ಕಲಬುರಗಿ: ಮಾಜಿ ಸಚಿವ ವೈಜನಾಥ ಪಾಟೀಲ ನಿಧನಕ್ಕೆ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಡಾ. ಚಂದ್ರಶೇಖರ ಕಂಬಾರ, ಸಾಹಿತಿ ಸಿದ್ಧಲಿಂಗಯ್ಯ ಕಂಬನಿ ಮಿಡಿದಿದ್ದಾರೆ.
ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಂದು ಬೆಳಗ್ಗೆ ನಿಧನರಾಗಿದ್ಧ ಅವರ ಪಾರ್ಥೀವ ಶರೀರವನ್ನು ಕಲಬುರಗಿಯ ಶಾಂತಿ ನಗರದ ಅವರ ಮನೆಯಲ್ಲಿ ಕೆಲಹೊತ್ತು ಇಡಲಾಗಿತ್ತು. ನಂತರ ಅವರ ಹೋರಾಟ ಆರಂಭಿಸಿದ ಹಿಂದಿ ಪ್ರಚಾರ ಸಭಾ ಆವಣದಲ್ಲಿ ಸಾರ್ವಜನಿಕರ ಅಂತಿಮ ದರ್ಶನಕ್ಕೆ ಇಡಲಾಗಿತ್ತು.
ವಿವಿಧ ಪಕ್ಷದ ಮುಖಂಡರು, ಜನಪ್ರತಿನಿಧಿಗಳು, ಯುವಕರು ಆಗಮಿಸಿ ದರ್ಶನ ಪಡೆದರು.
ಇದೇವೇಳೆಯಲ್ಲಿ ನಾಳೆ ನಡೆಯುವ ಪುಸ್ತಕ ಬಿಡುಗಡೆ ಕಾರ್ಯಕ್ರಮಕ್ಕೆ ಆಗಮಿಸಿದ್ದ ಕಂಬಾರ ಮತ್ತು ಸಿದ್ದಲಿಂಗಯ್ಯ ಆಗಮಿಸಿ ಕಂಬನಿ ಮಿಡಿದರು.
“ವೈಜನಾಥ ಪಾಟೀಲ ಅವರು ಪ್ರಾಮಾಣಿಕ ರಾಜಕಾರಣಿಯಾಗಿದ್ದರು. ಅವರ ಹೋರಾಟದ ಫಲವಾಗಿ ಕಲ್ಯಾಣ ಕರ್ನಾಟಕ ಭಾಗಕ್ಕೆ ಆರ್ಟಿಕಲ್ ೩೭೧ (ಜೆ) ಜಾರಿಗೆ ಬಂದಿತ್ತು.ನಿಷ್ಠುರ ಇದೇವೇಳೆಯಲ್ಲಿ ಅವರೊಬ್ಬ ರಾಜಕಾರಣಿಯಾಗಿದ್ದರು’ ಎಂದು ಅಶೃತರ್ಪಣ ಸಲ್ಲಿಸಿದರು.
ಶಾಸಕರಾದ ಎಂ.ವೈ. ಪಾಟೀಲ, ಸುಭಾಷ್ ಗುತ್ತೇದಾರ, ಬಿ.ಜಿ. ಪಾಟೀಲ, ಮಾಜಿ ಶಾಸಕರಾದ ದೊಡ್ಡಪ್ಪಗೌಡ ಪಾಟೀಲ ನರಿಬೋಳ ಮುಖಂಡರಾದ ಸುಭಾಷ ರಾಠೋಡ, ಬಸವರಾಜ ಇಂಗಿನ್, ವಿಠ್ಠಲ ದೊಡ್ಡಮನಿ, ವಿಜಯಕುಮಾರ ಪಾಟೀಲ ತೇಗಲತಿಪ್ಪಿ, ಶಿವರಂಜನ್ ಸತ್ಯಂಪೇಟೆ, ಪ್ರಭುಲಿಂಗ ಮಹಾಗಾಂವಕರ, ಆರ್.ಜಿ. ಶೆಟಗಾರ, ಸುರೇಶ ಸಜ್ಜನ್ ಇತರರಿದ್ದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…