ಬಿಸಿ ಬಿಸಿ ಸುದ್ದಿ

ವರದಿಗಾರನಿಗೆ ಜೀವ ಬೆದರಿಕೆ: ಕಾರ್ಯನಿರತ ಪತ್ರಕರ್ತರ ಸಂಘ ಅವತಿಯಿಂದ ಎಸ್.ಪಿ.ಗೆ ಮನವಿ

ಯಾದಗಿರಿ: ನಗರದಿಂದ ಪ್ರಕಟಗೊಳ್ಳುವ ಪತ್ರಿಕೆಯ ವರದಿಗಾರರಾದ ಬೀರಲಿಂಗಪ್ಪ ಕಿಲ್ಲನಕೇರಾ ಅವರಿಗೆ ಜೀವ ಬೆದರಿಕೆ ಹಾಕಿರುವುದಕ್ಕೆ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘವು  ಖಂಡಿಸಿದ್ದು ಕ್ರಮಕ್ಕೆ ಒತ್ತಾಯಿಸಿದೆ.

ಗುರುವಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಗೆ ತೆರಳಿದ ಪತ್ರಕರ್ತರ ಸಂಘದ ನಿಯೋಗ ಜಿಲ್ಲಾಧ್ಯಕ್ಷ ಬಿ.ಎಂ. ಜಗದೀಶ ನೇತೃತ್ವದಲ್ಲಿ ಮನವಿ ಸಲ್ಲಿಸಿತು. ಈ ಸಂದರ್ಭದಲ್ಲಿ ಮಾತನಾಡಿದ ಜಗದೀಶ, ಅವರು, ದಿನಾಂಕ ೩೦-೧೦-೨೦೧೯ ರಂದು ಯಾದಗಿರಿ ಟೈಮ್ಸ್ ಪತ್ರಿಕೆಯಲ್ಲಿ ಬಂದಂತಹ ವರದಿಗೆ ತಮ್ಮ ಪ್ರತಿಕ್ರಿಯೆ ನೀಡದೆ, ತಮ್ಮ ಅಭಿಪ್ರಾಯ ವ್ಯಕ್ತಪಡಿಸದೇ, ಜೀವ ಬೆದರಿಕೆ ಹಾಕಿರುವ ಕಿಲ್ಲನಕೇರಾ ಗ್ರಾಮದ ಕೆಲವು ವಿಕ್ಷಿಪ್ತ ಮನಸ್ಥಿತಿಯವರು ಯಾದಗಿರಿ ಟೈಮ್ಸ್ ವರದಿಗಾರ / ಅಂಕಣ ಬರಹಗಾರ ಬೀರಲಿಂಗಪ್ಪ ಕಿಲ್ಲನಕೇರಾ ಇವರಿಗೆ ದೂರವಾಣಿ ಕರೆ ಮಾಡಿ ಬೆದರಿಸಿರುವುದು ಖಂಡನೀಯವಾಗಿದೆ.

ಪತ್ರಕರ್ತರು ನಿರ್ಭಯದಿಂದ ವರದಿ ಮಾಡುವುದನ್ನು ನಿಯಂತ್ರಿಸಲು ಇಂತಹ ಬೆದರಿಕೆಗಳು ನಿರಂತರವಾಗಿ ನಡೆಯುತ್ತಿದ್ದು ಪತ್ರಕರ್ತರಿಗೆ ಸೂಕ್ತ ರಕ್ಷಣೆ ಇಲ್ಲದಂತಾಗಿದೆ. ಪ್ರಜಾಪ್ರಭುತ್ವದ ನಾಲ್ಕನೇ ಅಂಗ ಎಂದೇ ಕರೆಯಲಾಗುವ ಪತ್ರಿಕಾ ರಂಗದಲ್ಲಿ ಕೆಲಸ ಮಾಡುವ ಪತ್ರಕರ್ತರು ಜೀವ ಬೆದರಿಕೆ, ಹಲ್ಲೆಯಂತಹ ಘಟನೆಗಳ ಭಯದ ವಾತಾವರಣದಲ್ಲಿ ಕಾರ್ಯ ನಿರ್ವಹಿಸುವಂತಾಗಿದೆ. ಈ ಬಗ್ಗೆ ತಾವು ಗಂಭೀರವಾಗಿ ಪರಿಶೀಲಿಸಿ ಪತ್ರಕರ್ತರಿಗೆ ರಕ್ಷಣೆ ನೀಡುವ ಕ್ರಮ ಕೈಗೊಳ್ಳುವ ಜೊತೆಗೆ ಬೀರಲಿಂಗಪ್ಪ ಅವರಿಗೆ ರಕ್ಷಣೆ ನೀಡಬೇಕು. ಈಗಾಗಲೇ ಈ ವಿಷಯಕ್ಕೆ ಸಂಬಂಧಿಸಿದಂತೆ ತಮಗೆ ದೂರು ನೀಡಲಾಗಿದ್ದು, ಈ ಬಗ್ಗೆ ಪರಿಶೀಲಿಸಿ ಸೂಕ್ತ ಕ್ರಮ ತೆಗೆದುಕೊಳ್ಳಬೇಕು. ಪತ್ರಕರ್ತರ ಮೇಲೆ ಮುಂದೆ ಇಂತಹ ಘಟನೆ ಮರುಕಳಿಸದಂತೆ ದಿಟ್ಟ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಯಾದಗಿರಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಆಗ್ರಹಿಸುತ್ತದೆ ಎಂದು ತಿಳಿಸಿದರು.

ಕಾರ್ಯನಿತರ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ರವಿಂದ್ರ ಕುಲಕರ್ಣಿ, ರಾಜ್ಯ ಸಮಿತಿ ಸದಸ್ಯ ಅನಿಲ್ ದೇಶಪಾಂಡೆ, ವೈಜನಾಥ ಹಿರೇಮಠ ಸೇರಿದಂತೆ ಇನ್ನಿತರ ಪತ್ರಕರ್ತರು ಇದ್ದರು. ಮನವಿ ಸ್ವೀಕರಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಷ ಭಗವಾನ ಸೋನವಣೆ ಸೂಕ್ತ ಕ್ರಮ ಕೈಗೊಳ್ಳುತ್ತೆನೆ. ಪತ್ರಕರ್ತರಿಗೆ ಜಿಲ್ಲೆಯಲ್ಲಿ ಯಾವ ಭಯ ಆತಂಕ ಬೇಡ ಎಂದು ಭರವಸೆ ನೀಡಿದರು.

emedialine

Recent Posts

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

11 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

13 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

19 hours ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

20 hours ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

20 hours ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

1 day ago