ಕಲಬುರಗಿ: ನೂತನ ಆದೇಶದಂತೆ ಅನುದಾನದ ಕೊರತೆಯ ನೆಪವೊಡ್ಡಿ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ವೇತನವನ್ನು ಕಡಿತ ಮಾಡಿರುವುದನ್ನು ವಿರೋಧಿಸಿ ಆಲ್ ಇಂಡಿಯಾ ಡೆಮಾಕ್ರೆಟಿಕ್ ಸ್ಟೂಡೆಂಟ್ಸ್ ಆರ್ಗನೈಸೇಷನ್ ನೇತೃತ್ವದಲ್ಲಿ ಗುರುವಾರ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ವಿದ್ಯಾರ್ಥಿಗಳು ಪ್ರತಿಭಟನಾ ಪ್ರದರ್ಶನ ನಡೆಸಿದರು.
ಸಂಘಟನೆಯ ಜಿಲ್ಲಾಧ್ಯಕ್ಷ ಹಣಮಂತ್ ಎಸ್.ಎಚ್. ಅವರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಈರಣ್ಣ ಇಸಬಾ, ಸ್ನೇಹಾ ಕಟ್ಟಿಮನಿ, ಶಿಲ್ಪಾ ಬಿ.ಕೆ., ಹರೀಶ್, ಪ್ರೀತಿ, ಮಂಜುಳಾ, ಕರ್ಣ ಮುಂತಾದ ನೂರಾರು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಪ್ರತಿಭಟನೆಕಾರರು ನಂತರ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಿ, ರಾಜ್ಯ ಸರ್ಕಾರದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ೨೦೧೯-೨೦೨೦ನೇ ಸಾಲಿನ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ ಈ ಹಿಂದೆ ೨ರಿಂದ ೧೦ನೇ ತರಗತಿಯವರೆಗೆ ಎಲ್ಲ ವಿದ್ಯಾರ್ಥಿಗಳಿಗೂ ದೊರೆಯುತ್ತಿತ್ತು. ಈಗ ಅನುದಾನದ ಕೊರತೆಯ ನೆಪವೊಡ್ಡಿ ಕಡಿತಗೊಳಿಸಲಾಗಿದೆ ಎಂದು ಆಕ್ಷೇಪಿಸಿದರು.
ಮುಂದಿನ ಶೈಕ್ಷಣಿಕ ಸಾಲಿನಿಂದ ಅಲೆಮಾರಿ ಮತ್ತು ಅರೆ ಅಲೆಮಾರಿ ವಿದ್ಯಾರ್ಥಿಗಳನ್ನು ಹೊರತುಪಡಿಸಿ ೮ರಿಂದ ೧೦ನೇ ತರಗತಿ ವಿದ್ಯಾರ್ಥಿಗಳನ್ನು ಅದರಲ್ಲೂ ನವೀಕರಣಗೊಂಡ ವಿದ್ಯಾರ್ಥಿಗಳನ್ನು ಮಾತ್ರ ಪರಿಗಣಿಸಬೇಕೆಂದು ತೀರ್ಮಾನಿಸಲಾಗಿದೆ. ಇದು ಅತ್ಯಂತ ಅಪ್ರಜಾಸತ್ತಾತ್ಮಕ ನಿರ್ಧಾರ. ಅನುದಾನದ ಕೊರತೆ ಇದ್ದರೆ ಅದನ್ನು ಹೆಚ್ಚಿಸಬೇಕೇ ಹೊರತು ವಿದ್ಯಾರ್ಥಿಗಳ ವಿದ್ಯಾರ್ಥಿ ವೇತನ ತಡೆ ಹಿಡಿಯುವುದು ಅಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.
ಸರ್ಕಾರದ ಧೋರಣೆಯು ವಿದ್ಯಾರ್ಥಿಗಳನ್ನು ಶಿಕ್ಷಣದಿಂದ ವಂಚಿತಗೊಳಿಸುತ್ತದೆ. ಕೂಡಲೇ ಸದರಿ ಆದೇಶವನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿದ ಅವರು, ಇಲ್ಲದೇ ಇದ್ದಲ್ಲಿ ಉಗ್ರ ಹೋರಾಟ ರೂಪಿಸಲಾಗುವುದು ಎಂದು ಎಚ್ಚರಿಸಿದರು.
ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…