ಬಿಸಿ ಬಿಸಿ ಸುದ್ದಿ

ಆನೆಕಾಲು ರೋಗ ನಿಯಂತ್ರಣಕ್ಕೆ ಸಾಮೂಹಿಕ ಔಷಧಿ ವಿತರಣೆ

ಸುರಪುರ: ಈ ಆನೆಕಾಲು ರೋಗವು ಒಬ್ಬರಿಂದ ಇನ್ನೊಬ್ಬರಿಗೆ ಹರಡುವ ರೋಗವಾಗಿದ್ದು ಈ ರೋಗದ ನಿಯಂತ್ರಣಕ್ಕೆ ಸರ್ಕಾರವು ಸಾಮೂಹಿಕ ಔಷಧಿ ನುಂಗಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಈ ಕಾರ್ಯಕ್ರಮದ ಸಫಲತೆ ಎಲ್ಲಾ ಇಲಾಖೆಯ ಸಿಬ್ಬಂದಿಗಳು ಕೈಜೋಡಿಸಲು ತಹಶಿಲ್ದಾರ ನಿಂಗಣ್ಣ ಬಿರಾದರ ಕರೆ ನೀಡಿದರು.

ನಗರದ ತಹಶಿಲ್ದಾರ ಕಚೇರಿ ಸಭಾಂಗಣದಲ್ಲಿ ತಾಲೂಕು ಆಡಳಿತ ಹಾಗೂ ಆರೋಗ್ಯ ಇಲಾಖೆ ಜಂಟಿಯಾಗಿ ಆಯೋಜಿಸಿದ್ದ ತಾಲೂಕು ಚಾಲನಾ ಸಮಿತಿಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಮುಖ್ಯವಾಗಿ ಈ ಕಾರ್ಯಕ್ರಮದ ಸಫಲತೆಗೆ ಮಹಿಳಾ ಮತ್ತು ಕುಟುಂಬ ಇಲಾಖೆಯ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಶಿಕ್ಷಣ ಇಲಾಖೆಯ ಶಿಕ್ಷಕರು ಸಹಕಾರ ಅಗತ್ಯ ಈ ಕಾರ್ಯಕ್ರಮವನ್ನು ಗಂಭಿರವಾಗಿ ಪರಿಗಣಿಸಿ ಯೋಜನೆಯ ಲಾಬವನ್ನು ಸಾರ್ವಜನಿಕರಿಗೆ ತಲುಪುವಲ್ಲಿ ಸಹಕರಿಸುವಂತೆ ಹೇಳಿದರು.

ನಂತರ ತಲೂಕು ವೈದ್ಯಾಧಿಕಾರ ಡಾ.ಆರ್.ವಿ.ನಾಯಕ ಮಾತನಾಡಿ ಈ ಆನೆಕಾಲು ರೋಗ ನಿಯಂತ್ರಣಕ್ಕೆ ರೂಪಿಸಲಾದ ಇಲಾಖಾವಾರು ಯೋಜನೆ ಕುರಿತು ಸವಿಸ್ತಾರವಾಗಿ ಹೇಳಿದರು ಬಹುಮುಖ್ಯವಾಗಿ ಈ ಮಾತ್ರೆಯು ನುಂಗಿಸಿದಾಗ ಜನರಲ್ಲಿ ವಾಂತಿ, ಹುಟ್ಟೆಯಲ್ಲಿ ಕಸಿವಿಸಿಯಾಗುವಂತಹ ಲಕ್ಷಣ ಬಂದಲ್ಲಿ ಜನರು ಗಾಬರಿಗೊಳ್ಳುತ್ತಾರೆ ಹಾಗಾದರೆ ತಕ್ಷಣವೆ ನಮ್ಮ ಆಶಾ ಕಾರ್ಯಕರ್ತರ ಹತ್ತಿರ ಅದಕ್ಕೆ ತಕ್ಕಂತ ಮಾತ್ರಗಳಿರರುತ್ತವೆ ಅವುಗಳನ್ನು ಕೊಟ್ಟು ನಿಯಂತ್ರಿಸಬಹುದಾಗಿದೆ ಮತ್ತು ಪ್ರಾಥಮಿಕ ಆರೋಗ್ಯಕೇಂದ್ರಕ್ಕೂ ಬೇಟಿ ನೀಡಿ ಪರಿಶೀಲಿಸಿಕೊಳ್ಳಲು ತಿಳಿಸಬಹುದು ಎಂದು ತಿಳಿಸಿದರು.

ಈ ಕರ್ಯಕ್ರಮವು ನ.೪ ರಿಂದ ನ.೨೨ ರ ವರೆಗೆ ನಡೆಯಲಿದ್ದು ಇದರ ಸಫಲತೆಗೆ ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ನಗರಸಭೆ, ಸಮಾಜ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತ ಇಲಾಖೆ, ಹಿಂದುಳಿದ ಕಲ್ಯಾಣ ಇಲಾಖೆ ಹಾಗೂ ಪೋಲಿಸ್ ಇಲಾಖೆಯ ಸಹಯೋಗವು ಬಹು ಮುಖ್ಯವಾಗಿದೆ ಈ ಕಾರ್ಯಕ್ರಮ ಯಶಸ್ವಿಯಾದರೆ ನಮ್ಮ ತಾಲೂಕಿನಲ್ಲಿ ಆನೆಕಾಲು ರೋಗದಿಂದ ಭಾಧಿರು ಇಲ್ಲದಂತಾಗುತ್ತದೆ ಎಂದು ತಿಳಿಸಿದರು.
ಗ್ರೇಡ್ ೨ ತಹಶಿಲ್ದಾರ ಸುಫಿಯಾ ಸುಲ್ತಾನ, ಅಧಿಕಾರಿಗಳಾದ ಖಾದರ ಪಟೇಲ್, ಶಿವಪುತ್ರ, ಗುರುಬಾಯಿ ಹಿರೇಮಠ, ಪಾರ್ವತಿ, ಚಂದ್ರಲೀಲಾ ಪಾಟೀಲ, ವೆಂಕೋಬ, ಸಂಗೀತಾ ಸೇರಿದಂತೆ ಇನ್ನಿತರರಿದ್ದರು.

emedialine

Recent Posts

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

5 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

7 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

14 hours ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

14 hours ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

14 hours ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

1 day ago