ಕಲಬುರಗಿ: ನಗರದ ಖಾಸಗಿ ಕಾಲೇಜೊಂದರಲ್ಲಿ ವಿದ್ಯಾರ್ಥಿ ಓರ್ವ ಎರಡನೇ ಮಹಡಿಯಿಂದ ಕಾಲುಜಾರಿ ಬಿದ್ದು ಸಾವನಪ್ಪಿರುವ ಘಟನೆ ಸ್ಟೇಷನ್ ಬಜಾರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ದತ್ತಾತ್ರೇಯ ಚಂದ್ರಕಾಂತ ಸಾಗರ (29) ಮೃತಪಟ್ಟ ವಿದ್ಯಾರ್ಥಿ, ಸಾಗರ ಜಿಲ್ಲೆಯ ಕಮಲಾಪುರ ತಾಲ್ಲೂಕಿನ ಮರಮಂಚಿ ಗ್ರಾಮದ ನಿವಾಸಿ ಎಂದು ಗುರುತಿಸಲಾಗಿದೆ.
ಖಾಸಗಿ ಸಂಸ್ಥೆಯಲ್ಲಿ ಕೌಶಲ್ಯ ಅಭಿವೃದ್ಧಿ ತರಬೇತಿ ಮುಗಿಸಿಕೊಂಡ ಎರಡನೇ ಮಹಡಿಯಿಂದ ಇಳಿಯುತ್ತಿದ್ದಾಗ ಕಾಲುಜಾರಿ ಬಿದ್ದು ಪರಿಣಾಮ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.
ಈ ಘಟನೆಯ ಕುರಿತು ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.