ಪತ್ರಕರ್ತರು ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಬೇಕು

0
7
ಇ-ಮೀಡಿಯಾ ಲೈನ್
ಕಲಬುರಗಿ: ಪತ್ರಕರ್ತರು ಸಾರ್ವಜನಿಕರ ಸಮಸ್ಯೆಗಳ ಪರಿಹಾರದ ನಿಟ್ಟಿನಲ್ಲಿ ಸರ್ಕಾರ ಮತ್ತು ಸಾರ್ವಜನಿಕರ ನಡುವೆ ಸೇತುವೆಯಾಗಿ ಕಾರ್ಯನಿರ್ವಹಿಸಬೇಕು ಎಂದು ಕಲಬುರಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಉಪನಿರ್ದೇಶಕ ಜಡಿಯಪ್ಪ ಜಿ.‌ ತಿಳಿಸಿದರು.
ಕರ್ನಾಟಕ ಕಾರ್ಯನಿರತ ದಿನಪತ್ರಿಕೆಗಳ‌ ಪತ್ರಕರ್ತರ ಸಂಪಾದಕರ ಸಂಘದ ಕಲಬುರಗಿ ಜಿಲ್ಲಾ ಘಟಕದ ವತಿಯಿಂದ ಶುಕ್ರವಾರ ನಗರದ ಪತ್ರಿಕಾ ಭವನದಲ್ಲಿ ಹಮ್ಮಿಕೊಂಡಿದ್ದ ಸನ್ಮಾನ ಕಾರ್ಯಕ್ರಮ‌ ಉದ್ಘಾಟಿಸಿ ಮಾತನಾಡಿದರು.
ಕಲಬುರಗಿಯಲ್ಲಿ ಸಣ್ಣ, ಮಧ್ಯಮ ಮತ್ತು ರಾಜ್ಯ ಮಟ್ಟದ ಎಲ್ಲ ಪತ್ರಕರ್ತರು ಒಗ್ಗಟ್ಟಿನಿಂದ ಇರುವುದು ಬಹಳ ಸಂತೋಷ ಹಾಗೂ ಸಮಾಧಾನದ ಸಂಗತಿ ಎಂದರು.
ಹಿರಿಯ ಪತ್ರಕರ್ತ ಶಂಕರ ಕೋಡ್ಲಾ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಕಲಬುರಗಿ ಜಿಲ್ಲಾ ಘಟಕದ ಅಧ್ಯಕ್ಷ ಬಾಬುರಾವ ಯಡ್ರಾಮಿ ಮಾತನಾಡಿದರು. ಪತ್ರಕರ್ತರ ಸಂಘದ ರಾಜ್ಯ ಸಮಿತಿ ಸದಸ್ಯ ಡಾ. ಶಿವರಂಜನ ಸತ್ಯಂಪೇಟೆ ವೇದಿಕೆಯಲ್ಲಿದ್ದರು. ಕರ್ನಾಟಕ ಕಾರ್ಯನಿರತ ದಿನಪತ್ರಿಕೆಗಳ‌ ಪತ್ರಕರ್ತರ ಸಂಪಾದಕರ ಸಂಘದ ಕಲಬುರಗಿ ಜಿಲ್ಲಾ ಘಟಕದ ಅಧ್ಯಕ್ಷ ಸಿದ್ರಾಮಪ್ಪ ಮಾಲಿ ಬಿರಾದಾರ ಅಧ್ಯಕ್ಷತೆ ವಹಿಸಿದ್ದರು.
ಮೋಹರೆ ಹನುಮಂತರಾಯ ಪ್ರಶಸ್ತಿ ಪುರಸ್ಕೃತ ಡಿ. ಶಿವಲಿಂಗಪ್ಪ, ಆಂದೋಲನ ಪತ್ರಿಕೆ ಪ್ರಶಸ್ತಿ ಪುರಸ್ಕೃತ ಶಿವರಾಯ ದೊಡ್ಡಮನಿ, ಮಾಧ್ಯಮ ಮಾನ್ಯತಾ ಸಮಿತಿಗೆ ನೇಮಕಗೊಂಡ ಗುರುರಾಜ ಕುಲಕರ್ಣಿ, ಎಸ್.ಎಸ್ಟಿ ಪತ್ರಿಕೆಗಳ ಸಂಘದ ವಿಶೇಷ ಪ್ರಶಸ್ತಿ ಪುರಸ್ಕೃತ  ಸುರೇಶ ಶಿಂಧೆ, ಕೆಯುಡಬ್ಲೂ ಜೆ ವಿಶೇಷ ಪ್ರಶಸ್ತಿ ಪುರಸ್ಕೃತ ಶರಣಬಸಪ್ಪ ಜಿಡಗೆ, ಬಸವೇಶ್ವರ ಬ್ಯಾಂಕ್ ನ ನಿರ್ದೇಶಕರಾಗಿ ಚುನಾಯಿತರಾದ ಸತೀಶ  ಜೇವರ್ಗಿ ಮುಂತಾದವರನ್ನು ಸಂಘದ ವತಿಯಿಂದ ಸನ್ಮಾನಿಸಲಾಯಿತು.
ಸಿದ್ದಣ್ಣ ಮಾಲಗಾರ ನಿರೂಪಿಸಿದರು. ಬಿ.ವಿ. ಚಕ್ರವರ್ತಿ ಪ್ರಾಸ್ತಾವಿಕ ಮಾತನಾಡಿದರು.  ಸಂಘದ ಪ್ರಧಾನ ಕಾರ್ಯದರ್ಶಿ ಆನಂದ ಮಣ್ಣೂರ ಸ್ವಾಗತಿಸಿದರು. ಚಂದ್ರಕಾಂತ ಹಾವನೂರ ವಂದಿಸಿದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here