ಸುರಪುರ: ಇಂದು ಮಹಿಳೆಯರಿಗೆ ಎಲ್ಲದರಲ್ಲೂ ಸಮಾನವಾದ ಅವಕಾಶವಿದೆ.ಅದರಂತೆ ಮಹಿಳೆಯರು ಗ್ರಾಮೀಣ ಅಭಿವೃಧ್ಧಿ ಮತ್ತು ಪಂಚಾಯತ್ ರಾಜ್ ವ್ಯವಸ್ಥೆಗೆ ಸಹಕರಿಸಬೇಕು.ಇದರಿಂದ ಗ್ರಾಮೀಣ ಭಾರತದ ಚಿತ್ರಣ ಬದಲಿಸುವ ಶಕ್ತಿ ಮಹಿಳೆಯರು ತೋರಿಸಿದಂತಾಗಲಿದೆ ಎಂದು ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಅಮರೇಶ ಮಾತನಾಡಿದರು.
ವಿಶ್ವ ಸಂಸ್ಥೆ ಅಭಿವೃಧ್ಧಿ ಕಾರ್ಯಕ್ರಮ ಯಾದಗಿರಿ ಹಾಗು ದಿಶಾ ಸಂಸ್ಥೆಯ ವತಿಯಿಂದ ನಗರದ ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಒಂದು ದಿನದ ಕಾರ್ಯಗಾರದಲ್ಲಿ ಭಾಗವಹಿಸಿ ಮಾತನಾಡಿದರು.ಸ್ವಚ್ಛ ಭಾರತ ಮಿಷನ್ ಎಂಬ ಕ್ರಾಂತಿಕಾರಿ ಕಾರ್ಯಕ್ರಮ ಯಶಸ್ವಿಯಾಗಬೇಕಾದರೆ ಅದಕ್ಕೆ ಮಹಿಳೆಯರ ಪಾತ್ರ ಮುಖ್ಯವಾಗಿದೆ.ಗ್ರಾಮೀಣ ಭಾಗದಲ್ಲಿನ ಯಾವುದೇ ಸಮಸ್ಯೆಗಳು ಕಂಡು ಬಂದಲ್ಲಿ ವಿದ್ಯಾರ್ಥಿನಿಯರು ತಾಲ್ಲೂಕು ಪಂಚಾಯತಿಗೆ ಬಂದು ತಿಳಿಸಿದಲ್ಲಿ ಅವುಗಳನ್ನು ಪರಿಹರಿಸಲು ಮುಂದಾಗುವುದಾಗಿ ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಚಾರ್ಯ ವೆಂಕಟೇಶ ನಾಯಕ ಮಾತನಾಡಿ,ವಿಶ್ವ ಸಂಸ್ಥೆ ಅಭೀವೃಧ್ಧಿ ಕಾರ್ಯಕ್ರಮವು ಬಹು ಮುಖ್ಯವಾದ ಕಾರ್ಯಕ್ರಮವಾಗಿದ್ದು ಮಹಿಳೆಯರು ಇದರಲ್ಲಿ ಭಾಗವಹಿಸುವ ಮೂಲಕ ಸದುಪಯೋಗ ಮಾಡಿಕೊಳ್ಳಬೇಕೆಂದರು.
ವಿಶ್ವ ಸಂಸ್ಥೆ ಅಭಿವೃಧ್ಧಿ ಕಾರ್ಯಕ್ರಮದ ನಿರ್ದೇಶಕ ಪಿ.ನೀಲಕಂಠ ಪ್ರಾಸ್ತಾವಿಕವಾಗಿ ಮಾತನಾಡಿದರು.ವಿದ್ಯಾರ್ಥಿನಿ ಸಿದ್ದಮ್ಮ ಸ್ವಾಗತಿಸಿದರು,ಉಪನ್ಯಾಸಕಸುರೇಶ ನಿರೂಪಿಸಿ ವಂದಿಸಿದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…