ಸೇಡಂ: ಇತ್ತೀಚೆಗೆ ತಾಲೂಕಿನ ಕೊತ್ತಪಲ್ಲಿ ತಾಂಡಾದಿಂದ ನಾಪತ್ತೆಯಾಗಿದ್ದ ಐದು ಜನ ವಸತಿ ಶಾಲಾ ಮಕ್ಕಳು ಮುಂಬೈನಲ್ಲಿ ಪತ್ತೆಯಾಗಿದ್ದಾರೆ.
ಮುಂಬೈನ ತಮ್ಮ ಪರಿಚಯಸ್ಥರು ಇರುವ ಅಲಿಭಾಗ ಎಂಬ ಪ್ರದೇಶದಲ್ಲಿ ಹೊಟೇಲ್ ವೊಂದರಲ್ಲಿ ಕೆಲಸ ಕೇಳಲು ತೆರಳಿದಾಗ ಅನುಮಾನಗೊಂಡ ಸ್ಥಳೀಯರು ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ.
ಮುಧೋಳ ಗ್ರಾಮದ ಸರಕಾರಿ ಶಾಲೆಯಲ್ಲಿ ೮ನೇ ತರಗತಿ ಓದುತ್ತಿದ್ದ ಅಂಕುಶ ಗಣೇಶ ಜಾಧವ (೧೪), ಜೇತಲಾ ಚಂದಾ ರಾಠೋಡ (೧೪), ಜೀತು ಬನ್ಸಿಲಾಲಾ ರಾಠೋಡ (೧೬), ಅರ್ಜುನ ಬಾಡು ರಾಠೋಡ (೧೪), ರವೀಂದ್ರ ಹಣಮಂತ ರಾಠೋಡ (೧೪) ಮಂಗಳವಾರ ನಾಪತ್ತೆಯಾಗಿದ್ದರು.
ನಂತರ ಪ್ರಕರಣ ದಾಖಲಿಸಿಕೊಂಡಿದ್ದ ಮುಧೋಳ ಪೊಲೀಸರು ತನಿಖೆ ಕೈಗೊಂಡಿದ್ದರು. ಪಿಐ ತಮ್ಮಾರಾಯ ಪಾಟೀಲ ನೇತೃತ್ವದಲ್ಲಿ ತನಿಖಾ ತಂಡ ರಚಿಸಿ ಬೆಂಗಳೂರು ಮತ್ತು ಮುಂಬೈ ನಲ್ಲಿ ಪತ್ತೆ ಕಾರ್ಯ ಮಾಡಲಾಗಿತ್ತು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…