ಸುರಪುರ: ಇಂದು ಸರಕಾರ ಶಿಕ್ಷಣ ಕ್ಷೇತ್ರದಲ್ಲಿ ಗುಣಮಟ್ಟದ ಕಲಿಕೆಗೆ ಹೆಚ್ಚು ಮಹತ್ವ ನೀಡುತ್ತಿದ್ದು ಆ ನಿಟ್ಟಿನಲ್ಲಿ ವಿದ್ಯಾರ್ಥಿಗಳಿಗಾಗಿ ಹಮ್ಮಿಕೊಂಡಿರುವ ವಿಜ್ಞಾನ ವಸ್ತು ಪ್ರದರ್ಶನ ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವನೆ ಬೆಳೆಸುವಲ್ಲಿ ಹಾಗೂ ಪರಿಣಾಮಕಾರಿ ಕಲಿಕೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಪ್ರಾಂಶುಪಾಲ ಬಸವರಾಜ ಕೊಡೇಕಲ್ ಹೇಳಿದರು.
ಸ್ಥಳೀಯ ರಂಗಂಪೇಟೆಯ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಶನಿವಾರದಂದು ಹಮ್ಮಿಕೊಂಡಿದ್ದ ಶಾಲಾ ಹಂತದ ವಿಜ್ಞಾನ ವಸ್ತು ಪ್ರದರ್ಶನ ಉದ್ಘಾಟಿಸಿ ಅವರು ಮಾತನಾಡಿ ನಮ್ಮ ದೇಶದ ಮಹಾನ್ ವಿಜ್ಞಾನಿಗಳಾದ ಸರ್ ಸಿ.ವಿ.ರಾಮನ್, ಡಾ.ಎ.ಪಿ.ಜೆ.ಅಬ್ದುಲ್ ಕಲಾಂ ಇನ್ನೀತರ ಮಹಾನ್ ವಿಜ್ಞಾನಿಗಳು ವಿಜ್ಞಾನ ಕ್ಷೇತ್ರದಲ್ಲಿ ಮಾಡಿರುವ ಸಾಧನೆಗಳ ಕುರಿತು ತಿಳಿದುಕೊಳ್ಳುವ ಮೂಲಕ ವಿದ್ಯಾರ್ಥಿ ದೆಸೆಯಲ್ಲಿಯೇ ವೈಜ್ಞಾನಿಕ ಚಿಂತನೆಗಳು ಹಾಗೂ ಆಸಕ್ತಿಯನ್ನು ಬೆಳೆಸಿಕೊಂಡು ಭವಿಷ್ಯದಲ್ಲಿ ನಮ್ಮ ದೇಶದ ಶ್ರೇಷ್ಠ ವಿಜ್ಞಾನಿಗಳಾಗಿ ಹೊರ ಹೊಮ್ಮಿ ದೇಶಕ್ಕೆ ಕೊಡುಗೆ ನೀಡಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಉಪ ಪ್ರಾಂಶುಪಾಲ ಗುರುಲಿಂಗಪ್ಪ ಖಾನಾಪುರ, ಉಪನ್ಯಾಸಕರಾದ ಅಬ್ದುಲ್ ಅಜೀಜ್, ಕಬೀರ, ಶಿಕ್ಷಕರಾದ ಭಾಗ್ಯಶ್ರೀ ಕುಲಕರ್ಣಿ, ಶರಣಪ್ಪ ಬರ್ಲಾ, ಮಲಕಣ್ಣ, ಮಹೇಶ್ವರಿ, ತರನುಮ್ ಫಾತೀಮಾ, ಶರಣಪ್ಪ ಚಿನ್ನಾಕಾರ ಹಾಗೂ ಮರೆಪ್ಪ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಶಿಕ್ಷಕರಾದ ಶ್ರೀನಿವಾಸ ಕುಲಕರ್ಣಿ ನಿರೂಪಿಸಿದರು ಹಾಗೂ ಈರಪ್ಪ ಕೊಳ್ಳಿ ವಂದಿಸಿದರು.
ವಿಜ್ಞಾನ ವಸ್ತು ಪ್ರದರ್ಶನದಲ್ಲಿ ಕನ್ನಡ ಹಾಗೂ ಉರ್ದು ಮಾಧ್ಯಮದ ಮಕ್ಕಳು ೨೫ಕ್ಕೂ ಹೆಚ್ಚು ಮಾದರಿಗಳನ್ನು ಪ್ರದರ್ಶಿಸಿದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…