ಬಿಸಿ ಬಿಸಿ ಸುದ್ದಿ

ಇವಿಎಂ ದುರ್ಬಳಕೆ ಮೂಲಕ ಹರಿಯಾಣಾ, ಮಹಾರಾಷ್ಟ್ರದಲ್ಲಿ ಬಿಜೆಪಿ ಅಧಿಕಾರಕ್ಕೆ: ಖರ್ಗೆ ಆರೋಪ

ಕಲಬುರಗಿ: ವಿದ್ಯುನ್ಮಾನ ಮತಯಂತ್ರಗಳ ದುರ್ಬಳಕೆ ಮಾಡಿಕೊಂಡು ಬಿಜೆಪಿ ಮಹಾರಾಷ್ಟ್ರ ಮತ್ತು ಹರಿಯಾಣಾದಲ್ಲಿ ಅಧಿಕಾರಕ್ಕೆ ಬರುತ್ತಿದೆ ಎಂದು ಕೇಂದ್ರದ ಮಾಜಿ ಸಚಿವ, ಎಐಸಿಸಿಐ ಪ್ರಧಾನ ಕಾರ್ಯದರ್ಶಿ ಹಾಗೂ ಮಹಾರಾಷ್ಟ್ರ ರಾಜ್ಯದ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಡಾ. ಮಲ್ಲಿಕಾರ್ಜುನ್ ಖರ್ಗೆ ಅವರು ಇಲ್ಲಿ ಆರೋಪಿಸಿದರು.

ತಮ್ಮ ನಿವಾಸದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉಭಯ ರಾಜ್ಯಗಳಲ್ಲಿ ಎಲ್ಲಿ ಬಿಜೆಪಿಯನ್ನು ಗೆಲ್ಲಿಸಲು ಅಗತ್ಯವಿದೆಯೋ ಅಂತಹ ಕಡೆಗಳಲ್ಲಿ ವಿದ್ಯುನ್ಮಾನ ಮತಯಂತ್ರಗಳನ್ನು ದುರ್ಬಳಕೆ ಮಾಡಿಕೊಳ್ಳಲಾಗಿದೆ ಎಂದು ದೂರಿದರು. ಮಹಾರಾಷ್ಟ್ರ ಮತ್ತು ಹರಿಯಾಣಾ ರಾಜ್ಯಗಳ ವಿಧಾನಸಭಾ ಚುನಾವಣೆಯ ಕುರಿತಂತೆ ಮತದಾನೋತ್ತರ ಸಮೀಕ್ಷೆಗಳ ಕುರಿತು ತೀವ್ರ ಅಸಮಾಧಾನ ಮುಂದುವರೆಸಿದ ಖರ್ಗೆಯವರು, ಎರಡೂ ರಾಜ್ಯಗಳಲ್ಲಿ ವಿದ್ಯುನ್ಮಾನ ಮತಯಂತ್ರಗಳನ್ನು ಬಿಜೆಪಿ ದುರ್ಬಳಕೆ ಮಾಡಿಕೊಂಡಿದೆ ಎಂದು ಪುನರುಚ್ಛರಿಸಿದರು.
ಎಲ್ಲ ಕ್ಷೇತ್ರಗಳಲ್ಲಿಯೂ ವಿದ್ಯುನ್ಮಾನ ಮತಯಂತ್ರಗಳು ದುರ್ಬಳಕೆ ಆಗುತ್ತವೆ ಎಂದು ನಾನು ಆರೋಪಿಸುವುದಿಲ್ಲ. ಬದಲಾಗಿ ಕೆಲವು ಗುರುತಿಸಲ್ಪಟ್ಟ ಕ್ಷೇತ್ರಗಳಲ್ಲಿ ವಿದ್ಯುನ್ಮಾನ ಮತಯಂತ್ರಗಳನ್ನು ದುರ್ಬಳಕೆ ಮಾಡಿಕೊಳ್ಳಲಾಗಿದೆ ಎಂದು ದೂರಿದರು.

