ಇ-ಮೀಡಿಯಾ ಲೈನ್ ನ್ಯೂಸ್
ಕಲಬುರಗಿ: ಜೇವರಗಿಯ ವೀರಶೈವ ಲಿಂಗಾಯತ ಸಮಾಜ ಬಾಂಧವರು ತಾಲ್ಲೂಕಿನ ಮಹಾಲಕ್ಷ್ಮೀ ಬಿರಾದಾರ ವಿದ್ಯಾರ್ಥಿನಿಯ ಆತ್ಮಹತ್ಯೆ ಕುರಿತು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾ ಸಭಾ ಹಾಗೂ ಸಮಾಜದ ಮುಖಂಡರಿಂದ ಸೋಮವಾರ ಪತ್ರಿಕಾ ಭವನದಲ್ಲಿ ಸುದ್ಧಿಗೋಷ್ಠಿ ನಡೆಯಿತು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖಂಡರು ನಮ್ಮ ಸಮುದಾಯದ ವಿದ್ಯಾರ್ಥಿನಿಯ ಮೇಲೆ ಅನ್ಯ ಕೋಮಿನ ಯುವಕನ ಮಾನಸಿಕ ಕಿರುಕುಳದಿಂದ ಬೇಸತ್ತು ಕುಟುಂಬದ ಮಾನ ಮರ್ಯಾದೆಗೆ ಅಂಜಿ ಆತ್ಮಹತ್ಯೆ ಮಾಡಿಕೊಂಡಿದ್ದು, ಇಡೀ ನಾಗರಿಕ ಸಮುದಾಯ ತಲೆ ತಗ್ಗಿಸುವ ವಿಷಯವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಮೃತ ವಿದ್ಯಾರ್ಥಿನಿಯ ಸಹೋದರನಿಗೆ ಸರ್ಕಾರಿ ಉದ್ಯೋಗ ಕಲ್ಪಿಸಬೇಕು ಹಾಗೂ 50 ಲಕ್ಷ ಪರಿಹಾರ ಘೋಷಣೆ ಮಾಡಬೇಕು, ಕುಟುಂಬದವರಿಗೆ ಸೂಕ್ತ ಭದ್ರತೆ ಕೊಡಲು ಕ್ರಮ ಕೈಗೊಳ್ಳಬೇಕು ಇದೇ ತಿಂಗಳು 16 ತಾರೀಖು ಗುರುವಾರದಂದು ಜೇವರ್ಗಿ ಪಟ್ಟಣ ಸಂಪೂರ್ಣ ಬಂದ್ ಮಾಡಲಾಗುತ್ತದೆ ಎಂದು ಹೇಳಿದರು.
ಮಾಜಿ ಶಾಸಕ ದೊಡ್ಡಪ್ಪ ಗೌಡ ಪಾಟೀಲ್ ನರಿಬೋಳ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಜ್ಯ ಕಾರ್ಯದರ್ಶಿಗಳಾದ ರಾಜಶೇಖರ ಸಾಹು ಸೀರಿ ಮಾತನಾಡಿ, ಈ ಘಟನೆ ಖಂಡಿಸಿ ಜ.16ರಂದು ಜೇವರ್ಗಿ ಬಂದ್ ಮಾಡಿ ಪ್ರತಿಭಟನೆ ನಡೆಸಲಾಗುವುದು ಎಂದು ಅವರು ತಿಳಿಸಿದರು.
ಮುಖಂಡರಾದ ಶಿವರಾಜ್ ಪಾಟೀಲ್ ರದ್ದೇವಾಡಗಿ, ಮಹಾಸಭಾದ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಸೋಮಶೇಖರ ಹಿರೇಮಠ, ಮಹಾಸಭಾದ ಜಿಲ್ಲಾ ಉಪಾಧ್ಯಕ್ಷರಾದ ಮಲ್ಲನಗೌಡ ನೇದಲಗಿ, ಮಹಾಸಭಾದ ಜೇವರಗಿ/ಯಡ್ರಾಮಿ ತಾಲೂಕು ಅಧ್ಯಕ್ಷರಾದ ಸಿದ್ದು ಅಂಗಡಿ, ಗುರುಲಿಂಗಪ್ಪಗೌಡ ಅಂದೋಲ, ವಿಜಯಕುಮಾರ ಕಲ್ಲಹಂಗರಗಾ, ಷಣ್ಮುಖಪ್ಪ ಸಾಹು ಗೋಗಿ, ಶಿವಾನಂದ ಮುಧೋಳ. ಮಲ್ಲಿಕಾರ್ಜುನ ಬಿರಾದಾರ, ಡಾ ಸುಧಾ ಹಾಲಕಾಯಿ,ಸಂತೋಷ ಅವಟಿ, ಶರಣು ಅವರಾದ, ರವಿ ಪಡಶೆಟ್ಟಿ, ಸೇರಿದಂತೆ ಅನೇಕರು ಉಪಸ್ಥಿತರಿದ್ದರು