ನ. 29, 30 ರಂದು ಅಖಿಲ ಭಾರತ ಮಕ್ಕಳ ಸಾಹಿತ್ಯ ಸಮ್ಮೇಳನ

0
368

ಕಲಬುರಗಿ: ಇದೇ ಮೊದಲ ಬಾರಿಗೆ ನ.೨೯ ಮತ್ತು ೩೦ ರಂದು ಎರಡು ದಿನಗಳ ಕಾಲ ಹಾಸನ ಜಿಲ್ಲಾ ಕ್ರೀಡಾಂಗಣದಲ್ಲಿ ಅಖಿಲ ಭಾರತ ಮಕ್ಕಳ ಸಾಹಿತ್ಯ ಸಮ್ಮೇಳನ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತಿನ ರಾಜ್ಯ ಸಂಘಟನಾ ಕಾರ್ಯದರ್ಶಿ ಹಾಗೂ ಕಲಬುರಗಿ ಜಿಲ್ಲಾಧ್ಯಕ್ಷ ಮಹಿಪಾಲರೆಡ್ಡಿ ಮುನ್ನೂರ್ ತಿಳಿಸಿದ್ದಾರೆ.

ಸಮ್ಮೇಳನದ ಸರ್ವಾಧ್ಯಕ್ಷರು. ಕವಿಗೋಷ್ಠಿ,  ವಿಚಾರಗೋಷ್ಠಿ ಸೇರಿದಂತೆ ಸಮ್ಮೇಳನದ ಎಲ್ಲ ಕಾರ್ಯಕ್ರಮಗಳಿಗೆ  ಮಕ್ಕಳೇ ಸಾರಥ್ಯ ವಹಿಸಲಿದ್ದಾರೆ. ಕಲಾತಂಡಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ, ಮೆರವಣಿಗೆ ನಡೆಯಲಿದೆ. ದೇಶದ ಬೇರೆ ಬೇರೆ ರಾಜ್ಯಗಳಿಂದ ಸುಮಾರು ೩೦ ಸಾವಿರಕ್ಕೂ ಹೆಚ್ಚು ಮಕ್ಕಳು ಸಮ್ಮೇಳನದಲ್ಲಿ ಭಾಗಹಿಸುವ ನಿರೀಕ್ಷೆ ಇದೆ ಎಂದು ಅವರು ಹೇಳಿದ್ದಾರೆ.

Contact Your\'s Advertisement; 9902492681

ನ.೧೦ ರಂದು ಪ್ರತಿಭಾನ್ವಿತ ಮಕ್ಕಳ ಆಯ್ಕೆಮಕ್ಕಳ ಸಾರಥ್ಯದಲ್ಲಿಯೇ ಅಖಿಲ ಭಾರತ ಮಕ್ಕಳ ಸಾಹಿತ್ಯ ಸಮ್ಮೇಳನ ನಡೆಯುವುರಿಂದ ಅದರ ಸರ್ವಾಧ್ಯಕ್ಷರು, ಅಧ್ಯಕ್ಷರು, ವಿವಿಧ ಗೋಷ್ಠಿಗಳಲ್ಲಿ ಮಕ್ಕಳೇ ಭಾಗಹಿಸುವ ಹಿನ್ನೆಲೆಯಲ್ಲಿ ನವೆಂಬರ್ ೧೦ ರಂದು ಹಾಸನದ ಆದಿಚುಂಚನಗಿರಿ ಪದವಿ ಪೂರ್ವ ಕಾಲೇಜಿನಲ್ಲಿ ಆಯ್ಕೆ ಸಭೆ ಏರ್ಪಡಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತಿನ ರಾಜ್ಯ ಸಂಘಟನಾ ಕಾರ್ಯದರ್ಶಿ ಹಾಗೂ ಕಲಬುರಗಿ ಜಿಲ್ಲಾಧ್ಯಕ್ಷ ಮಹಿಪಾಲರೆಡ್ಡಿ ಮುನ್ನೂರ್ ತಿಳಿಸಿದ್ದಾರೆ.

ಮಕ್ಕಳಿಂದಲೇ ಸಂಪೂರ್ಣ ಕಾರ್ಯಕ್ರಮ ನಡೆಯುವುದರಿಂದ ಸರ್ವಾಧ್ಯಕ್ಷರು, ಅಧ್ಯಕ್ಷರು, ಗೋಷ್ಠಿಗಳಲ್ಲಿ ಭಾಗವಹಿಸುವ ಮಕ್ಕಳನ್ನು ಆಯ್ಕೆ ಮಾಡಲಾಗುತ್ತದೆ. ಈಗಾಗಲೇ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ, ತಾಲೂಕುಗಳ ಘಟಕಗಳನ್ನು ರಚಿಸಲಾಗಿದ್ದು, ಕಲಬುರಗಿ ಜಿಲ್ಲೆಯಲ್ಲೂ ಎಲ್ಲಾ  ತಾಲೂಕುಗಳ ಘಟಕಗಳನ್ನು ಮಾಡಲಾಗಿದೆ.

ಕಲಬುರಗಿ ಜಿಲ್ಲೆಯಿಂದ ಎಲ್ಲ ತಾಲೂಕುಗಳಿಂದ ಮಕ್ಕಳನ್ನು ಭಾಗಹಿಸುವಂತೆ ಕೋರಲಾಗಿದ್ದು, ತಾಲೂಕು ಘಟಕಗಳ ಅಧ್ಯಕ್ಷರು ಈ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗಬೇಕೆಂದು ತಿಳಿಸಲಾಗಿದೆ. ಕಲಬುರಗಿ ಜಿಲ್ಲೆಯ ಪ್ರತಿಭಾನ್ವಿತ ಮಕ್ಕಳು ಮತ್ತವರ ಪೋಷಕರು ಸಂಪರ್ಕಿಸುವಂತೆ ಕೋರಲಾಗಿದೆ ಎಂದು ಮಹಿಪಾಲರೆಡ್ಡಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ, ಮೊಬೈಲ್ ಸಂಖ್ಯೆ 78924 68604.

ಕಲ್ಯಾಣ ಕರ್ನಾಟಕ ಭಾಗದ ಎಲ್ಲ ಜಿಲ್ಲೆಗಳ ಪ್ರತಿಭಾನ್ವಿತ ಮಕ್ಕಳು ಇದರ ಸದುಪಯೋಗ ಪಡೆದುಕೊಂಡು ಆಯ್ಕೆಯಲ್ಲಿ ಭಾಗವಹಿಸಬೇಕೆಂದು ಅವರು ಕೋರಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here