ಬಿಸಿ ಬಿಸಿ ಸುದ್ದಿ

ಡೆಂಗ್ಯೂ, ಚಿಕನ್‌ಗುನ್ಯಾ ತಡೆಗಟ್ಟಲು ಜಾಗೃತಿ ಮೂಡಿಸಿ: ಜಿಲ್ಲಾಧಿಕಾರಿ ಶರತ್ ಬಿ.

ಕಲಬುರಗಿ: ಜಿಲ್ಲೆಯಲ್ಲಿ ಈಗಾಗಲೆ ಡೆಂಗ್ಯೂ, ಚಿಕನ್‌ಗುನ್ಯಾ ಹತೋಟಿಯಲ್ಲಿದ್ದು, ಮುಂಜಾಗ್ರತ ಕ್ರಮವಾಗಿ ಡೆಂಗ್ಯೂ ಮತ್ತು ಚಿಕನ್‌ಗುನ್ಯಾ ಪ್ರಕರಣ ತಡೆಗಟ್ಟಲು ಅತೀ ಹೆಚ್ಚು ಜನರು ಸೇರುವ ಪ್ರದೇಶಗಳಾದ ಬಸ್ ನಿಲ್ದಾಣ, ರೈಲು ನಿಲ್ದಾಣ, ಶಾಲೆಗಳು ಹಾಗೂ ಗ್ರಾಮೀಣ ಪ್ರದೇಶದ ಪ್ರಮುಖ ಸ್ಥಳಗಳಲ್ಲಿ ಕ್ಯಾಂಪೆನ್ ಮಾಡುವ ಮೂಲಕ ಸ್ವಚ್ಛತೆ ಹಾಗೂ ರೋಗ ತಡೆಗಟ್ಟುವ ಬಗ್ಗೆ ಜಾಗೃತಿ ಮೂಡಿಸಬೇಕು ಎಂದು ಜಿಲ್ಲಾಧಿಕಾರಿ ಬಿ.ಶರತ್ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.

ಗುರುವಾರ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ನಡೆದ ಡೆಂಗ್ಯೂ ಮತ್ತು ಚಿಕೂನ್‌ಗುನ್ಯಾ ರೋಗಗಳ ನಿಯಂತ್ರಣ ಕುರಿತು ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.  ಕಲಬುರಗಿ ನಗರದಲ್ಲಿ ಆರೋಗ್ಯ ಇಲಾಖೆಯು ಮಹಾನಗರ ಪಾಲಿಕೆಯೊಂದಿಗೆ ಜೊತೆಗೂಡಿ ಮುಂಜಾಗ್ರತಾ ಹಾಗೂ ನಿಯಂತ್ರಣದ ಅರಿವು ಕಾರ್ಯಕ್ರಮಗಳನ್ನು ಕೈಗೊಂಡಿರುವ ಕಾರಣ ಜನವರಿಯಿಂದ ಇಲ್ಲಿಯವರೆಗೆ ಯಾವುದೇ ಹೊಸದಾಗಿ ಡೆಂಗ್ಯೂ ಪ್ರಕರಣಗಳಲ್ಲಿ ಸಾವು ಸಂಭವಿಸಿರುವುದಿಲ್ಲ. ಕಳೆದ ಎರಡು ವರ್ಷಕ್ಕೆ ಹೋಲಿಸಿದರೆ ಈ ವರ್ಷ ಡೆಂಗ್ಯೂ ಪ್ರಕರಣಗಳಲ್ಲಿ ಇಳಿಮುಖವಾಗಿದೆ ಎಂದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಮಾಧವರಾವ ಕೆ. ಪಾಟೀಲ್ ಮಾತನಾಡಿ ಸೊಳ್ಳೆಗಳ ಸಾಂದ್ರತೆ ಹೆಚ್ಚು ಕಂಡು ಬಂದಲ್ಲಿ ಹಾಗೂ ಡೆಂಗ್ಯೂ ಪ್ರಕರಣಗಳು ಕಾಣಿಸಿಕೊಂಡ ಪ್ರದೇಶದಲ್ಲಿ ನಿಯಮಿತವಾಗಿ ಫಾಗಿಂಗ್ ಚಟುವಟಿಕೆಗಳನ್ನು ಮಾಡಲಾಗುತ್ತಿದೆ. ಖಾಸಗಿ ಆಸ್ಪತ್ರೆಯ ವೈದರುಗಳಿಗೆ ಈಗಾಗಲೇ ಈ ರೋಗದ ಕುರಿತು ಮಾಹಿತಿಯನ್ನು ನೀಡಲಾಗಿದೆ. ಜಿಲ್ಲಾಸ್ಪತ್ರೆಯಲ್ಲಿ ಡೆಂಗ್ಯೂ ರೋಗಿಗಳಿಗೆ ಪ್ರತ್ಯೇಕ ವಾರ್ಡ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಡೆಂಗ್ಯೂ ಪ್ರಕರಣಗಳನ್ನು ಖಚಿತಪಡಿಸಿಕೊಳ್ಳಲು ನಗರದ ಜಿಲ್ಲಾಸ್ಪತ್ರೆಯಲ್ಲಿ ಡಿಪಿಎಚ್‌ಎಲ್ ಲ್ಯಾಬ್‌ನಲ್ಲಿ ಉಚಿತವಾಗಿ ಟೆಸ್ಟ್ ಮಾಡಿಸಿಕೊಡಲಾಗುತ್ತಿದೆ ಎಂದು ತಿಳಿಸಿದರು.

