ಬಿಸಿ ಬಿಸಿ ಸುದ್ದಿ

ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸದಸ್ಯರಾಗಿ ಬಡಿಗೇರ ನೇಮಕ: ಸ್ನೇಹ ಸನ್ಮಾನ ಸಮಾರಂಭ 5 ರಂದು

ಕಲಬುರಗಿ: ಕರ್ನಾಟಕ ಸರ್ಕಾರದಿಂದ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸದಸ್ಯರಾಗಿ ನೇಮಕಗೊಂಡ ರಾಜ್ಯ ಯುವ ಪ್ರಶಸ್ತಿ ಪುರಸ್ಕೃತ ಸುರೇಶ ಡಿ.ಬಡಿಗೇರ್ ಅವರಿಗೆ ಇಲ್ಲಿನ ಸಹೃದಯಿ ಸ್ನೇಹ ಬಳಗದ ವತಿಯಿಂದ ಸ್ನೇಹ ಸನ್ಮಾನ ಸಮಾರಂಭವನ್ನು ನ.೫ ರಂದು ಸಾಯಂಕಾಲ ೪.೩೦ ಕ್ಕೆ ನಗರದ ಸಂಗಮೇಶ್ವರ ಕಾಲೋನಿಯಲ್ಲಿರುವ ಸಂಗಮೇಸ್ವರ ಮಹಿಳಾ ಮಂಡಳದಲ್ಲಿ ಏರ್ಪಡಿಸಲಾಗಿದೆ ಎಂದು ಬಳಗದ ಪ್ರಮುಖರಾದ ವಿಜಯಕುಮಾರ ತೇಗಲತಿಪ್ಪಿ ಹಾಗೂ ಹಣಮಂತರಾಯ ಅಟ್ಟೂರ ತಿಳಿಸಿದ್ದಾರೆ.

ಕಳೆದೆರಡು ದಶಕಗಳಿಂದ ಸಮಾಜಮುಖಿಯಾಗಿ ಕಾರ್ಯನಿರ್ವಹಿಸುತ್ತಿರುವ ಯುವ ಪ್ರಶಸ್ತಿ ಪುರಸ್ಕೃತ ಸುರೇಶ ಬಡಿಗೇರ ಅವರು, ಸಾಹಿತ್ಯ, ಸಂಘಟನೆ, ಪತ್ರಿಕೋದ್ಯಮ, ಹೋರಾಟ ಹೀಗೆ ಅನೇಕ ಕ್ಷೇತ್ರಗಳಲ್ಲಿ ಶ್ರಮಿಸಿದ ಬಹುಮುಖಿ ಪ್ರತಿಭೆಯಾಗಿದ್ದಾರೆ. ಮೂರ್ತಿ ಚಿಕ್ಕದಿದ್ದರೂ ಕೀರ್ತಿ ದೊಡ್ಡದು ಎನ್ನುವ ಹಾಗೇ ಸುರೇಶ ಬಡಿಗೇರ ಅವರು ವಯಸ್ಸಿನಲ್ಲಿ ಸಣ್ಣವರಾದರೂ ಅವರು ಸಮಾಜಕ್ಕಾಗಿ ನೀಡಿದ ಕೊಡುಗೆ ಅಮೋಘವಾದುದು ಎಂದು ಅವರು ವಿವರಿಸಿದ್ದಾರೆ.

ಸಾರಂಗಮಠದ ಜಗದ್ಗುರು ಪೂಜ್ಯ ಡಾ.ಸಾರಂಗಧರ ದೇಶಿಕೇಂದ್ರ ಮಹಾಸ್ವಾಮಿಗಳವರ ದಿವ್ಯ ಸಾನಿಧ್ಯದಲ್ಲಿ ಜರುಗಲಿರುವ ಸಮಾರಂಭಕ್ಕೆ ಮುಖ್ಯ ಅತಿಥಿಗಳಾಗಿ ಶಾಸಕ ದತ್ತಾತ್ರೇಯ ಪಾಟೀಲ ರೇವೂರ, ಅಪರ ಜಿಲ್ಲಾಧಿಕಾರಿ ಡಾ.ಶಂಕರ ವಣಿಕ್ಯಾಳ, ಸಹಾಯಕ ಕೃಷಿ ನಿರ್ದೇಶಕ ಚಂದ್ರಕಾಂತ ಜೀವಣಗಿ, ತಾಪಂ ಮಾಜಿ ಅಧ್ಯಕ್ಷ ಚೆನ್ನಮ್ಮ ಎಸ್.ಸಾಹು ಆಗಮಿಸಲಿದ್ದಾರೆ. ಸಂಗಮೇಶ್ವರ ಮಹಿಳಾ ಮಂಡಳದ ಅಧ್ಯಕ್ಷೆ ವೈಶಾಲಿ ದೇಶಮುಖ ಅಧ್ಯಕ್ಷತೆ ವಹಿಸಲಿದ್ದಾರೆ.

ಕಾರ್ಯಕ್ರಮದ ಯಶಸ್ವಿಗಾಗಿ ರೂಪಿಸಿಕೊಂಡಿರುವ ಸಹೃದಯಿ ಸ್ನೇಹ ಬಳಗದಲ್ಲಿ ಪತ್ರಕರ್ತ ಶಿವರಂಜನ್ ಸತ್ಯಂಪೇಟೆ, ರಾಜಕುಮಾರ ಬಿ.ಉದನೂರ, ನಾಗಲಿಂಗಯ್ಯ ಮಠಪತಿ, ಗುಂಡಣ್ಣ ಡಿಗ್ಗಿ, ಶಂಕರ ಬಿರಾದಾರ, ಎನ್.ಎಸ್.ಹಿರೇಮಠ, ರಮೇಶ ಹಣಕುಣಿ, ರವಿಕುಮಾರ ಶಹಾಪುರಕರ್, ರಾಘವೇಂದ್ರ ಮರತೂರಕರ್, ಸವಿತಾ ನಾಶಿ ಸೇರಿ ಅನೇಕರು ಕಾರ್ಯನಿರ್ವಹಿಸುತ್ತಿದ್ದಾರೆ.

emedialine

Recent Posts

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

13 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

15 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

22 hours ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

22 hours ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

23 hours ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

1 day ago