ಬಿಸಿ ಬಿಸಿ ಸುದ್ದಿ

ಜ.21ರಂದು ನಿಜ ಶರಣ ಅಂಬಿಗರ ಚೌಡಯ್ಯ ಜಯಂತಿ ಆಚರಣೆ

ಇ-ಮೀಡಿಯಾ ಲೈನ್ ನ್ಯೂಸ್

ಕಲಬುರಗಿ: ನಿಜಶರಣ ಅಂಬಿಗರ ಚೌಡಯ್ಯನ ವರ 905ನೇ ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸಲಾಗುವು ಎಂದು ವಿಧಾನ ಪರಿಷತ್ ಸದಸ್ಯರಾದ ತಿಪ್ಪಣ್ಣಪ್ಪ ಕಮಕನೂರ ತಿಳಿಸಿದರು.

ಕಲಬುರಗಿ ನಗರದ ಪತ್ರಿಕಾ ಭವನದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿದ್ದ ಅವರು, ಜನೆವರಿ 21ರಂದು ಬೆಳಿಗ್ಗೆ 11ಗಂಟೆಗೆ ಗಂಜ್ ಪ್ರದೇಶದ ನಗರೇಶ್ವರ ಶಾಲೆಯಿಂದ ನಿಜಶರಣ ಅಂಬಿಗರ ಚೌಡಯ್ಯನವರ ಭಾವಚಿತ್ರದ ಮೆರವಣಿಗೆಗೆ ಜಿಲ್ಲಾ ಉಸ್ತುವಾರಿ ಮಂತ್ರಿ ಪ್ರಿಯಾಂಕ್ ಖರ್ಗೆ ಅವರು ಚಾಲನೆ ನಿಡುವರು. ಅಂದು ಮಧ್ಯಾಹ್ನ 02 ಗಂಟೆಗೆ ಎಸ್.ಎಂ. ಪಂಡಿತ್ ರಂಗಮಂದಿರಕ್ಕೆ ಮೆರವಣಿಗೆ ತಲುಪಿದ ನಂತರ ವೇದಿಕೆಯ ಕಾರ್ಯಕ್ರಮ ಜರುಗಲಿದ್ದು, ಕಾರ್ಯಕ್ರಮದಲ್ಲಿ ಹಿರಿಯ ಜನಪ್ರತಿನಿಧಿಗಳು ಹಾಗೂ ಸಮಾಜದ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದರು.

ಇನ್ನು ಜಯಂತ್ಯೋತ್ಸವ ಸಮಿತಿಗೆ ಶಿವಾನಂದ ಹೊನಗುಂಟಿ ಅವರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದ್ದು, ಜಯಂತ್ಯೋತ್ಸವ ನಿಮಿತ್ಯ ಯುನೈಟೆಡ್ ಆಸ್ಪತ್ರೆಯವರು ರಿಯಾಯಿತಿ ದರದಲ್ಲಿ ಆರೋಗ್ಯ ಕಾರ್ಡ್ ವಿತರಣೆ ಮಾಡಲಿದ್ದಾರೆಂದು ತಿಳಿಸಿದ ಅವರು, ಸಮಾಜದ ಬಹುದಿನದ ಬೇಡಿಕೆಯಾಗಿರುವ ನಿಜಶರಣ ಅಂಬಿಗರ ಚೌಡಯ್ಯನವರ ಮೂರ್ತಿ ಸ್ಥಾಪನೆಗೆ ಕಾಲ ಸನ್ನಿಹಿತವಾಗಿದೆ ಪಾಲಿಕೆ ಆಯುಕ್ತರು ಸ್ಥಳವಕಾಶ ಕಲ್ಪಿಸುವುದಾಗಿ ಹೇಳಿದ್ದಾರೆ. ಹಾಗಾಗಿ ಮೂರ್ತಿ ಸ್ಥಾಪನೆಗೆ ಭೂಮಿ ಪೂಜೆ ಸಹ ಮಾಡಲಾಗುವುದೆಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಜಯಂತ್ಯೋತ್ಸವ ಸಮಿತಿಯ ಅಧ್ಯಕ್ಷರಾದ ಶಿವಾನಂದ ಹೊನಗುಂಟಿ, ಅವ್ವಣ್ಣ, ಮ್ಯಾಕೇರಿ, ಗುಂಡು ಐನಾಪೂರ, ಶಾಂತಪ್ಪ ಕೂಡಿ, ಬಸವರಾಜ್ ಬೂದಿಹಾಳ, ಅಣ್ಣಪ್ಪ ಜಮಾದಾರ ಸೇರಿದಂತೆ ಇತರರು ಉಪಸ್ಥಿತರಿದ್ದರು.

