ಬಿಸಿ ಬಿಸಿ ಸುದ್ದಿ

ಪ್ರತಿಯೊಬ್ಬರು ಅಯೋಡಿನಯುಕ್ತ ಆಹಾರ ಸೇವಿಸಿ

ಕಲಬುರಗಿ: ಗಂಟಲಿಗೆ ಸಂಬಂಧಿಸಿದಂತೆ ಉಂಟಾಗುವ ಗಳಗಂಡ, ಥೈರಾಯಿಡ್‌ದಂತಹ ಸಮಸ್ಯೆಗಳು ಬರದಂತೆ ತಡೆಯಲು, ಅಯೋಡಿನಯುಕ್ತ ಉಪ್ಪು, ಸಮುದ್ರ ಆಹಾರಗಳು, ಮೊಟ್ಟೆಯಂತಹ ಆಹಾರ ಸೇವಿಸುವದು ತುಂಬಾ ಅವಶ್ಯಕವಾಗಿದೆಯೆಂದು ವೈದ್ಯಾಧಿಕಾರಿ ಡಾ.ಅನುಪಮ ಕೇಶ್ವಾರ ಹೇಳಿದರು.

ಅವರು ನಗರದ ಶೇಖರೋಜಾದಲ್ಲಿರುವ ಶಹಾಬಜಾರನ ’ನಗರ ಪ್ರಾಥಮಿಕ ಆರೋಗ್ಯ ಕೇಂದ’ದಲ್ಲಿ ಬುಧವಾರ ಹಮ್ಮಿಕೊಳ್ಳಲಾಗಿದ್ದ ’ವಿಶ್ವ ಅಯೋಡಿನ್ ಕೊರತೆ ಸಪ್ತಾಹ’ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.
ಇತ್ತೀಚಿನ ದಿನಗಳಲ್ಲಿ ಥೈರಾಯಿಡ ಸಮಸ್ಯೆ ವ್ಯಾಪಕವಾಗಿ ಕಂಡುಬರುತ್ತಿದೆ. ಈ ನಿಟ್ಟಿನಲ್ಲಿ ಅಯೋಡಿನ ಮಹತ್ವದ ಬಗ್ಗೆ ಜಾಗೃತಿ ಮೂಡಿಸಬೇಕಾಗಿದೆ. ಮುಖ ಊದಿಕೊಳ್ಳುವುದು, ಬೇಗನೆ ಆಯಾಸವಾಗುವದು, ಮಲ ವಿಸರ್ಜನೆಯ ಸಮಸ್ಯೆ, ಒಣಗಿದ ಚರ್ಮ, ಗರ್ಭಪಾತದ ಸಂಭವ, ಮಾನಸಿಕ ಬೆಳವಣಿಗೆಯ ನ್ಯೂನತೆ, ಅನಿಯಮಿತವಾಗಿ ತೂಕ ಹೆಚ್ಚಳವಾಗುವಂತಹದ್ದು, ಅಯೋಡಿನ ಕೊರತೆಯ ಸಾಮಾನ್ಯ ಲಕ್ಷಣಗಳಾಗಿವೆ. ಆದ್ದರಿಂದ ಸಾಮಾನ್ಯರು ಪ್ರತಿದಿನ ೧೫೦ ಮೈಕ್ರೋ ಗ್ರಾಮ್ಸ್, ಗರ್ಭೀಣಿಯರು ೨೦೦ ಮೈಕ್ರೋ ಗ್ರಾಮ್ಸ್ ಅಯೋಡಿನಯುಕ್ತ ಆಹಾರ ಸೇವೆನೆಯನ್ನು ಕಡ್ಡಾಯವಾಗಿ ಮಾಡುವ ಮೂಲಕ, ಇಂತಹ ಸಮಸ್ಯೆಗಳಿಂದ ಮುಕ್ತವಾಗಿರಬಹುದಾಗಿದೆಯೆಂದು ಅನೇಕ ಸಲಹೆಗಳನ್ನು ನೀಡಿದರು.

ಮುಖ್ಯ ಅತಿಥಿಯಾಗಿದ್ದ ಉಪನ್ಯಾಸಕ ಎಚ್.ಬಿ.ಪಾಟೀಲ ಮಾತನಾಡಿ, ಅಯೋಡಿನ ನ್ಯೂನತೆಯಿಂದ ಬರುವ ಖಾಯಿಲೆಗಳ ಬಗ್ಗೆ ಎಲ್ಲೆಡೆ ಜಾಗೃತಿಯನ್ನು ಉಂಟುಮಾಡುವ ಉದ್ದೇಶದಿಂದ ಪ್ರತಿ ವರ್ಷ ಅಕ್ಟೋಬರ ೨೧-೨೭ರ ವರೆಗೆ ಒಂದು ವಾರ ’ವಿಶ್ವ ಅಯೋಡಿನ ಕೊರತೆ ಸಪ್ತಾಹ’ವನ್ನು ಮಾಡಲಾಗುತ್ತದೆ. ಇದು ೧೯೯೨ರಲ್ಲಿ ’ಅಕ್ಟೋಬರ ೨೧’ ರಂದು ’ಗಳಗಂಡ ದಿನ’ವೆಂದು ಆರಂಭವಾಗಿ, ನಂತರ ಸಪ್ತಾಹವಾಯಿತೆಂದು ಅದರ ಹಿನ್ನಲೆಯನ್ನು ವಿವರಿಸಿದರು.

ಕಾರ್ಯಕ್ರಮದಲ್ಲಿ ಪ್ರಮುಖರಾದ ರಾಜಶೇಖರ ಬಿ.ಮರಡಿ, ಬಸವರಾಜ ಪುರಾಣೆ, ಅಮರ ಬಂಗರಗಿ, ಆರೋಗ್ಯ ಕೇಂದ್ರದ ಸಿಬ್ಬಂದಿಗಳಾದ ಪುಷ್ಪಾ, ನಾಗೇಶ್ವರಿ ಮುಗಳಿ, ಗಂಗಾಜ್ಯೋತಿ ಗಂಜಿ, ಮಂಗಳಾ ಚಂದಾಪೂರೆ, , ಶ್ರೀದೇವಿ ಸಾಗರ ಸೇರಿದಂತೆ ಆರೋಗ್ಯ ಕೇಂದ್ರದ ಸಿಬ್ಬಂದಿ, ಬಡಾವಣೆಯ ನಾಗರಿಕರು ಪಾಲ್ಗೊಂಡಿದ್ದರು.

emedialine

Recent Posts

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

5 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

5 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

5 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

21 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

23 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago