ಬಿಸಿ ಬಿಸಿ ಸುದ್ದಿ

ಜ.17ರಿಂದ 3 ದಿನಗಳ ಕಾಲ ‘ಬಹುತ್ವ ಸಂಸ್ಕೃತಿ ಭಾರತೋತ್ಸವ’: ಮೀನಾಕ್ಷಿ ಬಾಳಿ

ಇ-ಮೀಡಿಯಾ ಲೈನ್ ನ್ಯೂಸ್

ಕಲಬುರಗಿ: ರಾಜ್ಯದ ವಿವಿಧ 40ಕ್ಕೂ ಹೆಚ್ಚು ಸಂಘಟನೆಗಳ ಸಹಯೋಗದೊಂದಿಗೆ ಕಲಬುರಗಿ ನಗರದಲ್ಲಿ ಜನವರಿ 17, 18 ಮತ್ತು 19 ರಂದು ಮೂರು ದಿನಗಳ ಕಾಲ ಭಾರತದ ಬಹುತ್ವದ ಸಂಸ್ಕೃತಿ ಪ್ರತಿಪಾದನೆ ಮತ್ತು ಸೌಹಾರ್ದ ಕರ್ನಾಟಕಕ್ಕಾಗಿ ‘ಬಹುತ್ವ ಸಂಸ್ಕೃತಿ ಭಾರತೋತ್ಸವ -2025ರ ಕಲಬುರಗಿ ಚಲೋ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಉತ್ಸವದ ಸಂಚಾಲಕರಾದ ಮೀನಾಕ್ಷಿ ಬಾಳಿ, ಆರ್.ಕೆ.ಹುಡಗಿ ಅವರು ತಿಳಿಸಿದ್ದಾರೆ.

ನಗರದ ಪತ್ರಿಕಾ ಭವನದಲ್ಲಿ ಬುಧವಾರ ಜಂಟಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಜ. 17 ರಂದು ಬೆಳಗ್ಗೆ 10.30ಕ್ಕೆ ನಗರದ ಶರಣಬಸವೇಶ್ವರ ದೇವಸ್ಥಾನದಲ್ಲಿ ಮಾತೋಶ್ರೀ ದ್ರಾಕ್ಷಾಯಿಣಿ ಶರಣಬಸಪ್ಪ ಅಪ್ಪ ಅವರು ವಾಹನ ಜಾಥಾಕ್ಕೇ ಚಾಲನೆ ನೀಡಲಿದ್ದಾರೆ. ಈ ವೇಳೆಯಲ್ಲಿ ನಿವೃತ್ತ ಕುಲಪತಿ ಪ್ರೊ.ಸಬಿಹಾ ಭೂಮಿಗೌಡ ಮತ್ತಿತರರು ಉಪಸ್ಥಿತರಿರಲಿದ್ದಾರೆ. ಶರಣಬಸವೇಶ್ವರ ದೇವಸ್ಥಾನದಿಂದ ಆರಂಭವಾಗುವ ಜಾಥಾವು ಸೆಂಟ್ ಮೇರಿ ಚರ್ಚ್ ಮಾರ್ಗವಾಗಿ ಸಾಗಿ ಸರ್ದಾರ ವಲ್ಲಭಾಯಿ ಪಟೇಲ್ ಮಾರ್ಗದಿಂದ ಜಗತ್ ವೃತದಿಂದ ಹಾಯ್ದು ಖ್ವಾಜಾ ಬಂದೇನವಾಜ್ ದರ್ಗಾದಲ್ಲಿ ಮುಕ್ತಾಯವಾಗಲಿದೆ.
ಎರಡನೇ ದಿನವಾದ ಜ.18 ರಂದು ಬೆ.10 ಗಂಟೆಯಿಂದ ನಗರದ ಪಂಡಿತ್ ರಂಗಮಂದರಿರದಲ್ಲಿ ‘ಭಾವೈಕ್ಯದ ಸಮನ್ವಯ ಗಾಯನ ಗಮಲು’ ಘೋಷಣೆಯಡಿ ದಿನವಿಡಿ ತತ್ವಪದ, ಸೂಫಿಪದ, ವಚನ ಗಾಯನ ಮತ್ತು ಖವ್ವಾಲಿ ಕಾರ್ಯಕ್ರಮಗಳು ನಡೆಯಲಿವೆ ಎಂದರು.

