ಹೈದರಾಬಾದ್ ಕರ್ನಾಟಕ

ಬಸವ ಕಲ್ಯಾಣದಲ್ಲಿ 40ನೇ ಶರಣ ಕಮ್ಮಟ, ಅನುಭವ ಮಂಟಪ ಉತ್ಸವ ನ.23, 24ರಂದು

ಕಲಬುರಗಿ: ಬೀದರ್ ಜಿಲ್ಲೆಯ ಬಸವಕಲ್ಯಾಣದಲ್ಲಿ ನ.23-24ರಂದು ಅನುಭವ ಮಂಟಪದ ಆವರಣದಲ್ಲಿ ವಿಶ್ವ ಬಸವಧರ್ಮ ಟ್ರಸ್ಟ್ ಅನುಭವ ಮಂಟಪದ ವತಿಯಿಂದ 40ನೇ ಶರಣ ಕಮ್ಮಟ ಹಾಗೂ ಅನುಭವ ಮಂಟಪ ಉತ್ಸವ ನಡೆಯಲಿದೆ ಎಂದು ಭಾಲ್ಕಿ ಹಿರೇಮಠದ ಗುರುಬಸವಪಟ್ಟದ್ದೇವರು ತಿಳಿಸಿದರು.

ಜಾಗತಿಕ ಮಟ್ಟದಲ್ಲಿ ಸಮಾನತೆಗೆ ಆದ ಕ್ರಾಂತಿ ಅದು ಕಲ್ಯಾಣದಲ್ಲಿ ಅಣ್ಣ ಬಸವಣ್ಣನವರ ನೇತೃತ್ವದಲ್ಲಿ ನಡೆದ ವಚನ ಕ್ರಾಂತಿ ಎಂದು ಬಣ್ಣಿಸಿದರು. ಉತ್ಸವ ನಿಮಿತ್ತ 12 ದಿನ ಬಸವಕಲ್ಯಾಣದಲ್ಲಿ ಪ್ರವಚನ ಕಾರ್ಯಕ್ರಮ ನಡೆಯಲಿದೆ. ಮಹಾರಾಷ್ಟ್ರ ದಿಂದ 16ರಿಂದ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದರು.

ಬಸವ ಕಲ್ಯಾಣದಲ್ಲಿ ಅನುಭವ ಮಂಟಪ ನಿರ್ಮಾಣಕ್ಕಾಗಿ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರಕಾರ 50 ಕೋಟಿ ಅನುದಾನ ಒದಗಿಸಿದ್ದು, 20 ಕೋಟಿ ರೂ. ಬಿಡುಗಡೆ ಮಾಡಿದ್ದಾರೆ. ಅನುಭವ ಮಂಟಪ ನಿರ್ಮಾಣಕ್ಕೆ 650 ಕೋಟಿ ರೂ. ಅನುದಾನ ನೀಡುವುದರ ಜೊತೆಗೆ ವರ್ಷದಲ್ಲಿ ಒಂದು ಬಾರಿ ಇದೇ ಅನುಭವ ಮಂಟಪದಲ್ಲಿ ಲೋಕಸಭೆಯ ಅಧಿವೇಶನ ನಡೆಸಬೇಕು.                                  -ಆರ್.ಜಿ. ಶೆಟಗಾರ

ಈ ಎಲ್ಲ ಕಾರ್ಯಕ್ರಮಗಳು ಅನುಭವ ಮಂಟಪ ಅಧ್ಯಕ್ಷರಾದ ಡಾ. ಬಸವಲಿಂಗ ಪಟ್ಟದ್ದೇವರ. ನೇತೃತ್ವದಲ್ಲಿ ನಡೆಯಲಿದೆ ಎಂದು ತಿಳಿಸಿದರು.

ನ. 17ರಂದು ರಾಜ್ಯ ಮಟ್ಟದ ವಚನ ಕಂಠ ಪಾಠ ಸ್ಪರ್ಧೆ ಆಯೋಜಿಸಲಾಗಿದ್ದು, ಬಸವಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಮನವಿ ಮಾಡಿದರು.

ಕಲಬುರಗಿ ಜಿಪಂ ಅಧ್ಯಕ್ಷೆ ಸುವರ್ಣಾ ಹಣಮಂತರಾಯ ಮಲಾಜಿ ಉತ್ಸವದ ಕರಪತ್ರ ಬಿಡುಗಡೆ ಮಾಡುವ ಮೂಲಕ ಪ್ರಚಾರಾಂದೋಲನಕ್ಕೆ ಚಾಲನೆ ನೀಡಿದರು.

ಜಾಗತಿಕ ಲಿಂಗಾಯತ ಮಹಾಸಭಾದ ಜಿಲ್ಲಾಧ್ಯಕ್ಷ ಪ್ರಭುಲಿಂಗ ಮಹಾಗಾಂವಕರ್, ಮಹಾಸಭಾದ ರಾಜ್ಯ ಸಂಚಾಲಕ ರವೀಂದ್ರ ಶಾಬಾದಿ, ಶಿವರಾಜ ನರಶೆಟ್ಟಿ, ಬಸವ ಸಮಿತಿ ಜಿಲ್ಲಾಧ್ಯಕ್ಷೆ ಡಾ. ವಿಲಾಸವತಿ ಖೂಬಾ, ಕರ್ನಾಟಕ ವಚನ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ನಿರೂಪಿಸಿದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಆರ್.ಜಿ. ಶೆಟಗಾರ ವಂದಿಸಿದರು.

ಶಿವರಂಜನ್ ಸತ್ಯಂಪೇಟೆ, ಡಾ. ಕೆ. ಗಿರಿಮಲ್ಲ, ಮಹಾಂತೇಶ ಕಲ್ಬುರ್ಗಿ, ಹಣಂತರಾವ ಪಾಟೀಲ ಕುಸನೂರ, ಬಸವರಾಜ ಮೊರಬದ, ಸತೀಶ ಸಜ್ಜನ್, ಪ್ರಸನ್ನ ವಾಂಜರಖೇಡೆ, ಉದಯಕುಮಾರ ಸಾಲಿ, ಶಿವಾನಂದ ಮಠಪತಿ ಇತರರಿದ್ದರು.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

14 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

23 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

23 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

24 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

2 days ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

2 days ago