ಕಲಬುರಗಿ: ಆರ್ಟಿಕಲ್ 371 ರೂವಾರಿ ಮಾಜಿ ಸಚಿವ ವೈಜನಾಥ ಪಾಟೀಲ ಅವರ ಪಾರ್ಥಿವ ಶರಿರಕ್ಕೆ ಸಂಸದರು, ಶಾಸಕರು, ಮಾಜಿ ಸಚಿವರು, ಮಠಾಧೀಶರು ಸೇರಿದಂತೆ ರಾಜಕೀಯ ಮುಖಂಡರು ಅಂತಿಮ ನಮನ ಸಲ್ಲಿಸಿ ಕಂಬನಿ ಮಿಡಿದರು.
ತಾಲ್ಲೂಕಿನ ಚಿಂಚೋಳಿ ಪಟ್ಟಣದ ಗಂಗಮ್ಮ ಭೀಮಶೆಟ್ಟಿ ಕಲ್ಯಾಣ, ಮಂಟಪದ ಆವರಣದಲ್ಲಿ ಸಾರ್ವಜನಿಕರಿಗಾಗಿ ಅಂತಿಮ ದರ್ಶನಕ್ಕಾಗಿ ಅಗಲಿದ ನಾಯಕ, ಹೋರಾಟಗಾರ ವೈಜನಾಥ ಪಾಟೀಲರ ಅಂತಿಮ ದರ್ಶನ ಪಡೆದರು.
ಕಾಂಗ್ರೆಸ್ ಮುಖಂಡ ಸುಭಾಶ್ ರಾಠೋಡ ನುಡಿನಮನ ಸಲ್ಲಿಸುವ ವೇಳೆ ಕಣ್ಣೀರು ಹಾಕಿದರು. ಹಾರಕೂಡ ಸಂಸ್ಥಾನ ಹಿರೇಮಠದ ಡಾ. ಚನ್ನವೀರ ಶಿವಾಚಾರ್ಯರು, ಕಂಚಾಳ ಕುಂಟಿ ಮಠದ ಕರುಣೇಶ್ವರ ಮಹಾಸ್ವಾಮಿ, ಭರತನೂರು ಮಠದ ಗುರುನಂಜೇಶ್ವರ, ಮಹಾಸ್ವಾಮಿ, ಪಶುಸಂಗೋಪನಾ ಇಲಾಖೆಯ ಸಚಿವ ಹಾಗೂ ಯಾದಗಿರಿ ಉಸ್ತುವಾರಿ ಸಚಿವ ಪ್ರಭು ಚವ್ಹಾಣ, ಸಂಸದರಾದ ಭಗವಂತ ಖೂಬಾ, ಡಾ.ಉಮೇಶ ಜಾಧವ, ಶಾಸಕರಾದ ವೆಂಕಟರೆಡ್ಡಿ ಮುದ್ರಾಳ, ಶರಣಬಸಪ್ಪ ದರ್ಶನಾಪುರ, ಬಸವರಾಜ ಮತ್ತಿಮೂಡ, ಡಾ. ಅವಿನಾಶ ಜಾಧವ, ವಿಧಾನ ಪರಿಷತ್ ಸದಸ್ಯ ತಿಪ್ಪಣಪ್ಪ ಕಮಕನೂರ, ಮಾಜಿ ಸಚಿವರಾದ ಸುನೀಲ್ ವಲ್ಯಾಪೂರೆ, ರೇವುನಾಯಕ ಬೆಳಮಗಿ, ಮುಖಂಡರಾದ ಈಶ್ವರ ಖಂಡ್ರೆ, ಸಂಜೀವನ್ ಯಾಕಾಪೂರ, ಶೈಲೇಂದ್ರ ಬೆಲ್ದಾಳೆ, ಶರಣು ಮೋದಿ, ದೊಡ್ಡಪ್ಪಗೌಡ ಪಾಟೀಲ್ ನರಿಬೊಳ, ಅಲ್ಲಮಪ್ರಭು ಪಾಟೀಲ್, ಶಶೀಲ್‌ನಮೋಶಿ, ಮಲ್ಲಿಕಾರ್ಜುನ ಗಾಜರೆ, ಸೇರಿದಂತೆ ರಾಜಕೀಯ ಮುಖಂಡರು, ವಿವಿಧ ಮಠಗಳ ಮಠಾಧೀಶರು ಅಂತಿಮ ದರ್ಶನ ಪಡೆದು, ಅಂತಿಮ ನಮನ ಸಲ್ಲಿಸಿದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…