಯಾ ಲೈನ್ ನ್ಯೂಸ್ ಕಲಬುರಗಿ: ನಗರದ ಜಗತ್ ವೃತ್ತದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಉತ್ತರ ಕರ್ನಾಟಕ ನೇತೃತ್ವದಲ್ಲಿ ಕನ್ನಡ ಅಭಿಮಾನ…

1 day ago

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಕಂಚಿನ ಪುತ್ಥಳಿ ಸ್ಥಾಪಿಸಿ

ಇ-ಮೀಡಿಯಾ ಲೈನ್ ಕಲಬುರಗಿ: ನಗರದ ಸೂಪರ್ ಮಾರ್ಕೆಟ್ ಸಿಟಿ ಬಸ್ ನಿಲ್ದಾಣದ ಹತ್ತಿರದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಪ್ರತಿಮೆಯನ್ನು ಭಗ್ನಗೊಳಿಸಿರುವುದು…

2 days ago

ಮಕ್ಕಳ ಆರೈಕೆದಾರರಿಗೆ ತರಬೇತಿ ಕಾರ್ಯಕ್ರಮ

ಇ-ಮೀಡಿಯಾ ಲೈನ್ ನ್ಯೂಸ್ ಕಲಬುರ್ಗಿ:  ಜಿಲ್ಲೆಯ ಮತ್ತು. ಕಮಲಾಪುರ ತಾಲೂಕ ಸಂಯುಕ್ತ ಆಶ್ರಯದಲ್ಲಿ. ಕಲ್ಬುರ್ಗಿ ತಾಲೂಕ ಸಭಾಂಗಣದಲ್ಲಿ. ಕಮಲಾಪುರ ತಾಲೂಕಿನ…

2 days ago

ಬಸವಸೇವಾ ಪ್ರತಿಷ್ಠಾನದ ಹೊಸ ವರ್ಷದ ಕ್ಯಾಲೆಂಡರ್ ಬಿಡುಗಡೆ

ವಚನ ವಿಜಯೋತ್ಸವ ಫೆ. 10, 11 ಹಾಗೂ 12ರಂದು ಇ- ಮೀಡಿಯಾ ಲೈನ್ ನ್ಯೂಸ್ ಕಲಬುರಗಿ: ಬಸವ ಸೇವಾ ಪ್ರತಿಷ್ಠಾನದ…

4 days ago