ಬಿಸಿ ಬಿಸಿ ಸುದ್ದಿ

19ರಂದು ಮಹಾಯೋಗಿ ವೇಮನ ಜಯಂತಿ ಆಚರಣೆ

ಇ-ಮೀಡಿಯಾ ಲೈನ್ ನ್ಯೂಸ್
ಕಲಬುರಗಿ: ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮಹಾನಗರ ಪಾಲಿಕೆ ಹಾಗೂ ಜಿಲ್ಲಾ ಪಂಚಾಯ್ತಿ ಇವರುಗಳ ಸಂಯುಕ್ತಾಶ್ರದಲ್ಲಿ ಜನವರಿ 19ರಂದು ಮಹಾಯೋಗಿ ವೇಮನ ಜಯಂತಿ ಆಚರಣೆ-2025 ಆಚರಿಸಲಾಗುವುದು ಎಂದು ರೆಡ್ಡಿ ಸಮಾಜದ ಜಿಲ್ಲಾಧ್ಯಕ್ಷ ಚನ್ನಾರೆಡ್ಡಿ ಪಾಟೀಲ ತಿಳಿಸಿದರು.
ನಗರದ ಎಸ್.ಎಂ. ಪಂಡಿತ ರಂಗ ಮಂದಿರದಲ್ಲಿ ಭಾನುವಾರ ಬೆಳಗ್ಗೆ 11 ಗಂಟೆಗೆ ನಡೆಯಲಿರುವ ಈ ಸಮಾರಂಭವನ್ನು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಉದ್ಘಾಟಿಸಲಿದ್ದಾರೆ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲ, ಮುಖ್ಯಮಂತ್ರಿಗಳ ಸಲಹೆಗಾರ ಬಿ.ಆರ್. ಪಾಟೀಲ, ಕೆಕೆಆರ್ ಡಿಬಿ ಅಧ್ಯಕ್ಷ ಡಾ. ಅಜಯಸಿಂಗ್, ಶಾಸಕರಾದ ಎಂ.ವೈ. ಪಾಟೀಲ, ಕನೀಜ್ ಫಾತಿಮಾ, ಮಾಜಿ ಸಚಿವ ಬಾಬುರಾವ ಚಿಂಚನಸೂರ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. ಶಾಸಕ ಅಲ್ಲಮಪ್ರಭು ಪಾಟೀಲ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಹೇಳಿದರು.
ಉಚಿತ ತಪಾಸಣಾ ಶಿಬಿರ:  ಮಹಾಯೋಗಿ ಮೇಮನ ಜಯಂತಿ ನಿಮಿತ್ತ ರೆಡ್ಡಿ ಸಮಾಜ ಹಾಗೂ ಮಹಾಸಾದ್ವಿ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಪತ್ತಿನ ಸಹಕಾರ ಸಂಘ, ಶ್ರೀ ಸಿದ್ಧರಾಮೇಶ್ವರ ಕಣ್ಣಿನ ಆಸ್ಪತ್ರೆ, ಯುನೈಟೆಡ್ ಆಸ್ಪತ್ರೆ, ಕಾಮರೆಡ್ಡಿ ಆಸ್ಪತ್ರೆ ಮತ್ತು ಆಶೀರ್ವಾದ ಆಸ್ಪತ್ರೆ ಇವರ ಸಹಯೋಗದಲ್ಲಿ ಜ.‌19ರಂದು ನಗರದ ಎಸ್.