ಮುಂಜಾಗೃತ ಕ್ರಮ: ಡೆಂಗ್ಯೂ ಜ್ವರವೂ ಈಡೀಸ್ ಎಂಬ ಜಾತಿಯ ಸೋಂಕಿತ ಸೊಳ್ಳೆ ಕಚ್ಚುವುದರಿಂದ ಬರುತ್ತದೆ. ಇದು ಸಾಮಾನ್ಯವಾಗಿ ಮನೆಯ ಹೊರಗಡೆ ಹಾಗೂ ಒಳಗಡೆ ಶೇಖರಿಸಿಟ್ಟ ನೀರು, ಮನೆಯ ಹೊರಗಡೆ ಬಿಸಾಕಿದ ಘನತಾಜ್ಯ ವಸ್ತುಗಳಾದ ತೆಂಗಿನ ಚಿಪ್ಪು, ಪ್ಲಾಸ್ಟಿಕ್ ಕಪ್ಪು ಹಾಗೂ ಇನ್ನಿತರ ಘನ ತ್ಯಾಜ್ಯ ವಸ್ತುಗಳ ನಿಂತ ನೀರಿನಲ್ಲಿ ಮೊಟ್ಟೆ ಇಟ್ಟು ಸೊಳ್ಳೆಗಳು ತಮ್ಮ ಸಂತತಿಯನ್ನು ಬೆಳೆಸುತ್ತವೆ. ಸಾರ್ವಜನಿಕರು ತಮ್ಮ ಮನೆಯ ಸುತ್ತಮುತ್ತನಲ್ಲಿ ಶೇಖರಿಸಿಟ್ಟ ನೀರನ್ನು ವಾರದಲ್ಲಿ ಎರಡು ಬಾರಿ ಖಾಲಿ ಮಾಡಿ ಸ್ವಚ್ಛವಾಗಿ ತೊಳೆದು ಒಣಗಿಸಿ ನೀರಿನ ತೊಟ್ಟಿಗಳನ್ನು ಭದ್ರವಾಗಿ ಮುಚ್ಚಿಡುವುದರಿಂದ ಸೊಳ್ಳೆಯ ಸಂತತಿಯನ್ನು ನಿಯಂತ್ರಿಸಬಹುದಾಗಿದೆ ಎಂದರು.

ಡೆಂಗ್ಯೂ ಜ್ವರದ ಲಕ್ಷಣಗಳು: ಒಂದು ವೇಳೆ ಜ್ವರ ಮೈಕೈ ನೋವು, ಕಣ್ಣಿನ ಹಿಂಭಾಗದಲ್ಲಿ ನೋವು ಹಾಗೂ ಮೈಮೇಲೆ ಕೆಂಪು ಚುಕ್ಕೆಗಳು ಕಾಣುವುದು ಹಾಗೂ ಯಾವುದೇ ತರಹದ ಜ್ವರಗಳು ಕಾಣಿಸಿಕೊಂಡಲ್ಲಿ ಸಮೀಪದ ಸರ್ಕಾರಿ ಆಸ್ಪತ್ರೆಗಳಿಗೆ ಭೇಟಿ ನೀಡಿ ಉಚಿತವಾಗಿ ಚಿಕಿತ್ಸೆ ಪಡೆಯಬಹುದಾಗಿದೆ ಎಂದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ ಪಿ. ರಾಜಾ, ಸಿ.ಸಿ.ಟಿ ಅಧಿಕಾರಿ ಡಾ.ಶರಣಬಸಪ್ಪ ಗಣಜಲಖೇಡ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಶರಣಬಸಪ್ಪ ಭೂಸನೂರ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮಾಧಿಕಾರಿ ಡಾ.ರಾಜಕುಮಾರ, ಜಿಮ್ಸ್ ಸಂಸ್ಥೆಯ ಮಕ್ಕಳ ತಜ್ಞ ಡಾ.ಸಂದೀಪ ಹರಸಣಗಿ, ಜಿಲ್ಲಾ ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ನರಸಿಂಹ ಮೆಂಡನ್ ಸೇರಿದಂತೆ ಮಹಾನಗರ ಪಾಲಿಕೆ ಹಾಗೂ ಇನ್ನಿತರ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.

emedialine

Recent Posts

ಆತ್ಮವಿಶ್ವಾಸವಿದ್ದರೆ ಜೀವನದಲ್ಲಿ ಏನನ್ನಾದರೂ ಸಾಧಿಸಬಹುದು : ಶಂಕರಗೌಡ

ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…

56 mins ago

ಬೌದ್ಧಿಕ ವಿಕಾಸದಿಂದ ತನ್ನತನದ ಶೋಧ

ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…

1 hour ago

ನಿಧನ ವಾರ್ತೆ; ಆನಂದಪ್ಪ ಉಮ್ಮನಗೋಳ್

ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…

3 hours ago

ಸಂಘಸಂಸ್ಥೆಗಳು ಸಮಾಜಕ್ಕೆ ನೀಡಿದ ಕೋಡುಗೆ ಅಪಾರ ಪಾಳಾಶ್ರೀ

ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…

3 hours ago

ಹೊಸ ಹೊಸ ಉದ್ಯೋಗ ಸೃಷ್ಟಿಸಲು HKE ಸಂಸ್ಥೆ ಕಾರ್ಯ ಶ್ಲಾಘನೀಯ

ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…

3 hours ago

ಸ್ವಾಭಿಮಾನದ ಬದುಕಿಗೆ ಸಂಗೀತ ಪೂರಕ

ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…

3 hours ago