ರಾಯಚೂರು: ರಾಯಚೂರಿನ ಇಂಜಿನಿಯರಿಂಗ್ ವಿದ್ಯಾರ್ಥಿನಿ ಮಧು ಪತ್ತಾರ ಅನುಮಾನಸ್ಪದ ಸಾವಿನ ಪ್ರಕರಣದ ಕುರಿತು ನ್ಯಾಯಕ್ಕೆ ಆಗ್ರಹಸಿ, ತಪ್ಪಿತಸ್ಥರಿಗೆ ಶಿಕ್ಷೆ ಆಗಬೇಕೆಂದು ರಾಜ್ಯದ್ಯಾಂತ ಹೋರಾಟಗಳು ಚುರುಕುಗೊಂಡಿದೆ.
ವಿದ್ಯಾರ್ಥಿನಿ ಮಧು ಪತ್ತಾರ ಸಾವಿಗೆ ರಾಜ್ಯವನ್ನೆ ಬೆಚ್ಚಿ ಬಿಳಿಸಿದ್ದು, ಕೃತ್ಯದಲ್ಲಿ ಭಾಗಿಯಾದ ಆರೋಪಿಗಳಿಗೆ ಕಠಿಣ ಶಿಕ್ಷೆ ಆಗಬೇಕೆಂದು, ಎಸ್.ಎಫ್.ಐ, ವಿಶ್ವಕರ್ಮ ಸಮಾಜ, ಪ್ರಗತಿಪರ ಸಂಘಟನೆಗಳು ಹಾಗೂ ವಿವಿಧ ವಿದ್ಯಾರ್ಥಿಪರ ಸಂಘಟನೆಗಳು ಪ್ರತಿಭಟನೆ ನಡೆಸಿದ್ದಾರೆ. ವಿವಿಧ ಸಂಘಟನೆಗಳು ಸೇರಿ ಸಾವಿರಾರು ಸಂಖ್ಯೆಯಲ್ಲಿ ಜನರು ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಧು ಸಾವಿಗೆ ನ್ಯಾಯಕ್ಕಾಗಿ ಹೋರಟ ನಡೆಸಿದ್ದರು.
ಈ ಸಂದರ್ಭದಲ್ಲಿ ಕೆಲ ಕಿಡಗೇಡಿಗಳ ಕಾರಣದಿಂದ ಹೋರಾಟದಲ್ಲಿ ತಾಳ್ಮೆ ಕಳೆದುಕೊಂಡು ಹಿಂಸಾಚಾರದ ರೂಪ ಪಡೆದುಕೊಂಡಿತ್ತು. ಒಂದೆಡೆ ಮಧು ಸಾವಿಗೆ ನ್ಯಾಯಕ್ಕಾಗಿ ಪ್ರತಿಭಟನೆ ನಡೆದರೆ, ಇನ್ನೊಂದೆಡೆ ಜಿಲ್ಲಾಧಿಕಾರಿ ಕಚೇರಿ ಒಳಗಡೆ ಹೋರಾಟಗಾರರ ನುಗ್ಗಲು ಯತ್ನಿಸಿದ್ದರು. ಹೋರಾಟಗಾರರನ್ನು ತಡೆಯಲು ಯತ್ನಿಸಿದ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ್ದಾರೆ. ಇದರಿಂದ ಕೆರಳಿದ ಕೆಲ ಯುವಕರು ಏಕಾಏಕಿ ಕಲ್ಲು , ಚಪ್ಪಲಿ, ವಾಟರ್ ಬಾಟಲ್ ಏಸೆಗಿದ್ದರಿಂದ ಹೋರಟ ವಿಕೋಪಕ್ಕೆ ತಿರುಗಿತ್ತು. ಪ್ರಘಟನೆಯಲ್ಲಿ ವಿಶ್ವಕರ್ಮ ಸಮಾಜದ ಜಿಲ್ಲಾಧ್ಯಕ್ಷ ಗುರು ತಲೆಗೆ ಕಲ್ಲು ಬಡಿದು ಗಾಯಗೊಂಡಿರುವ ಘಟನೆಯು ಸಂಭವಿಸಿತ್ತು. ಮತ್ತೊಂದೆಡೆ ವಿಶ್ವಕರ್ಮ ಸಮಸಜದ ಮುಖಂಡ ಮಾರುತಿ ಬಡಿಗೇರ ಮೈಮೇಲೆ ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆಯೂ ನಡೆಯಿತು.
ಪ್ರತಿಭಟನಾ ಮೇರವಣಿಗೆಯಲ್ಲಿ ವಿಶ್ವಕರ್ಮ ಸಮಾಜದ ಸ್ವಾಮೀಜಿ, ಚಿತ್ರ ನಟ ಭುವನ್, ನಟಿ ಹರ್ಷಿಕಾ ಪೋಣಚ್ಚಾ ಭಾಗಿಯಾಗಿ ಹೋರಾಟಕ್ಕೆ ಬೆಂಬಲ ನೀಡಿ ಮಧು ಸಾವಿಗೆ ನ್ಯಾಯಕ್ಕಾಗಿ ಒತ್ತಾಯಿಸಿದ್ದರು. ರ್ಯಾಲಿಯಲ್ಲಿ ವಿದ್ಯಾರ್ಥಿನಿ ಮಧು ಪತ್ತಾರ ಪೋಷಕರು ಪಾಲ್ಗೊಂಡಿದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…