ಬಸವಕಲ್ಯಾಣ: ಧರ್ಮಗುರು ಬಸವಣ್ಣನವರ ವಚನಗಳು ವ್ಯಾಪಕವಾಗಿ ಜನಮನಗಳಿಗೆ ತಲುಪಿಸುವ ನಿಟ್ಟಿನಲ್ಲಿ ಮತ್ತು ಪರಿಚಯಕ್ಕಾಗಿ ವಿಶ್ವಬಸವಧರ್ಮ ಟ್ರಸ್ಟ ಅನುಭವ ಮಂಟಪ, ಬಸವಕಲ್ಯಾಣ ವತಿಯಿಂದ ಲಿಂಗೈಕ್ಯ ಸುಶೀಲಾದೇವಿ ಡಾ.ಬಿ.ವಿ.ಪಟೇಲ ಆರನೇ ಸ್ಮರಣೆ ಅಂಗವಾಗಿ ಪೂಜ್ಯ ಡಾ.ಬಸವಲಿಂಗ ಪಟ್ಟದ್ದೇವರ ಮಾರ್ಗದರ್ಶನದಲ್ಲಿ ಬಸವಣ್ಣನವರ ವಚನಗಳ ಕಂಠಪಾಠ ಸ್ಪರ್ಧೆ ಏರ್ಪಡಿಸಲಾಗಿದೆ.
17 ರವಿವಾರ ರಂದು ಬೆಳಿಗ್ಗೆ 10 ಗಂಟೆಗೆ ಬೀದರ ಜಿಲ್ಲೆಯ ಬಸವಕಲ್ಯಾಣದ ಅನುಭವ ಮಂಟಪದಲ್ಲಿ ಈ ಸ್ಪರ್ಧೆ ನಡೆಸಲಾಗುತ್ತದೆ. ಹೆಚ್ಚು ವಚನಗಳು ಕಂಠಪಾಠ ಹೇಳಿ ವಿಜೇತರಾದವರಿಗೆ ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಗುವುದು. ಪ್ರಥಮ ಬಹುಮಾನ ರೂ.ಹತ್ತು ಸಾವಿರ, ದ್ವಿತೀಯ ಬಹುಮಾನ, ಐದು ಸಾವಿರ ಮತ್ತು ತೃತೀಯ ಬಹುಮಾನ ಎರಡು ಸಾವಿರ ನೀಡಲಾಗುವುದು. ಸ್ಪರ್ಧೆಯಲ್ಲಿ ಭಾಗವಹಿಸಿದ ಎಲ್ಲರಿಗೂ ಪ್ರಶಸ್ತಿ ಪತ್ರ ನೀಡಲಾಗುವುದು.
ಸ್ಪರ್ಧೆಯ ನಿಯಮಗಳು:- ಸ್ಪರ್ಧೆಯಲ್ಲಿ ಭಾಗವಹಿಸುವ ಸ್ಪರ್ಧಾಳುಗಳು ದಿನಾಂಕ: ೧೭-೧೧-೨೦೧೯ ರಂದು ಅಥವಾ ಅದಕ್ಕಿಂತ ಮುಂಚಿತವಾಗಿ ತಮ್ಮ ಹೆಸರುಗಳನ್ನು ನೋಂದಾಯಿಸಬೇಕು. ಎಲ್ಲರಿಗೂ ಉಚಿತ ಪ್ರವೇಶ ದೂರದಿಂದ ಆಗಮಿಸುವ ಸ್ಪರ್ಧಾಳುಗಳು ತಮ್ಮ ಹೋಗಿ ಬರುವ ಖರ್ಚು ತಾವೇ ಭರಿಸಬೇಕು. ವಸತಿ ಮತ್ತು ಪ್ರಸಾದ ವ್ಯವಸ್ಥೆ ಉಚಿತವಾಗಿ ಒದಗಿಸಲಾಗುವುದು, ಸ್ಪರ್ಧೆಯಲ್ಲಿ ಭಾಗವಹಿಸುವವರು ಬಸವಣ್ಣನವರ ವಚನಗಳು ಮಾತ್ರ ಹೇಳಬೇಕು. ತಾವು ಹೇಳುವ ವಚನಗಳನ್ನು ದಾಖಲಿಸಿದ ನೋಟ್ಬುಕ್ ಸಿದ್ಧಪಡಿಸಿಕೊಂಡು ಬರಬೇಕು. ವಚನಪೂರ್ತಿಯಾಗಿ ಹೇಳಬೇಕು. ವಚನ ನೆನಪಿಸಿಕೊಳ್ಳಲು ಮಧ್ಯದಲ್ಲಿ ಒಂದು ನಿಮಿಷ ಕಾಲಾವಕಾಶ ಮಾತ್ರ ಇರುತ್ತದೆ. ಹಿಂದಿನ ಸ್ಪರ್ಧೆಗಳಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಗಳಿಸಿದ ವಿಜೇತರರಿಗೆ ಈ ಸ್ಪರ್ಧೆಯಲ್ಲಿ ಭಾಗವಹಿಸಲು ಅವಕಾಶ ಇರುವುದಿಲ್ಲ. ವಯಸ್ಸಿನ ನಿರ್ಬಂಧ ಇರುವುದಿಲ್ಲ. ಕಿರಿಯರಿಂದ ಹಿರಿಯರವರೆಗೆ ಎಲ್ಲರೂ ಭಾಗವಹಿಸುವುದು. ರಾಜ್ಯಮಟ್ಟದ ಸ್ಪರ್ಧೆ ಇದಾಗಿರುವುದರಿಂದ ರಾಜ್ಯದ ಎಲ್ಲಾ ಜಿಲ್ಲೆಯವರು ಸ್ಪರ್ಧೆಯಲ್ಲಿ ಭಾಗವಹಿಸಬಹುದು. ಸ್ಪರ್ಧೆಯಲ್ಲಿ ವಿಜೇತರಾದವರಿಗೆ ದಿ: ೨೪-೧೧-೨೦೧೯ ರವಿವಾರ ರಂದು ಏರ್ಪಡಿಸಿದ ೪೦ನೆಯ ಶರಣ ಕಮ್ಮಟ, ಅನುಭವ ಮಂಟಪ ಉತ್ಸವ ಸಮಾರಂಭದಲ್ಲಿ ಬಹುಮಾನಗಳನ್ನು ವಿತರಿಸಲಾಗುವುದು.
ಹೆಚ್ಚಿನ ವಿವರಗಳಿಗಾಗಿ ಪೂಜ್ಯ ಶ್ರೀ ಶಿವಾನಂದ ಸ್ವಾಮಿಗಳು, ಅನುಭವ ಮಂಟಪ, ಬಸವಕಲ್ಯಾಣ
ಮೊ: 8971948583, 8123913207, 9448586266, 9880768662 anubhavamantapa.kalyana@gmail.com ಸಂಪರ್ಕಿಸಿ ಬಹುದು.
ವಾಡಿ (ಕಲಬುರಗಿ): ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಅವರ ವೃತ್ತದಲ್ಲಿರುವ ಬಾಬಾಸಾಹೇಬರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಸಂವಿಧಾನ ಪೂರ್ವ ಪೀಠಿಕೆ ಓದುವ ಮೂಲಕ…
ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…