ಕಲಬುರಗಿ: ಹಲವಾರು ಪ್ರಕರಣಗಳಲ್ಲಿ ಭಾಗಿಯಾಗಿ ಪೊಲೀಸರ ಕೈಗೆ ಸಿಗದೆ ತಲೆಮರಿಸಿಕೊಂಡಿದ್ದಲ್ಲದೆ ಕರ್ತವ್ಯನಿರತ ಪೊಲೀಸರ ಮೇಲೆ ಹಲ್ಲೆ ಮಾಡಿದ ಆರೋಪಿ ಮಲ್ಲಿಕಾರ್ಜುನ ತಂದೆ ಚಂದ್ರಕಾಂತ ಕಡಬೂರ ಈತನಿಗೆ ಐ.ಪಿ.ಸಿ. ಕಲಂ ೩೫೩ ಮತ್ತು ೩೩೨ರಲ್ಲಿನ ಅಪರಾಧಕ್ಕೆ ಏಕಕಾಲದಲ್ಲಿ ೨ ವರ್ಷ ಜೈಲು ಶಿಕ್ಷೆ ಮತ್ತು ೨೦೦೦ ರೂ. ದಂಡ ವಿಧಿಸಿ ಕಲಬುರಗಿಯ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ರಾಚಪ್ಪ ತಾಳಿಕೋಟೆ ಅವರು ಸೋಮವಾರ ತೀರ್ಪು ನೀಡಿದ್ದಾರೆ.
ಮಲ್ಲಿಕಾರ್ಜುನ ಕಡಬೂರ ಗುಲಬರ್ಗಾ ವಿಶ್ವವಿದ್ಯಾಲಯ ಪೊಲೀಸ್ ಠಾಣೆಯ ಹಲವಾರು ಪ್ರಕರಣಗಳಲ್ಲಿ ಬೇಕಾಗಿದ್ದ ಆರೋಪಿ. ದಿ.೧೦-೧-೨೦೧೮ ರಂದು ಗುಲಬರ್ಗಾ ವಿಶ್ವವಿದ್ಯಾಲಯ ವ್ಯಾಪ್ತಿಯ ಆಶ್ರಯ ಕಾಲೋನಿಯ ಮನೆಯೊಂದರಲ್ಲಿ ಆರೋಪಿ ಅಡಗಿ ಕುಳಿತುಕೊಂಡಿರುವ ಖಚಿತ ಮಾಹಿತಿಯ ಮೇಲೆ ಗುಲಬರ್ಗಾ ವಿಶ್ವವಿದ್ಯಾಲಯ ಠಾಣೆಯ ಪೊಲೀಸರು ಆತನನ್ನು ಬಂಧಿಸಲು ಹೋದಾಗ ಠಾಣೆಯ ಕರ್ತವ್ಯ ನಿರತ ಅನೀಲ ಕುಮಾರ ಹೆಚ್.ಸಿ ಮೇಲೆ ಮದ್ಯದ ಬಾಟಲಿನಿಂದ ಹಲ್ಲೆ ಮಾಡಿ ಓಡಿ ಹೋಗಲು ಪ್ರತ್ನಿಸಿದಲ್ಲದೆ ಆರೋಪಿಯನ್ನು ಹಿಡಿಯಲು ಬಂದ ವಿಶ್ವನಾಥ ಸಿ.ಪಿ.ಸಿ ಅವರನ್ನು ಸಹ ಕೊಲೆ ಮಾಡುವ ಉದ್ದೇಶದಿಂದ ತಲ್ವಾರನಿಂದ ಮಾರಣಾಂತಿಕ ಹಲ್ಲೆ ಮಾಡಿದನು. ಈ ಕುರಿತು ಗುಲಬರ್ಗಾ ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಜೇವರ್ಗಿ ಪೊಲೀಸ್ ಠಾಣೆ ಸಿ.ಪಿ.ಐ ಡಿ.ಬಿ.ಪಾಟೀಲ ಅವರು ಪ್ರಕರಣದ ತನಿಖೆ ನಡೆಸಿ ಆರೋಪಿತನ ವಿರುದ್ಧ ಐ.ಪಿ.ಸಿ ಕಲಂ, ೩೫೩, ೩೦೭, ೩೩೨, ೩೩೩ ಅಡಿಯಲ್ಲಿ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಿದ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ರಾಚಪ್ಪ ತಾಳಿಕೋಟೆ ಅವರು ಉಭಯ ಪಕ್ಷಗಳ ವಾದಗಳನ್ನು ಆಲಿಸಿ ಆರೋಪಿ ಮಲ್ಲಿಕಾರ್ಜುನ ತಂದೆ ಚಂದ್ರಕಾಂತ ಕಡಬೂರ ಐ.ಪಿ.ಸಿ ಕಲಂ ೩೫೩, ೩೦೭, ೩೩೨, ೩೩೩ ಅಡಿಯಲ್ಲಿ ಎಸಗಿರುವ ಆರೋಪವು ಸಾಕ್ಷ್ಯಧಾರಗಳಿಂದ ಸಾಬೀತಾಗಿರುವ ಹಿನ್ನೆಲೆಯಲ್ಲಿ ಆರೋಪಿಗೆ ಐ.ಪಿ.ಸಿ ಕಲಂ ೩೫೩ ಅಡಿ ಅಪರಾಧಕ್ಕೆ ೨ ವರ್ಷ ಜೈಲು ಹಾಗೂ ೧,೦೦೦ ರೂ ದಂಡ, ದಂಡ ಕಟ್ಟಲು ತಪ್ಪಿದಲ್ಲಿ ಮತ್ತೆ ೩ ತಿಂಗಳ ಸಾದಾ ಜೈಲು ಶಿಕ್ಷೆ ಹಾಗೂ ಕಲಂ ೩೩೨ರಲ್ಲಿನ ಅಪರಾಧಕ್ಕೆ ೨ ವರ್ಷ ಜೈಲು ಶಿಕ್ಷೆ ಮತ್ತು ೧,೦೦೦ ದಂಡ, ತಪ್ಪಿದಲ್ಲಿ ೩ ತಿಂಗಳ ಸಾದಾ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿರುತ್ತಾರೆ. ಪ್ರಕರಣದಲ್ಲಿ ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕಿ ಅಂಜನಾ ಚವ್ಹಾಣ ಇವರು ವಾದ ಮಂಡಿಸಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…