ಬಿಸಿ ಬಿಸಿ ಸುದ್ದಿ

ಸೇವಾ ಬಳಗ ಆಯೋಜನೆ: ದೀಪ ಹೊತ್ತಿಸಿ, ಮದ್ದನ್ನಲ್ಲ

ಕಲಬುರಗಿ: ಪರಿಸರ ಈಗಾಗಲೇ ಅನೇಕ ಮಾಲಿನ್ಯಗಳಿಂದ ತತ್ತರಿಸಿ ಹೋಗಿದೆ. ದೀಪಾವಳಿಯ ಹಬ್ಬದಲ್ಲಿ ವಿಪರಿತ ಪಟಾಕಿ ಸಿಡಿಸಿ ಮತ್ತಷ್ಟು ಮಾಲಿನ್ಯ ಮಾಡುವುದು ಸಮಂಜಸವಲ್ಲ. ಬದಲಿಗೆ ದೀಪಗಳನ್ನು ಹೊತ್ತಿಸುವ ಮೂಲಕ ಪರಿಸರವನ್ನು ಶುದ್ಧವಾಗಿಸಬಹುದಾಗಿದೆ.ಇದರ ಬಗ್ಗೆ ಎಲ್ಲರೂ ಕಾಳಜಿ ವಹಿಸಬೇಕಾಗಿದೆಯೆಂದು ಉಪನ್ಯಾಸಕ, ಚಿಂತಕ ಪ್ರೊ.ಎಚ್.ಬಿ.ಪಾಟೀಲ ಅಭಿಪ್ರಾಯಪಟ್ಟರು.

ಅವರು ನಗರದ ಆಳಂದ ರಸ್ತೆಯ, ಕೆಎಚ್‍ಬಿ ಗ್ರೀನ್ ಪಾರ್ಕ ಬಡಾವಣೆಯಲ್ಲಿ, ಇಲ್ಲಿನ ‘ಬಸವೇಶ್ವರ ಸಮಾಜ ಸೇವಾ ಬಳಗ’ದ ವತಿಯಿಂದ ಭಾನುವಾರ ಸಂಜೆ ಹಮ್ಮಿಕೊಳ್ಳಲಾಗಿದ್ದ ‘ದೀಪಾವಳಿ ಅರಿವು ಕಾರ್ಯಕ್ರಮ’ದ ನಿಮಿತ್ಯ ಸಾಮೂಹಿಕವಾಗಿ ದೀಪಗಳನ್ನು ಪ್ರಜ್ವಲಿಸುವ ಮೂಲಕ ಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಿಲಾಯಿತು.

ಸಮಾಜ ಸೇವಕ, ಚಿಂತಕ ಶಿವಕಾಂತ ಚಿಮ್ಮಾ ಮಾತನಾಡಿ, ಪ್ರತಿವರ್ಷವು ಅನೇಕ ಮಕ್ಕಳು ಕಣ್ಣಿಗೆ ಗಾಯ ಮಾಡಿಕೊಂಡು ದೃಷ್ಟಿ ಹೀನರಾಗುತ್ತಿರುವುದು ಕಂಡು ಬರುತ್ತದೆ.ಈ ರೀತಿಯಾಗಿ ಆಚರಣೆ ಮಾಡದೇ, ದೀಪಗಳನ್ನು ಬೆಳಗಿಸಿ ಮಾಲಿನ್ಯ ರಹಿತವಾಗಿ, ಪರಸ್ಪರ ಶಾಂತಿ, ಪ್ರೀತಿ, ಸೌಹಾರ್ದತವಾಗಿ ಸಿಹಿ-ತಿಂಡಿಗಳನ್ನು ವಿನಿಮಯ ಮಾಡಿಕೊಂಡು ಅಚರಿಸಬೇಕು. ಶ್ರೇಷ್ಠ ಮೌಲ್ಯವನ್ನು ಸಾರುವ ಈ ಹಬ್ಬದ ಪಾವಿತ್ರ್ಯತೆಯನ್ನು ಉಳಿಸಿಕೊಂಡು ಹೋಗುವದು ತುಂಬಾ ಅವಶ್ಯಕವಾಗಿದೆಯೆಂದು ನುಡಿದರು.

ಕಾರ್ಯಕ್ರಮದಲ್ಲಿ ಬಳಗದ ಕಾರ್ಯದರ್ಶಿ ರಾಜಶೇಖರ ಬಿ.ಮರಡಿ, ಖಜಾಂಚಿ ಸೋಮಶೇಖರ ಮೂಲಗೆ, ಸದಸ್ಯ ಸೋಮಶೇಖರ ಮೂಲಗೆ, ಬಡಾವಣೆಯ ಪ್ರಮುಖಾದ ಮಹಾದೇವ ಹಿರೇಮಠ, ವೀರೇಶ ಬೋಳಶೆಟ್ಟಿ, ಸೂರ್ಯಕಾಂತ ಸಾವಳಗಿ, ಡಿ.ವಿ.ಕುಲಕರ್ಣಿ, ಸಂಗಮೇಶ ಸರಡಗಿ, ಚಂದ್ರಕಾಂತ ತಳವಾರ, ರಾಮದಾಸ ಪಾಟೀಲ, ಕೆ.ವಿ.ಕುಲಕರ್ಣಿ, ಅನಿತಾ ಬಕರೆ, ಜ್ಯೋತಿ ಚಿಮ್ಮಾ, ಬಾಲಾಜಿ ರುದ್ರವಾಡಿ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

8 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

18 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

18 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

18 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

2 days ago