ಶ್ರೀಮತಿ ವಿ. ಜಿ. ಪದವಿ ಪೂರ್ವ ಕಾಲೇಜಿನಲ್ಲಿ ಸ್ವಾಮಿ ವಿವೇಕಾನಂದರ ಜಯಂತಿ

0
41

ಇ-ಮೀಡಿಯಾ ಲೈನ್ ನ್ಯೂಸ್

ಕಲಬುರಗಿ: ರಾಷ್ಟ್ರೀಯ ಯುವ ದಿನದ ಅಂಗವಾಗಿ ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ, ಶ್ರೀಮತಿ ವೀರಮ್ಮ ಗಂಗಸಿರಿ ಮಹಿಳಾ ಪದವಿ-ಪೂರ್ವ ಮಹಾವಿದ್ಯಾಲಯ ಕಲಬುರಗಿ, ಅಖಿಲ ಕರ್ನಾಟಕ ವಿದ್ಯಾರ್ಥಿ ಪರಷತ್ತನ ಸಹಯೋಗದೊಂದಿಗೆ ಇಂದು ದೇಶಕಂಡ ಶ್ರೇಷ್ಠ ತತ್ವಜ್ಞಾನಿ, ವಿಶ್ವದ ಆಧ್ಯಾತ್ಮಿಕ ನಾಯಕ, ದಾರ್ಶನಿಕ ಸಂತ, ವೀರ ಸನ್ಯಾಸಿ, ವಿಶ್ವಕ್ಕೆ ವೇದಾಂತವನ್ನು ಕಾಣಿಸಿದ ನಂದಾದೀಪ ಸ್ವಾಮಿ ವಿವೇಕಾನಂದರ ೧೬೨ನೇ ಜನ್ಮ ದಿನಾಚರಣೆಯ ಕಾರ್ಯಕ್ರಮವನ್ನು ಮಹಾವಿದ್ಯಾಲಯದಲ್ಲಿ ಆಯೋಜಿಸಲಾಯಿತು.

Contact Your\'s Advertisement; 9902492681

ಈ ಕಾರ್ಯಕ್ರಮವನ್ನು ಸ್ವಾಮಿ ವಿವೇಕಾನಂದರ ಭಾವಚಿತ್ರಕ್ಕೆ ಪೂಜೆ ಸಲಿಸಿಸುವುದರ ಮುಖಾಂತರ ವಿದ್ಯಾರ್ಥಿನಿಯರಾದ ಕುಮಾರಿ. ವೀರಮ್ಮ ಮತ್ತು ತಂಡದ ಪ್ರಾರ್ಥನಾ ಗೀತೆಯೊಂದಿಗೆ ಪ್ರಾರಂಭಿಸಲಾಯಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಲಬುರಗಿ ಜಿಲ್ಲಾ ಘಟಕದ ಹಿರಿಯ ಕರ‍್ಯಕರ್ತರಾದ ಶ್ರೀ ಮಹೇಶ ದೇಶಪಾಂಡೆ, ಅತಿಥಿಗಳಾಗಿ ಶ್ರೀ ಶರಣು ಪೂಜಾರ ಅವರು ಆಗಮಿಸಿ ವಿದ್ಯಾರ್ಥಿಗಳನ್ನುದ್ದೇಶಿಸಿ ಈ ದಿನವನ್ನು ಯುವಜನತೆಯಲ್ಲಿ ಸ್ವಾಮಿ ವಿವೇಕಾನಂದರ ಚಿಂತನೆಗಳನ್ನು ಮತ್ತು ಸಮಾಜ ಕಲ್ಯಾಣ ಕಾರ್ಯಗಳ ಕುರಿತು ಅರಿವು ಮೂಡಿಸುವುದಕ್ಕಾಗಿ ಆಚರಿಸಲಾಗುತ್ತದೆ. ಇದು ಯುವಜನರಲ್ಲಿ ದೇಶದ ಅಭಿವೃದ್ಧಿಯ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯವಾಗಿದೆ. ಇಂತಹ ಜಾಗೃತಿ ಮೂಡಿಸುವ ಕಾರ್ಯದಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ತನ್ನದೆ ಆದ ಕೊಡುಗೆಯನ್ನು ನೀಡುತ್ತಿದೆ. ಅಲ್ಲದೆ ನವ-ಭಾರತ ನಿರ್ಮಾಣದಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಯಾವ ರೀತಿಯಾಗಿ ಕಾರ್ಯನಿರ್ವಹಿಸುತ್ತಿದೆ ಮತ್ತು ಯುವಕರ ಪಾತ್ರ ಯಾವ ರೀತಿಯಾಗಿರಬೇಕು ಎಂಬುದರ ಕುರಿತಾಗಿ ಮಾತನಾಡಿದರು.

ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ. ಮೋಹನರಾಜ ಪತ್ತಾರ ಅವರು ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಮನುಷ್ಯರಲ್ಲಿ ಪರಿಪೂರ್ಣತೆಯನ್ನು ಹಿಗ್ಗಿಸುವುದೇ ಶಿಕ್ಷಣ ಎಂದು ಸ್ವಾಮಿ ವಿವೇಕಾನಂದರು ಹೇಳಿದಂತೆ ಅ.ಭಾ.ವಿ.ಪ ವಿದ್ಯಾರ್ಥಿಗಳ ಮದ್ಯೆ ಇಂತಹ ಮಹಾನ್ ಪುರುಷರ ತತ್ವಗಳನ್ನು ಜಾಗೃತಿ ಮಾಡುತ್ತಿದೆ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಮಹಾವಿದ್ಯಾಲಯದ ದ್ವಿತೀಯ ಪಿ.ಯು.ಸಿ ಕಲಾ ವಿಭಾಗದ ವಿದ್ಯಾರ್ಥಿನಿಯಾದ ಕುಮಾರಿ. ಶೃದ್ಧಾ ಶಕ್ತಿ ಅವರು ಸ್ವಾಮಿ ವಿವೇಕಾನಂದ ಜಯಂತಿಯ ಕುರಿತಾಗಿ ಮಾತನಡುತ್ತಾ ಈ ದಿನ ಮಹಾನ್ ಆಧ್ಯಾತ್ಮಿಕ ಚಿಂತಕರಾದ ಸ್ವಾಮಿ ವಿವೇಕಾನಂದರ ಜನ್ಮ ವಾರ್ಷಿಕೋತ್ಸವವನ್ನು ಸ್ಮರಿಸುವ ಕಾರಣದಿಂದಾಗಿ ಅಪಾರ ಮಹತ್ವವನ್ನು ಹೊಂದಿದೆ. ಈ ದಿನದಂದು ದೇಶಾದ್ಯಂತ ಸ್ವಾಮಿ ವಿವೇಕಾನಂದರ ಆಳವಾದ ಬೋಧನೆಗಳನ್ನು ಮೆಲುಕು ಹಾಕುವ ಕಾರ್ಯ ನಡೆಯುತ್ತದೆ. ಅವರ ವಿಚಾರಗಳು ಸಾಮಾಜಿಕ ಸುಧಾರಣೆ ಮತ್ತು ರಾಷ್ಟ್ರೀಯ ಅಭಿವೃದ್ಧಿಗೆ ಅವರ ಕೊಡುಗೆಗಳನ್ನು ಸಹ ಒತ್ತಿ ಹೇಳುತ್ತದೆ. ಸ್ವಾಮಿ ವಿವೇಕಾನಂದರ ಏಕತೆ, ಸ್ವಯಂ-ಸಬಲೀಕರಣ ಮತ್ತು ಮಾನವೀಯತೆಗೆ ಸಲ್ಲಿಸಿದ ಸೇವೆಯ ಸಂದೇಶವು ಜೀವನದ ಎಲ್ಲಾ ಹಂತಗಳ ಜನರೊಂದಿಗೆ ಪ್ರತಿಧ್ವನಿಸುತ್ತಲೇ ಇರುತ್ತದೆ. ಮಹಾವಿದ್ಯಾಲಯದ ಉಪನ್ಯಾಸಕರಾರ ಶ್ರೀಮತಿ ಜಗದೇವಿ ಚಿಕ್ಕೆಗೌಡ, ಶ್ರೀ ಗೋಣಿ ಬಸವರಾಜ ಮಾತನಾಡಿದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಉಪನ್ಯಾಸಕರಾದ ಕಿರಣಕುಮಾರ, ಡಾ. ಕಾಶೀಬಾಯಿ ಮತ್ತಿತರರು, ಅ.ಭಾ.ವಿ.ಪ ಪಧಾದಿಕಾರಿಗಳು ಹಾಗೂ ಕಾರ್ಯಕರ್ತರು, ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು ಎಂದು ಉಪನ್ಯಾಸಕರಾದ ಡಾ. ಕಾಶಿಬಾಯಿ ಭೋಗಶಟ್ಟಿ ಕಾರ್ಯಕ್ರಮವನ್ನು ನಿರೂಪಿಸಿದರು.

ಕಲಬುರಗಿ-೫೮೫೧೦೨

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here