ಎಲ್ಲಿ ಬಿಜೆಪಿಯನ್ನು ಗೆಲ್ಲಿಸಲು ಅಗತ್ಯವಿದೆಯೋ ಆ ಕ್ಷೇತ್ರಗಳಲ್ಲಿ ವಿದ್ಯುನ್ಮಾನ ಮತಯಂತ್ರಗಳ ದುರ್ಬಳಕೆ ಆಗಿದೆ. ಸೋತಾಗ ಹೇಳಿದರೆ ಸೋತ ಕಾರಣಕ್ಕೆ ಹೇಳುತ್ತಾರೆ ಎನ್ನುತ್ತಾರೆ. ಆದಾಗ್ಯೂ, ಈ ಮುಂಚಿನಿಂದಲೂ ನಾವು ವಿದ್ಯುನ್ಮಾನ ಮತಯಂತ್ರಗಳ ದುರ್ಬಳಕೆ ಕುರಿತು ಹೇಳುತ್ತಲೇ ಬಂದಿದ್ದೇವೆ. ವಿರೋಧ ಪಕ್ಷಗಳು ಚುನಾವಣಾ ಆಯೋಗಕ್ಕೂ ಮನವಿ ಮಾಡಿವೆ. ಆದಾಗ್ಯೂ, ಚುನಾವಣಾ ಆಯೋಗವು ಇದನ್ನು ಒಪ್ಪುತ್ತಿಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.

ಭಾರತವನ್ನು ಹೊರತುಪಡಿಸಿ ಇಡೀ ಜಗತ್ತೇ ವಿದ್ಯುನ್ಮಾನ ಮತಯಂತ್ರಗಳನ್ನು ಕೈಬಿಟ್ಟು ಮತಪತ್ರಗಳ ಮೂಲಕ ಚುನಾವಣೆಗಳನ್ನು ಕೈಗೊಳ್ಳುತ್ತಿವೆ. ಅಮೇರಿಕದಂತಹ ದೊಡ್ಡ ದೇಶವೇ ಮತಪತ್ರ ಬಳಸುತ್ತಿದೆ. ಭಾರತದಲ್ಲಿ ೧೧೦ ಕೋಟಿ ಜನಸಂಖ್ಯೆ ಇರುವಾಗ ಮತಪತ್ರ ಬಳಸಲಾಗುತ್ತಿತ್ತು. ಈಗ ಇರುವ ೧೩೦ ಕೋಟಿ ಜನಸಂಖ್ಯೆಗೆ ಮತಪತ್ರ ಬಳಸಲು ದೊಡ್ಡ ತೊಂದರೆಯೇನೂ ಆಗದು. ಚುನಾವಣಾ ಆಯೋಗ ಮತಪತ್ರ ಬಳಸಲು ಮುಂದಾಗುತ್ತಿಲ್ಲ. ಅದನ್ನೇ ಬಿಜೆಪಿ ಬಂಡವಾಳ ಮಾಡಿಕೊಂಡು ಅಧಿಕಾರದ ಗದ್ದುಗೆ ಏರುತ್ತಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.
ಕೇಂದ್ರದಲ್ಲಿನ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಎನ್‌ಡಿಎ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಖರ್ಗೆಯವರು, ದೇಶದ ಆರ್ಥಿಕ ಪರಿಸ್ಥಿತಿ ಹಿಂದೆಂದೂ ಕಂಡರಿಯದಂತೆ ಬಿಕ್ಕಟ್ಟು ಎದುರಿಸುತ್ತಿದೆ. ನಿರುದ್ಯೋಗ ಸಮಸ್ಯೆ ಮತ್ತಷ್ಟು ಉಲ್ಬಣಿಸಿದೆ. ಕೈಗಾರಿಕೆಗಳು ಮುಚ್ಚಿವೆ ಎಂದು ಆರೋಪಿಸಿದರು.