emedialine desk

Share
Published by
emedialine desk

Recent Posts

ಮಹಿಳೆಯರನ್ನು ಗೌರವಿಸುವ ಶ್ರೀಮಂತ ಸಂಪ್ರದಾಯ ಹೊಂದಿರುವ ದೇಶ ಭಾರತ

ಮಾರ್ಚ್ 8 ರಂದು ಅಂತರರಾಷ್ಟ್ರೀಯ ಮಹಿಳಾ ದಿನ ಅಶೋಕ ಪಾಟೀಲ ಮಹಿಳೆ ಅಥವಾ ಸ್ತ್ರೀ ಪದವು ಸಂಸ್ಕøತದ್ದು, ಕನ್ನಡದಲ್ಲಿ ಈ…

1 week ago

ನಿಧನ ವಾರ್ತೆ: ಭೀಮರಾವ.ಸಿ.ಸುಗೂರ

ಶಹಾಬಾದ:ನಗರದ ಹಳೆಶಹಾಬಾದನ ವೀರಶೈವ ಲಿಂಗಾಯತ ಸಮಾಜದ ಮುಖಂಡರಾದ ಭೀಮರಾವ.ಸಿ.ಸುಗೂರ (77) ಶನಿವಾರದಂದು ನಿಧನರಾಗಿದ್ದಾರೆ. ಇವರಿಗೆ ಇಬ್ಬರು ಸುಪುತ್ರರು, ಇಬ್ಬರು ಸುಪುತ್ರಿಯರು…

2 weeks ago

ನೆಲೋಗಿ ಬಿ.ಆರ್.ಅಂಬೇಡ್ಕರ ಭವನದಲ್ಲಿ ಛತ್ರಪತಿ ಶಿವಾಜಿಯ ಮಹಾರಾಜರ ಜನ್ಮ ದಿನಾಚರಣೆ

ಜೇವರ್ಗಿ: ಇಂದು ನೆಲೋಗಿ ಗ್ರಾಮದಲ್ಲಿ ಡಾ. ಅಂಬೇಡ್ಕರ್ ಸೇವಾ ಚಾರಿಟೇಬಲ್ ಟ್ರಸ್ಟ್ ನೆಲೋಗಿವತಿಯಿಂದ ಡಾ. ಬಿ.ಆರ್.ಅಂಬೇಡ್ಕರ ಸಮುದಾಯ ಭವನದಲ್ಲಿ ಛತ್ರಪತಿ…

4 weeks ago

ಸಮಾಜದಲ್ಲಿನ ಅನಿಷ್ಟ ಪದ್ಧತಿ ಹೋರಾಟ ಅಗತ್ಯ: ಮೇಯರ್

ಇ-ಮೀಡಿಯಾ ಲೈನ್ ನ್ಯೂಸ್ ಕಲಬುರಗಿ: ಮೂಢನಂಬಿಕೆ, ಅನಿಷ್ಟ ಪದ್ಧತಿ, ಸಂವಿಧಾನದ ಆಶಯ ಈಡೇಸುವ ನಿಟ್ಟಿನಲ್ಲಿ ಜನ್ಮ ತಾಳಿದ ಮಾನವ ಬಂಧುತ್ವ…

4 weeks ago

ಕಲಬುರಗಿ; 200 ಶಾಲಾ ಮಕ್ಕಳಿಗೆ ಆನಾಪಾನ ಧ್ಯಾನ ಆಯೋಜನೆ

ಕಲಬುರಗಿ: ನಗರದ ಸೆಂಟ್ ಮೇರಿ ಶಾಲೆಯಲ್ಲಿ 5 ರಿಂದ 9 ನೇ ತರಗತಿಯ 200 ಶಾಲಾ ಮಕ್ಕಳಿಗೆ ಆನಾಪಾನ ಧ್ಯಾನ…

1 month ago

ಉಚಿತ ಆರೋಗ್ಯ ತಪಾಸಣೆ ಶಿಬಿರ

ಜೇವರ್ಗಿ: ತಾಲೂಕಿನ ಜನರ ಸೇವೆಗಾಗಿ ಕಲಬುರಗಿಯ ಇಸ್ಲಾಮಾಬಾದ ಕಾಲೋನಿಯ ಅಲ್ ಶಿಫಾ ಆಸ್ಪತ್ರೆಯ ಮುಖ್ಯಸ್ಥರು ಉಚಿತ ಆರೋಗ್ಯ ತಪಾಸಣೆ ಶಿಬಿರವನ್ನು…

1 month ago