ಇ-ಮೀಡಿಯಾ ಲೈನ್ ನ್ಯೂಸ್
ಕಲಬುರಗಿ: ಸಿಟಿಜನ್ ಫಾರ್ ಸೋಷಿಯಲ್ ಜಸ್ಟಿಸ್ ನಿಂದ ಜ.24ರಂದು ಸಂವಿಧಾನ ಸನ್ಮಾನ ಅಭಿಯಾನ ಮತ್ತು ಸಂವಿಧಾನ ಬದಲಾಯಿಸಿದ್ದು ಯಾರು ಎಂಬ ಪುಸ್ತಕ ಬಿಡುಗಡೆ ಸಮಾರಂಭ ನಡೆಯಲಿದೆ ಎಂದು ಮಾಜಿ ಶಾಸಕ ರಾಜಕುಮಾರ ಪಾಟೀಲ ತೇಲ್ಕೂರ ತಿಳಿಸಿದರು.
ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು. ಭಾರತ ಸಂವಿಧಾನ ಸಮರ್ಪಣೆಯ 75ನೇ ವರ್ಷದ ಅಮೃತ ಮಹೋತ್ಸವ ನಿಮಿತ್ತ ಅಂದು ಬೆಳಗ್ಗೆ 10.30ಕ್ಕೆ ನಗರದ ಎಸ್ಎಂ ಪಂಡಿತ ರಂಗ ಮಂದಿರದಲ್ಲಿ ಕಾರ್ಯಕ್ರಮ ನಡೆಯಲಿದೆ.
ಬಿಜೆಪಿ ಒಬಿಸಿ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ, ರಾಜ್ಯಸಭಾ ಸದಸ್ಯ ಕೆ.ಲಕ್ಷ್ಮಣ ಉದ್ಘಾಟಿಸಿ, ಪುಸ್ತಕ ಬಿಡುಗಡೆ ಮಾಡುವರು, ಸಂಸದ ಗೋವಿಂದ ಕಾರಜೋಳ, ಮಾಜಿ ಸಚಿವ ಎನ್.ಮಹೇಶ ಸೇರಿ ಅನೇಕ ಮುಖಂಡರು ಪಾಲ್ಗೊಳ್ಳಲಿದ್ದು, ಸಂಘಟನೆ ಮುಖ್ಯಸ್ಥ ವಾದಿರಾಜ ಕಾರ್ಯಕ್ರಮದಲ್ಲಿ ತಮ್ಮ ವಿಚಾರಗಳನ್ನು ಮಂಡಿಸುವರು ಎಂದು ಪ್ರಕಟಣೆ ಮೂಲಕ ತಿಳಿಸಿದ್ದರು.