ಕಲಬುರಗಿ: ಮಾಜಿ ಸಚಿವ ವೈಜನಾಥ್ ಪಾಟೀಲ ಅವರ ನಿಧನ ಕರ್ನಾಟಕ ರಾಜ್ಯಕ್ಕೆ ಅದರಲ್ಲೂ ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ ತುಂಬಲಾರದ ನಷ್ಟ ಉಂಟಾಗಿದೆ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಹಾಗೂ ಶರಣಬಸವ ವಿಶ್ವವಿದ್ಯಾಲಯವು ಸಂತಾಪ ಸೂಚಿಸಿದೆ.
ಶರಣಬಸವ ವಿಶ್ವವಿದ್ಯಾಲಯದ ಕುಲಾಧಿಪತಿಯಾದ ಪೂಜ್ಯ ಡಾ. ಶರಣಬಸವಪ್ಪ ಅಪ್ಪಾ ಅವರ ಜನ್ಮದಿನ ಮತ್ತು ವಿಶ್ವವಿದ್ಯಾಲಯದ ಯೂಥ್ ಫೇಸ್ಟಿವೆಲ್ ಅಂಗವಾಗಿ ಭಾನುವಾರ ಆಯೋಜಿಸಿದ್ದ ಪೂರ್ವಭಾವಿ ಸಿದ್ಧತಾ ಸಭೆಯಲ್ಲಿ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಬಸವರಾಜ ದೇಶಮುಖ ಮಾತನಾಡಿ, ನಮ್ಮ ಸಂಸ್ಥೆಯೊಂದಿಗೆ ಆತ್ಮೀಯವಾದ ಸಂಬಂಧ ಹೊಂದಿದ್ದರು. ಸಚಿವ ವೈಜನಾಥ್ ಪಾಟೀಲರ ಸಾವು ರಾಜಕೀಯ ಕ್ಷೇತ್ರದಲ್ಲಿ ದೊಡ್ಡ ನಷ್ಟವನ್ನು ಉಂಟು ಮಾಡಿದೆ ಎಂದರು.
ವಿಶ್ವವಿದ್ಯಾಲಯದ ಸಮ ಕುಲಪತಿ ಡಾ.ವಿ.ಡಿ.ಮೈತ್ರಿ, ಎನ್.ಎಸ್.ದೇವರಕಲ್, ಕುಲಸಚಿವ ಡಾ. ಅನಿಲಕುಮಾರ ಬಿಡವೆ, ಮೌಲ್ಯಮಾಪನ ಕುಲಸಚಿವ ಡಾ.ಲಿಂಗರಾಜ ಶಾಸ್ತ್ರಿ, ಡೀನ್ ಲಕ್ಷ್ಮಿ ಪಾಟೀಲ ಮತ್ತು ಡಾ. ಬಸವರಾಜ ಮಠಪತಿ ಹಾಗೂ ವಿವಿಧ ವಿಭಾಗದ ಮುಖ್ಯಸ್ಥರು ಅಗಲಿದ ನಾಯಕನಿಗೆ ಗೌರವ ಸಂಕೇತವಾಗಿ ಮೌನಾಚರಣೆ ನಡೆಸಿದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…