ನಂದಕುಮಾರಗೆ ಪಿಎಚ್ ಡಿ ಪದವಿ

0
26
ಇ-ಮೀಡಿಯಾಲೈನ್ ನ್ಯೂಸ್
ಕಲಬುರಗಿ: ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯ, ಕನ್ನಡ ವಿಭಾಗದ ಸಂಶೋಧನಾ ವಿದ್ಯಾರ್ಥಿ ಹಾಗೂ ಸಿಯುಕೆ ಅಂಬೇಡ್ಕರ್ ವಿದ್ಯಾರ್ಥಿ ಒಕ್ಕೂಟದ ಅಧ್ಯಕ್ಷರಾದ ಪಿ. ನಂದಕುಮಾರ್ ಅವರಿಗೆ ಕನ್ನಡ ವಿಷಯದಲ್ಲಿ ಪಿಎಚ್.ಡಿ ಪದವಿ ನೀಡಲಾಗಿದೆ.
“ದಲಿತ ಚಳುವಳಿಯ ಅನುಭವ ಕಥನ” (ಗುಲ್ಬರ್ಗ ಜಿಲ್ಲೆಯನ್ನು ಅನುಲಕ್ಷಿಸಿ) ಎಂಬ ವಿಷಯದ ಕುರಿತು ಕನ್ನಡ ವಿಭಾಗದ ಸಹ ಪ್ರಾಧ್ಯಾಪಕರಾದ ಡಾ.ಅಪ್ಪಗೆರೆ ಸೋಮಶೇಖರ್ ಅವರ ಮಾರ್ಗದರ್ಶನದಲ್ಲಿ ಸಂಶೋಧನಾ ಕಾರ್ಯ ಕೈಗೊಂಡಿದ್ದರು.
ಈ ಹಿನ್ನೆಲೆಯಲ್ಲಿ ಪಿ. ನಂದಕುಮಾರ್ ಅವರ ಸಾದರಪಡಿಸಿದ‌  ಸಂಶೋಧನಾ ಮಹಾಪ್ರಬಂಧವನ್ನು ಅಂಗೀಕರಿಸಿ  ಕರ್ನಾಟಕ ಕೇಂದ್ರಿಯ ವಿಶ್ವವಿದ್ಯಾಲಯವು ಡಾಕ್ಟರೇಟ್ ಪದವಿಯನ್ನು ನೀಡಿದೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here