ಎಂ. ಪಂಡಿತ ರಂಗಮಂದಿರದಲ್ಲಿ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಉಚಿತ ನೇತ್ರ ಚಿಕಿತ್ಸಾ ಮತ್ತು ಮದುಮೇಹದ ಕಣ್ಣಿನ ಕಾಯಿಲೆಗಳ ಹಾಗೂ ಸಾಮಾನ್ಯ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಲಾಗಿದೆ. ಸಣ್ಣ ಕೈಗಾರಿಕೆ ಸಚಿವ ಶರಣಬಸಪ್ಪ ದರ್ಶನಾಪುರ ಶಿಬಿರ ಉದ್ಘಾಟಿಸಲಿದ್ದಾರೆ ಎಂದು ಡಾ.‌ ರಾಜಶ್ರೀ ರೆಢ್ಡಿ ತಿಳಿಸಿದರು. ನೋಂದಣಿ ಹಾಗೂ ಹೆಚ್ಚಿನ ಮಾಹಿತಿಗೆ ಮಲ್ಲಿಕಾರ್ಜುನ ರೆಡ್ಡಿ ಕೊಳ್ಳೂರ- 9663363632, ಗುರುನಾಥರೆಡ್ಡಿ- 7259179295ಗೆ ಸಂಪರ್ಕಿಸುವಂತೆ ಕೋರಿದರು.
ಮಹಾಸಾದ್ವಿ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಪತ್ತಿನ ಸಹಕಾರ ಸಂಘದ  ಅಧ್ಯಕ್ಷೆ ವಿಶಾಲಾಕ್ಷಿ ಕರಡ್ಡಿ ಮಾತನಾಡಿ, ಮಹಾಯೋಗಿ ಮೇಮನ ಅವರ 613ನೇ ಜಯಂತಿ ಆಚರಿಸಲಾಗುತ್ತಿದ್ದು, ತೆಲುಗು ಭಾಷೆಯ ಇವರ ಚೌಪದಿಗಳು ವಿವಿಧ ಭಾಷೆಗಳಿಗೆ ಅನುವಾಗೊಂಡಿವೆ. ಲೇಖಕ ಮಹಿಪಾಲರೆಡ್ಡಿ ಮುನ್ನೂರ್ ಅವರು  ಅನುವಾದ ಮಾಡಿದ ಜೀವ ಕಾರಣ್ಯ ಮಹಾಯೋಗಿ ವೇಮನ ಎನ್ನುವ ಕೃತಿ ಕೂಡ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದರು.
ವಿಜಯರೆಡ್ಡಿ ಹಾಗೂ ಮಹೇಶ ಹರಸೂರ ಮಾತನಾಡಿ, ರೆಡ್ಡಿ ಯುವ ಸಮಾಜದ ವತಿಯಿಂದ ಬೆಳಗ್ಗೆ ಬೆಳಗ್ಗೆ 9.30ಕ್ಕೆ ಜಗತ್ ವೃತ್ತದಿಂದ ರಂಗಮಂದಿರದವರೆಗೆ ಮೆರವಣಿಗೆ ನಡೆಸಲಾಗುವುದು ಎಂದರು. ಚಂದ್ರಶೇಖರರೆಡ್ಡಿ ನಾಲವಾರ, ವಿಜಯರೆಡ್ಡಿ, ಡಾ. ಲಕ್ಷ್ಮೀ ಅರಸಿಣಗಿ, ಮಹೇಶ ಹರಸೂರ ಇತರರಿದ್ದರು.
ರಾಜಕೀಯ ಗಣ್ಯರ ಗೈರು- ಬೇಸರ: ಪ್ರತಿ ವರ್ಷದ ಜಯಂತಿ ಕಾರ್ಯಕ್ರಮಕ್ಕೆ ರಾಜಕೀಯ ಗಣ್ಯರು ಗೈರು ಹಾಜರಾಗುತ್ತಿರುವುದಕ್ಕೆ ಬೇಸರ ವ್ಯಕ್ತಪಡಿಸಿದ ಅವರು, ಆಮಂತ್ರಣ ಪತ್ರಿಕೆಯಲ್ಲಿರುವ ಯಾರೊಬ್ಬರೂ ಕಾರ್ಯಕ್ರಮಕ್ಕೆ ಆಗಮಿಸುವುದಿಲ್ಲ. ಈ ಬಾರಿ ಎಲ್ಲರೂ ಆಗಮಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಆಗ್ರಹಿಸಿದರು.
emedialine desk

