ಕಲಬುರಗಿಯಲ್ಲಿ ಮತ್ತೆ ಪ್ರತ್ಯೇಕ ರಾಜ್ಯದ ಕೂಗ್ಗು 20ಕ್ಕೂ ಹೆಚ್ಚು ಹೋರಾಟಗಾರರ ಬಂಧನ

0
212

ಕಲಬುರಗಿ: ಜಿಲ್ಲೆಯಲ್ಲಿ  ಕನ್ನಡ ರಾಜ್ಯೋತ್ಸವ ದಿನದಂದೇ ಪ್ರತ್ಯೇಕ ಕಲ್ಯಾಣ ಕರ್ನಾಟಕ ರಾಜ್ಯದ ಕೂಗ್ಗು ಕೇಳಿಬಂದಿದೆ.

370(J) ವಿಶೇಷ ಸ್ಥಾನಮಾನ ಸಮರ್ಪಕವಾಗಿ ಜಾರಿ ಆಗಿಲ್ಲ. ಯಡಿಯೂರಪ್ಪ ಸರಕಾರ ಕಲ್ಯಾಣ ಕರ್ನಾಟಕ ಮರು ನಾಮಕರಣದ ಬಳಿಕವು ಅಭಿವೃದ್ಧಿಗೆ ಯಾವುದೆ ಒಲವು ತೋರಿತ್ತಿಲ್ಲ ಎಂದು ಆರೋಪಿಸಿದ ಮತ್ತೆ ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ‌ ಸಮಿತಿ ಇಂದು ನಗರದ ಸರ್ದಾರ್ ಪಟೇಲ್ ವೃತ್ತದಲ್ಲಿ ಸಮಿತಿ ಪ್ರತ್ಯೇಕ ಕಲ್ಯಾಣ ರಾಜ್ಯ ಧ್ವಜಾರೋಹಣಕ್ಕೆ ಮುಂದಾಗಿತ್ತು.

Contact Your\'s Advertisement; 9902492681

ಈ ವೇಳೆ ಮುಂಜಾಗ್ರತಾ ಕ್ರಮವಾಗಿ ಧ್ವಜಾರೋಹಣಕ್ಕೆ ಮುಂದಾಗಿದ್ದ  ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ‌ ಸಮಿತಿ ಅಧ್ಯಕ್ಷ ಎಂ.ಎಸ್.ಪಾಟೀಲ್ ನರಿಬೋಳ ಸೇರಿದಂತೆ 20ಕ್ಕೂ ಹೆಚ್ಚು ಸದಸ್ಯರನ್ನು ವಶಕ್ಕೆ ಪಡೆಯಲಾಗಿದೆ.

ನಗರದಲ್ಲಿ ಯಾವುದೇ ಅಹಿತಕರ ಘಟ‌ನೆ ನಡೆಯದಂತೆ ಪೊಲೀಸ್ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here