ಕೊನೆ ದಿನ ಜ.19 ರಂದು ಬೆ.10 ರಿಂದ ಕನ್ನಡ ಭವನದಿಂದ ಮೆರವಣಿಗೆ ನಡೆಸಿ ಜಗತ್ ವೃತದಲ್ಲಿ ಸೌಹಾರ್ತೆಯ ಉತ್ಸವದ ಬಹಿರಂಗ ಸಮಾವೇಶ ನಡೆಯಲಿದೆ. ಈ ಸಮಾವೇಶದಲ್ಲಿ ದಕ್ಷಿಣದ ಬೆಂಗಳೂರು, ಮಂಗಳೂರು, ಮಂಡ್ಯ, ಕೋಲಾರ ಸೇರಿದಂತೆ ಎಲ್ಲಾ ಜಿಲ್ಲೆಗಳ ಪ್ರತಿನಿಧಿಗಳು ಭಾಗವಹಿಸಲಿದ್ದು, ಸ್ಥಳೀಯರು ಸಾವಿರಾರು ಸಂಖ್ಯೆಯಲ್ಲಿ ಭಾಗವಹಿಸುವ ನಿರೀಕ್ಷೆ ಇದೆ ಎಂದು ತಿಳಿಸಿದರು.

emedialine desk

Recent Posts

ಮಹಿಳೆಯರನ್ನು ಗೌರವಿಸುವ ಶ್ರೀಮಂತ ಸಂಪ್ರದಾಯ ಹೊಂದಿರುವ ದೇಶ ಭಾರತ

ಮಾರ್ಚ್ 8 ರಂದು ಅಂತರರಾಷ್ಟ್ರೀಯ ಮಹಿಳಾ ದಿನ ಅಶೋಕ ಪಾಟೀಲ ಮಹಿಳೆ ಅಥವಾ ಸ್ತ್ರೀ ಪದವು ಸಂಸ್ಕøತದ್ದು, ಕನ್ನಡದಲ್ಲಿ ಈ…

1 week ago

ನಿಧನ ವಾರ್ತೆ: ಭೀಮರಾವ.ಸಿ.ಸುಗೂರ

ಶಹಾಬಾದ:ನಗರದ ಹಳೆಶಹಾಬಾದನ ವೀರಶೈವ ಲಿಂಗಾಯತ ಸಮಾಜದ ಮುಖಂಡರಾದ ಭೀಮರಾವ.ಸಿ.ಸುಗೂರ (77) ಶನಿವಾರದಂದು ನಿಧನರಾಗಿದ್ದಾರೆ. ಇವರಿಗೆ ಇಬ್ಬರು ಸುಪುತ್ರರು, ಇಬ್ಬರು ಸುಪುತ್ರಿಯರು…

2 weeks ago

ನೆಲೋಗಿ ಬಿ.ಆರ್.ಅಂಬೇಡ್ಕರ ಭವನದಲ್ಲಿ ಛತ್ರಪತಿ ಶಿವಾಜಿಯ ಮಹಾರಾಜರ ಜನ್ಮ ದಿನಾಚರಣೆ

ಜೇವರ್ಗಿ: ಇಂದು ನೆಲೋಗಿ ಗ್ರಾಮದಲ್ಲಿ ಡಾ. ಅಂಬೇಡ್ಕರ್ ಸೇವಾ ಚಾರಿಟೇಬಲ್ ಟ್ರಸ್ಟ್ ನೆಲೋಗಿವತಿಯಿಂದ ಡಾ. ಬಿ.ಆರ್.ಅಂಬೇಡ್ಕರ ಸಮುದಾಯ ಭವನದಲ್ಲಿ ಛತ್ರಪತಿ…

3 weeks ago

ಸಮಾಜದಲ್ಲಿನ ಅನಿಷ್ಟ ಪದ್ಧತಿ ಹೋರಾಟ ಅಗತ್ಯ: ಮೇಯರ್

ಇ-ಮೀಡಿಯಾ ಲೈನ್ ನ್ಯೂಸ್ ಕಲಬುರಗಿ: ಮೂಢನಂಬಿಕೆ, ಅನಿಷ್ಟ ಪದ್ಧತಿ, ಸಂವಿಧಾನದ ಆಶಯ ಈಡೇಸುವ ನಿಟ್ಟಿನಲ್ಲಿ ಜನ್ಮ ತಾಳಿದ ಮಾನವ ಬಂಧುತ್ವ…

4 weeks ago

ಕಲಬುರಗಿ; 200 ಶಾಲಾ ಮಕ್ಕಳಿಗೆ ಆನಾಪಾನ ಧ್ಯಾನ ಆಯೋಜನೆ

ಕಲಬುರಗಿ: ನಗರದ ಸೆಂಟ್ ಮೇರಿ ಶಾಲೆಯಲ್ಲಿ 5 ರಿಂದ 9 ನೇ ತರಗತಿಯ 200 ಶಾಲಾ ಮಕ್ಕಳಿಗೆ ಆನಾಪಾನ ಧ್ಯಾನ…

1 month ago

ಉಚಿತ ಆರೋಗ್ಯ ತಪಾಸಣೆ ಶಿಬಿರ

ಜೇವರ್ಗಿ: ತಾಲೂಕಿನ ಜನರ ಸೇವೆಗಾಗಿ ಕಲಬುರಗಿಯ ಇಸ್ಲಾಮಾಬಾದ ಕಾಲೋನಿಯ ಅಲ್ ಶಿಫಾ ಆಸ್ಪತ್ರೆಯ ಮುಖ್ಯಸ್ಥರು ಉಚಿತ ಆರೋಗ್ಯ ತಪಾಸಣೆ ಶಿಬಿರವನ್ನು…

1 month ago