Recent Posts

ಮಹಿಳೆಯರನ್ನು ಗೌರವಿಸುವ ಶ್ರೀಮಂತ ಸಂಪ್ರದಾಯ ಹೊಂದಿರುವ ದೇಶ ಭಾರತ

ಮಾರ್ಚ್ 8 ರಂದು ಅಂತರರಾಷ್ಟ್ರೀಯ ಮಹಿಳಾ ದಿನ ಅಶೋಕ ಪಾಟೀಲ ಮಹಿಳೆ ಅಥವಾ ಸ್ತ್ರೀ ಪದವು ಸಂಸ್ಕøತದ್ದು, ಕನ್ನಡದಲ್ಲಿ ಈ…

1 week ago

ನಿಧನ ವಾರ್ತೆ: ಭೀಮರಾವ.ಸಿ.ಸುಗೂರ

ಶಹಾಬಾದ:ನಗರದ ಹಳೆಶಹಾಬಾದನ ವೀರಶೈವ ಲಿಂಗಾಯತ ಸಮಾಜದ ಮುಖಂಡರಾದ ಭೀಮರಾವ.ಸಿ.ಸುಗೂರ (77) ಶನಿವಾರದಂದು ನಿಧನರಾಗಿದ್ದಾರೆ. ಇವರಿಗೆ ಇಬ್ಬರು ಸುಪುತ್ರರು, ಇಬ್ಬರು ಸುಪುತ್ರಿಯರು…

2 weeks ago

ನೆಲೋಗಿ ಬಿ.ಆರ್.ಅಂಬೇಡ್ಕರ ಭವನದಲ್ಲಿ ಛತ್ರಪತಿ ಶಿವಾಜಿಯ ಮಹಾರಾಜರ ಜನ್ಮ ದಿನಾಚರಣೆ

ಜೇವರ್ಗಿ: ಇಂದು ನೆಲೋಗಿ ಗ್ರಾಮದಲ್ಲಿ ಡಾ. ಅಂಬೇಡ್ಕರ್ ಸೇವಾ ಚಾರಿಟೇಬಲ್ ಟ್ರಸ್ಟ್ ನೆಲೋಗಿವತಿಯಿಂದ ಡಾ. ಬಿ.ಆರ್.ಅಂಬೇಡ್ಕರ ಸಮುದಾಯ ಭವನದಲ್ಲಿ ಛತ್ರಪತಿ…

4 weeks ago

ಸಮಾಜದಲ್ಲಿನ ಅನಿಷ್ಟ ಪದ್ಧತಿ ಹೋರಾಟ ಅಗತ್ಯ: ಮೇಯರ್

ಇ-ಮೀಡಿಯಾ ಲೈನ್ ನ್ಯೂಸ್ ಕಲಬುರಗಿ: ಮೂಢನಂಬಿಕೆ, ಅನಿಷ್ಟ ಪದ್ಧತಿ, ಸಂವಿಧಾನದ ಆಶಯ ಈಡೇಸುವ ನಿಟ್ಟಿನಲ್ಲಿ ಜನ್ಮ ತಾಳಿದ ಮಾನವ ಬಂಧುತ್ವ…

4 weeks ago

ಕಲಬುರಗಿ; 200 ಶಾಲಾ ಮಕ್ಕಳಿಗೆ ಆನಾಪಾನ ಧ್ಯಾನ ಆಯೋಜನೆ

ಕಲಬುರಗಿ: ನಗರದ ಸೆಂಟ್ ಮೇರಿ ಶಾಲೆಯಲ್ಲಿ 5 ರಿಂದ 9 ನೇ ತರಗತಿಯ 200 ಶಾಲಾ ಮಕ್ಕಳಿಗೆ ಆನಾಪಾನ ಧ್ಯಾನ…

1 month ago

ಉಚಿತ ಆರೋಗ್ಯ ತಪಾಸಣೆ ಶಿಬಿರ

ಜೇವರ್ಗಿ: ತಾಲೂಕಿನ ಜನರ ಸೇವೆಗಾಗಿ ಕಲಬುರಗಿಯ ಇಸ್ಲಾಮಾಬಾದ ಕಾಲೋನಿಯ ಅಲ್ ಶಿಫಾ ಆಸ್ಪತ್ರೆಯ ಮುಖ್ಯಸ್ಥರು ಉಚಿತ ಆರೋಗ್ಯ ತಪಾಸಣೆ ಶಿಬಿರವನ್ನು…

1 month ago