ಕಲಬುರಗಿ: ರಾಜ್ಯ ಸರ್ಕಾರವೇ ಸಂಪೂರ್ಣವಾಗಿ ೧೭೫.೫೭ ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿರುವ ಕಲಬುರಗಿ ವಿಮಾನ ನಿಲ್ದಾಣದಿಂದ ಏರ್ ಅಥಾರಿಟಿ ಆಫ್ ಇಂಡಿಯಾ ಸಂಸ್ಥೆಯು ಸಾರ್ವಜನಿಕರ ವಿಮಾನ ಹಾರಾಟ (ವಾಣಿಜ್ಯ ಹಾರಾಟ) ಕೈಗೊಳ್ಳಲು ಅಕ್ಟೋಬರ್ ೩೧ ರಂದು ಡೈರೆಕ್ಟರ್ ಜನರಲ್ ಆಫ್ ಸಿವಿಲ್ ಏವಿಯೇಷನ್ ಅವರು ಏರೋಡ್ರೋಮ್ ಲೈಸೆನ್ಸ್ ನೀಡಿದ್ದಾರೆ ಎಂದು ಜಿಲ್ಲಾಧಿಕಾರಿ ಶರತ್ ಬಿ. ತಿಳಿಸಿದ್ದಾರೆ.
ವಾಣಿಜ್ಯ ಹಾರಾಟ ಕುರಿತಂತೆ ಏರ್ ಅಥಾರಿಟಿ ಆಫ್ ಇಂಡಿಯಾದೊಂದಿಗೆ ಕರ್ನಾಟಕ ರಾಜ್ಯ ಸರ್ಕಾರವು ಕಳೆದ ಆಗಸ್ಟ್ ೨೪ ರಂದು ಒಡಂಬಡಿಕೆ ಒಪ್ಪಂದಕ್ಕೆ ಸಹಿ ಹಾಕಿದ್ದು, ಅದರನ್ವಯ ದಿ.೩೦-೦೮-೨೦೧೯ ರಂದು ಸಂಪೂರ್ಣ ೭೪೨-೨೩ ಎಕರೆ ಪ್ರದೇಶವನ್ನು ಭೌತಿಕವಾಗಿ ಕಲಬುರಗಿ ಜಿಲ್ಲಾಧಿಕಾರಿ ಬಿ.ಶರತ್ ಅವರು ಏರ್‌ಪೋರ್ಟ್ ಅಥಾರಿಟಿ ಆಫ್ ಇಂಡಿಯಾದ ಕಲಬುರಗಿ ವಿಮಾನ ನಿಲ್ದಾಣದ ನಿರ್ದೇಶಕ ಎಸ್.ಜ್ಞಾನೇಶ್ವರ ರಾವ್ ಮತ್ತು ಜಂಟಿ ಜನರಲ್ ಮ್ಯಾನೇಜರ್ ಎಂ.ಯಾದಯ್ಯ ಅವರಿಗೆ ಅಧಿಕೃತವಾಗಿ ಹಸ್ತಾಂತರಿಸಿ ಹಂಚಿಕೆ ಪತ್ರ ನೀಡಿದ್ದರು.
೭೪೨ ಎಕರೆ ಪ್ರದೇಶದಲ್ಲಿ ನಿರ್ಮಿಸಲಾಗಿರುವ ಕಲಬುರಗಿ ವಿಮಾನ ನಿಲ್ದಾಣದಲ್ಲಿ ಆಗಸ್ಟ್ ೨೬, ೨೦೧೮ರಂದು ಯಶಸ್ವಿಯಾಗಿ ಪ್ರಾಯೋಗಿಕ ವಿಮಾನ ಹಾರಾಟ ನಡೆಸಲಾಗಿತ್ತು.
ಭವಿಷ್ಯದ ಮುಂದಾಲೋಚನೆ ಇಟ್ಟುಕೊಂಡು ಜೆಟ್ ಸೇರಿದಂತೆ ಏರ್ ಬಸ್‌ನಂತಹ ಬೃಹತ್ ವಿಮಾನಗಳು ಸಹ ಇಲ್ಲಿ ಬಂದಿಳಿಯಲು ಅನುವಾಗುವಂತೆ ೩.೭೨೫ ಕಿ.ಮಿ. ಉದ್ದದ ರನ್ವೇಯನ್ನು ಸಿದ್ದಪಡಿಸಲಾಗಿದ್ದು, ಇದು ದೇಶದ ೧೦ನೇ ಹಾಗೂ ರಾಜ್ಯದ ೨ನೇ ಅತಿ ಉದ್ದದ ರನ್ವೇ ಇದಾಗಿದೆ. ಈಗಾಗಲೆ ಕೇಂದ್ರ ಸರ್ಕಾರವು ಕಲಬುರಗಿ ವಿಮಾನ ನಿಲ್ದಾಣವನ್ನು ಉಡಾನ್ ಯೋಜನೆಯಡಿ ಸೇರಿಸಿರುವುದರಿಂದ ಲೋಹದ ಹಕ್ಕಿಯಲ್ಲಿ ಹಾರಾಡಬೇಕೆಂಬ ಈ ಪ್ರದೇಶದ ಜನರ ದಶಕದ ಕನಸು ಸನ್ನಿಹಿತವಾದಂತಾಗಿದೆ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…