ಕೇವಲ ಸುಳ್ಳುಗಳನ್ನು ಹೇಳಿಕೊಂಡು ಆಡಳಿತ ನಡೆಸಲಾಗುತ್ತಿದೆ. ಸಮಸ್ಯೆಗಳಿಗೆ ಸ್ಪಂದಿಸದೇ ಜನರ ಗಮನವನ್ನು ಬೇರೆಡೆ ಸೆಳೆಯಲು ರಾಷ್ಟ್ರೀಯ ಹಾಗೂ ಅಂತರ್ರಾಷ್ಟ್ರೀಯ ವಿಷಯಗಳನ್ನು ಬಿಜೆಪಿ ನಾಯಕರು ಚುನಾವಣಾ ಸಂದರ್ಭದಲ್ಲಿ ಮುಂದೆ ಮಾಡುತ್ತಾರೆ ಎಂದು ಅವರು ದೂರಿದರು. ಅಭಿವೃದ್ಧಿ ವಿಷಯದಲ್ಲಿ ರಾಜ್ಯ ಸರ್ಕಾರ ತಾರತಮ್ಯ ನೀತಿ ಅನುಸರಿಸುತ್ತಿದೆ. ಸ್ವತ: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರೇ ಅನುದಾನ ಹಂಚಿಕೆಯಲ್ಲಾದ ತಾರತಮ್ಯವನ್ನು ಸದನದಲ್ಲಿ ಒಪ್ಪಿಕೊಳ್ಳುವುದರೊಂದಿಗೆ ಅದನ್ನು ಸರಿಪಡಿಸುವುದಾಗಿ ಭರವಸೆ ನೀಡಿದ್ದರು. ಆದಾಗ್ಯೂ, ಕಾಂಗ್ರೆಸ್ ಶಾಸಕರ ಕ್ಷೇತ್ರಗಳಿಗೆ ಈ ಹಿಂದೆ ನಿಗದಿಯಾಗಿದ್ದ ಹಣವನ್ನು ಬಿಜೆಪಿ ಶಾಸಕರ ಕ್ಷೇತ್ರಗಳಿಗೆ ಬಳಕೆ ಮಾಡಲಾಗುತ್ತಿದೆ. ಅಭಿವೃದ್ಧಿಯಲ್ಲಿ ರಾಜಕೀಯ ಮಾಡುವುದು ಯಾರಿಗೂ ಶೋಭೆ ತರುವುದಿಲ್ಲ ಎಂದು ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಖರ್ಗೆಯವರು ಕಿಡಿಕಾರಿದರು.

ರಾಜ್ಯ ಸರ್ಕಾರ ಕೊಡುವ ಅನುದಾನ ಯಾವುದೋ ವ್ಯಕ್ತಿ ಅಥವಾ ಪಕ್ಷಕ್ಕೆ ಹೋಗಲ್ಲ. ಆಯಾ ಕ್ಷೇತ್ರದ ಜನತೆಯ ಅಭಿವೃದ್ಧಿಗೆ ನೆರವಾಗುತ್ತದೆ. ರಸ್ತೆ, ಕುಡಿಯುವ ನೀರು ಇತ್ಯಾದಿ ಸಾರ್ವಜನಿಕರಿಗೆ ಉಪಯೋಗವಾಗುವ ಕೆಲಸಗಳು, ಯಾವ ಶಾಸಕರಿಗೆ ಎಷ್ಟು ಅನುದಾನ ಕೊಡಬೇಕು ಅದನ್ನು ಕೊಡಬೇಕು. ಅದನ್ನು ಬಿಟ್ಟು ಈ ಹಿಂದೆ ನಿಗದಿಯಾದ ಹಣವನ್ನು ಮರಳಿ ಪಡೆಯೋದು ಕಾಂಗ್ರೆಸ್, ಬಿಜೆಪಿ ಶಾಸಕರೆಂದು ತಾರತಮ್ಯ ಮಾಡುವುದು ಸರಿಯಲ್ಲ. ಅಭಿವೃದ್ಧಿ ವಿಷಯದಲ್ಲಿ ರಾಜಕಾರಣ ಮಾಡುವುದು ಬಿಡಬೇಕು. ತಾರತಮ್ಯ ಸರಿಪಡಿಸುವುದಾಗಿ ಹೇಳಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ನುಡಿದಂತೆ ನಡೆಯಬೇಕು ಎಂದು ಅವರು ಒತ್ತಾಯಿಸಿದರು.

emedialine

Recent Posts

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

3 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

3 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

3 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

20 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

22 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago